ನೀರಿನ ಅಭಾವ: ಒಣಗಿದ ಕಲ್ಲಂಗಡಿ

•ಬೆಳೆಗಾರರ ಮೇಲೆ ಬೀರಿದೆ ಪರಿಣಾಮ •ಗಾಯದ ಮೇಲೆ ಬರೆ ಎಳೆದಂತಾಗಿದೆ

Team Udayavani, May 14, 2019, 4:55 PM IST

bidar-tdy-2..

ಬಸವಕಲ್ಯಾಣ: ಕಲ್ಲಂಗಡಿ ಬೆಳೆ ಒಣಗಿರುವುದನ್ನು ತೋಟಗಾರಿಕೆ ವಲಯ ಅಧಿಕಾರಿ ಸಂಗಮನಾಥ ಘಾಳೆ ಪರಿಶೀಲಿಸಿದರು.

ಬಸವಕಲ್ಯಾಣ: ಬೇಸಿಗೆಯಲ್ಲಿ ಕಲ್ಲಂಗಡಿ ಹಾಕಿದರೆ ಕೈ ತುಂಬಾ ಹಣ ಬರುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ರೈತನ ಆಸೆ ಮೇಲೆ ಬರಗಾಲ ತಣ್ಣೀರು ಎರಚುವಂತಾಗಿದೆ. ನೀರಿನ ಕೊರತೆಯಿಂದ ಕಲ್ಲಂಗಡಿ ಬೆಳೆ ಒಣಗಿ ಹೋಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.

ಪ್ರಸಕ್ತ ವರ್ಷದಲ್ಲಿ ಬಹಳ ನಿರೀಕ್ಷೆ ಇಟ್ಟಿಕೊಂಡು ತಾಲೂಕಿನಾದ್ಯಂತ ಒಟ್ಟು 62 ಹೆಕ್ಟೇರ್‌ನಲ್ಲಿ ರೈತರು ಕಲ್ಲಂಗಡಿ ರೋಪಣಿ ಮಾಡಿದ್ದರು. ಇದರಲ್ಲಿ ಕೆಲವರು ಮೊದಲನೇ ಇಳುವರಿ ಪಡೆದುಕೊಂಡಿದ್ದರೆ, ಮತ್ತೆ ಕೆಲವರಿಗೆ ಅಂತರ್ಜಲ ಕುಸಿತದಿಂದ ಶೇ. 20ರಿಂದ 25ರಷ್ಟು ಇಳುವರಿ ಕಡಿಮೆ ಆಗುವುದರ ಜತೆಗೆ ಬೆಳೆ ಮೇಲೆ ಪರಿಣಾಮ ಬೀರಿರುವುದು ರೈತರ ನಿರೀಕ್ಷೆ ಹುಸಿ ಮಾಡಿದೆ.

ಇದರಿಂದ 3ರಿಂದ 4 ಕೆಜಿ ಆಗಬೇಕಾದ ಕಲ್ಲಂಗಡಿ 2 ಅಥವಾ 3 ಕೆಜಿ ಆಗುವಷ್ಟು ಗಾತ್ರದಲ್ಲಿ ಕಲ್ಲಂಗಡಿಗಳು ಹತ್ತಿಕೊಂಡಿವೆ. ಹೀಗಾಗಿ ರೈತರು ಪ್ರತಿ ಹೆಕ್ಟೇರ್‌ಗೆ ಮಾಡಿದ ಖರ್ಚು ತಿರುಗಿ ಬರುತ್ತದೆಯೋ ಅಥವಾ ಇಲ್ಲವೋ ಎಂಬ ಆತಂಕದಲ್ಲಿ ರೈತರಿದ್ದಾರೆ.

