ಮತದಾನ: ಬಿಎಲ್‌ಒಗಳಿಗೆ ತರಬೇತಿ


Team Udayavani, Mar 22, 2018, 3:38 PM IST

bid-3.jpg

ಬೀದರ: ಮತಗಟ್ಟೆ ಅಧಿಕಾರಿಗಳು (ಬಿಎಲ್‌ಒ) ಹಾಗೂ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರನ್ನೊಳಗೊಂಡ ಮತಗಟ್ಟೆ ಮಟ್ಟದ ಅರಿವು ಮೂಡಿಸುವ ಗುಂಪಿನ ಸದಸ್ಯರಿಗೆ ಜಿಲ್ಲಾಡಳಿತ ಹಾಗೂ ಸ್ವೀಪ್‌ ಸಮಿತಿ ಆಶ್ರಯದಲ್ಲಿ ಜಿಲ್ಲಾ ರಂಗಮಂದಿರದಲ್ಲಿ ಬುಧವಾರ ಕಾರ್ಯಾಗಾರ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಚುನಾವಣಾ ಮಾಸ್ಟರ್‌ ಟ್ರೇನರ್‌ ಗೌತಮ ಅರಳಿ, ಹೊಸ ಮತದಾರರ ನೋಂದಣಿಗೆ,
ಯುವ ಮತದಾರರು, ಅಂಗಕಲ‌ರು ಸೇರಿದಂತೆ ಎಲ್ಲರೂ ಮತದಾನದಲ್ಲಿ ಭಾಗವಹಿಸುವುದಕ್ಕೆ ತಮ್ಮ ತಮ್ಮ ಮತಗಟ್ಟೆಗಳಲ್ಲಿ ಮತಗಟ್ಟೆ ಮಟ್ಟದ ಅರಿವು ಮೂಡಿಸುವ ಗುಂಪುಗಳು ಮಾಡಬೇಕಾದ ಕಾರ್ಯಗಳು ಮತ್ತು ಮತದಾನ ಖಾತ್ರಿ ಯಂತ್ರ (ವಿವಿಪ್ಯಾಟ್‌)ದ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

18 ವರ್ಷದ ಪ್ರತಿಯೊಬ್ಬರೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ತಮ್ಮ ಮತಗಟ್ಟೆ ವ್ಯಾಪ್ತಿಯ ಪ್ರದೇಶದಲ್ಲಿ ಯಾರಾದರೂ ಇದುವರೆಗೆ ಹೆಸರು ನೋಂದಾಯಿಸಿಕೊಳ್ಳದೇ ಇದ್ದರೆ ಅಂತವರಿಗೆ ಸಂಬಂಧಿಸಿದ ಅರ್ಜಿಯೊಂದನ್ನು ನೀಡಿ ಅವರ ಹೆಸರನ್ನು ಸೇರಿಸಿ, ಸಂವಿಧಾನ ನೀಡಿದ ಮತದಾನದ ಹಕ್ಕು ಚಲಾಯಿಸಲು ಅವರಿಗೆ ತಿಳಿವಳಿಕೆ ನೀಡಬೇಕು. ಜಿಲ್ಲೆಯಲ್ಲಿ ಮಹಿಳಾ ಮತದಾರರ ಸಂಖ್ಯೆ ಕಡಿಮೆ ಇದೆ. ಈ ಸಂಖ್ಯೆ ಹೆಚ್ಚಳಕ್ಕೆ ಆದ್ಯತೆ ಕೊಡಬೇಕು. 18 ವರ್ಷದ ಮಹಿಳೆಯರ ಹೆಸರು ನೋಂದಣಿಗೆ ಮತ್ತು ಅವರೆಲ್ಲರೂ ಮತದಾನದಲ್ಲಿ ಬಾಗಿಯಾಗಲು ನೋಡಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ತಮ್ಮ ಮತಗಟ್ಟೆ ವ್ಯಾಪ್ತಿಯಲ್ಲಿ ಎಷ್ಟು ಸಂಖ್ಯೆಯಲ್ಲಿ ದೃಹಿಕ ಹಾಗೂ ಮಾನಸಿಕವಾಗಿ ದುರ್ಬಲರಾಗಿರುವವರು ಇದ್ದಾರೆ ಎಂಬುದನ್ನು ಗುರುತಿಸಬೇಕು. ಯಾವುದೇ ಕಾರಣಕ್ಕೆ ಅವರು ಕೂಡ ಮತದಾನದ ಹಕ್ಕಿನಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಹೊಸದಾಗಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿದ ಯುವ ಮತದಾರರೆಲ್ಲರೂ ತಪ್ಪದೇ ಮತದಾನ ಮಾಡುವಂತೆ ಈಗಾಗಲೇ ನಾನಾ ಜಾಗೃತಿ ಕಾರ್ಯಕ್ರಮ ರೂಪಿಸಲಾಗಿದೆ. 

ಶಾಲಾ ಮಕ್ಕಳಿಂದ ಸೈಕಲ್‌ ರ್ಯಾಲಿ, ಜಾಥಾ ನಡೆಸಿ ಅರಿವು ಮೂಡಿಸಲಾಗಿದೆ. ಹೊಸ ಮತದಾರರು, ಅಂಗವಿಕಲರಿಂದಲೂ ಕೂಡ ನೂರು ಪ್ರತಿಶತ ಮತದಾನವಾಗುವಂತೆ ತಾವೆಲ್ಲರೂ ಕಾಳಜಿ ವಹಿಸಬೇಕು ಎಂದು ಹೇಳಿದರು.

ಚುನಾವಣೆ ಪಾರದರ್ಶಕವಾಗಿ ನಡೆಯಲಿದೆ. ಈ ದಿಶೆಯಲ್ಲಿ ಹೊಸದಾಗಿ ಮತದಾನ ಖಾತ್ರಿ ಯಂತ್ರಗಳು ಬಂದಿವೆ. ಈ ಬಗ್ಗೆ ಪ್ರತಿಯೊಬ್ಬ ಸಾರ್ವಜನಿಕರಿಗೆ ತಿಳಿವಳಿಕೆ ನೀಡುವುದು ಅತಿ ಅವಶ್ಯವಿದೆ. ಮತಗಟ್ಟೆ ಮಟ್ಟದ ಅರಿವು ಮೂಡಿಸುವ ಗುಂಪಿನ ಎಲ್ಲ ಸದಸ್ಯರು ಈ ನಿಟ್ಟಿನಲ್ಲಿ ಜನತೆಗೆ ಮಾಹಿತಿ ಕೊಡಬೇಕು ಎಂದು ಹೇಳಿದರು. 

ಜಿಪಂ ಸಿಇಒ ಡಾ| ಆರ್‌. ಸೆಲ್ವಮಣಿ ಅವರು ಚುನಾವಣಾ ನೀತಿ ಸಂಹಿತೆ ಬಗ್ಗೆ ವಿವರಿಸಿದರು. ತಹಶೀಲ್ದಾರ ಕೀರ್ತಿ ಚಾಲಕ, ಚುನಾವಣಾ ಮಾಸ್ಟರ್‌ ಟ್ರೇನರ್‌ ರಮೇಶ ಮಠಪತಿ ಇದ್ದರು. 

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.