ತೋಟದಲ್ಲಿರುವ ಕೊಳವೆ ಬಾವಿ ಮತ್ತು ಬಾವಿಗಳಲ್ಲಿ ನೀರಿನ ಮಟ್ಟ ಕುಸಿತವಾಗಿದ್ದು, ದಿನದಲ್ಲಿ ಒಂದು ಅಥವಾ ಎರಡು ಗಂಟೆ ಮಾತ್ರ ನೀರು ಉಣಿಸಲಾಗುತ್ತಿದೆ. ಇದರಿಂದ ಅಲ್ಲಲ್ಲಿ ಒಂದೊಂದು ಕಲ್ಲಂಗಡಿಗಳು ಕಾಣುತ್ತಿದ್ದು, ನಿರೀಕ್ಷೆಗೆ ತಕ್ಕಂತೆ ಇಳುವರಿ ಬಾರದೆ ಇರುವುದು ರೈತರಿಗೆ ಮುಂದಿನ ದಾರಿ ಕಾಣದಂತಾಗಿದೆ. ನೀರಿನ ಅಭಾವದಿಂದ ಈಗಾಗಲೇ ಕಲ್ಲಂಗಡಿ ಬಳ್ಳಿ ಒಣಗಿ ಹೋಗುತ್ತಿದೆ. ಹೇಗಾದರೂ ಮಾಡಿ ಇನ್ನೂ ಸ್ವಲ್ಪ ದಿನ ಉಳಿಸಿಕೊಂಡರೆ ಇನ್ನೊಂದು ಬೆಳೆ ಪಡೆದುಕೊಳ್ಳಬೇಕು ಎಂದರೆ ನೀರು ಇಲ್ಲದಿರುವುದು ರೈತರಿಗೆ ತಲೆ ನೋವಾಗಿ ಪರಿಣಮಿಸಿದೆ. ಒಟ್ಟಿನಲ್ಲಿ ನೀರಿನ ಅಭಾವದಿಂದ ಕಲ್ಲಂಗಡಿ ಬೆಳೆಗಾರರ ಮೇಲೆ ಪರಿಣಾಮ ಬೀರಿರುವುದು ಮಾತ್ರ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಸದ್ಯದ ಪರಿಸ್ಥಿತಿಯಲ್ಲಿ ನೀರಿನ ಅಭಾವದಿಂದ ಶೇ. 15ರಿಂದ 20ರಷ್ಟು ಇಳುವರಿಯಲ್ಲಿ ಕಡಿಮೆಯಾಗಿದೆ. ಮುಂದಿನ ದಿನಗಳಲ್ಲಿ ಇದೇ ರೀತಿಯಾದರೆ ಮೇಲಧಿಕಾರಿಗಳ ಗಮನಕ್ಕೆ ತಂದು ಅವರು ನೀಡಿವ ಆದೇಶ ಪಾಲಿಸಲಾಗುವುದು.•ಸಂತೋಷ ತಾಂಡೂರ,ಹಿರಿಯ ಸಹಾಯಕ ನಿರ್ದೇಶಕರು, ತೋಟಗಾರಿಕೆ ಇಲಾಖೆ,
ಬಹಳ ನಿರೀಕ್ಷೆ ಇಟ್ಟುಕೊಂಡು ಕ‌ಲ್ಲಂಗಡಿ ಬೆಳೆಸಲಾಗಿತ್ತು. ಆದರೆ ನೀರಿನ ಅಭಾವದಿಂದ ಕೊಳವೆ ಬಾವಿ ಮತ್ತು ಬಾವಿಯಲ್ಲಿನ ನೀರು ದಿನೇ ದಿನೇ ಬತ್ತು ಹೋಗುತ್ತಿದೆ. ಇದರಿಂದ ಕಲ್ಲಂಗಡಿ ಬೆಳೆಸಲು ತುಂಬಾ ಕಷ್ಟುವಾಗುತ್ತಿದೆ.•ಸೂರ್ಯಕಾಂತ ಚಂದು, ಕಲ್ಲಂಗಡಿ ಬೆಳೆಗಾರ ಪರತಾಪುರ
•ವೀರಾರೆಡ್ಡಿ ಆರ್‌.ಎಸ್‌.

ಟಾಪ್ ನ್ಯೂಸ್

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.