ಶಾಶ್ವತ ವರದಾನವಾಗುವುದೇ ನಗರ ಸಾರಿಗೆ ಬಸ್‌?


Team Udayavani, Aug 9, 2018, 11:31 AM IST

bid-3.jpg

ಹುಮನಾಬಾದ: ಪಟ್ಟಣ ಸಂಚಾರಕ್ಕಾಗಿ ನಗರ ಸಾರಿಗೆ ಬಸ್‌ ಸೌಲಭ್ಯ ಕಲ್ಪಿಸಬೇಕು ಎಂಬ ನಾಗರಿಕರ ಹಲವು ದಶಕದ ಬೇಡಿಕೆ ಕಳೆದ ಒಂದು ವಾರದ ಹಿಂದೆಯಷ್ಟೇ ಈಡೇರಿದ್ದು, ಸೇವೆ ಹೀಗೆ ಮುಂದುವರೆಯುತ್ತದೋ ಮಧ್ಯದಲ್ಲೇ ಸ್ಥಗಿತಗೊಳ್ಳುತ್ತದೆಯೋ ಎನ್ನುವ ಪ್ರಶ್ನೆ ಸದ್ಯ ಇಲ್ಲಿನ ಪ್ರಯಾಣಿಕರನ್ನು ಕಾಡುತ್ತಿದೆ. ಗಣಿ, ಭೂ ವಿಜ್ಞಾನ ಮತ್ತು ಮುಜರಾಯಿ ಖಾತೆ ಸಚಿವ ರಾಜಶೇಖರ ಬಿ. ಪಾಟೀಲ ಅವರ ಅವರ ವಿಶೇಷ ಆಸಕ್ತಿಯಿಂದ ಬಸ್‌ ಸೇವೆ ಆರಂಭವಾಗಿದೆ.
 
ಹುಮನಾಬಾದ ನಗರ ಜನಸಂಖ್ಯೆ 2011ರಲ್ಲಿ 36,511 ಇತ್ತು. ಸದ್ಯ ನಗರದ ಜನಸಂಖ್ಯೆ 44,519ಗೆ ಹೆಚ್ಚಿದೆ. ಜನಸಂಖ್ಯೆಗೆ ಅನುಗುಣವಾಗಿ ನಗರ ಸಾಕಷ್ಟು ವಿಸ್ತಾರಗೊಂಡಿದೆ. ಜನಸಂಖ್ಯೆಗೆ ಅನುಗುಣವಾಗಿ ಸಂಚಾರಕ್ಕೆ ಅನುಕೂಲ ಕಲ್ಪಿಸುವ ಉದ್ದೇಶದಿಂದ 2008ರಲ್ಲಿ ಜಿಲ್ಲಾಧಿಕಾರಿ ಹರ್ಷ ಗುಪ್ತ ಅವರ ಅವಧಿಯಲ್ಲಿ ಪ್ರವಾಸಿ ಮಂದಿರದಿಂದ ಕೆಇಬಿ ಬೈಪಾಸ್‌, ವಾಂಜ್ರಯಿಂದ ಡಾ| ಅಂಬೇಡ್ಕರ, ಸರ್ದಾರ್‌ ವಲ್ಲಭಭಾಯಿ ಪಟೇಲ್‌ ವೃತ್ತ, ಬಸವೇಶ್ವರ ವೃತ್ತ ಅಲ್ಲಿಂದ ಶಿವಪುರ ಮಾರ್ಗವಾಗಿ ಸುಭಾಶ್ಚಂದ್ರ ಬೋಸ್‌ ವೃತ್ತದವರೆಗೆ. ಶಿವಾಜಿ ವೃತ್ತದಿಂದ ವೀರಭದ್ರೇಶ್ವರ ದೇವಸ್ಥಾನವರೆಗಿನ ಎಲ್ಲ ಪ್ರಮುಖ ರಸ್ತೆಗಳು ವಿಸ್ತರಣೆಗೊಂಡಿವೆ. ಜತೆಗೆ 2014ರಲ್ಲಿ ಹುಮನಾಬಾದ-ಬೀದರ-ಕಲಬುರಗಿ ಸಂಪರ್ಕ ಕಲ್ಪಿಸುವ ರೈಲು ಸೇವೆ ಸಹ ಆರಂಭಗೊಂಡಿದೆ.

ಅದಕ್ಕೆ ತಕ್ಕಂತೆ ನಗರದಲ್ಲಿ ಅಸ್ತಿತ್ವಕ್ಕೆ ಬಂದಿರುವ ವಿವಿಧ ವಿದ್ಯಾ ಸಂಸ್ಥೆಗಳಿಗೆ ತೆರಳಲು 2ರಿಂದ 5 ಕಿಮೀ ಕ್ರಮಸಬೇಕಾದ ಅನಿವಾರ್ಯತೆ ಇದೆ. ಪಟ್ಟಣದಲ್ಲಿ ರೈಲು ಸೇವೆ ಆರಂಭವಾದಾಗಿನಿಂದ ನಗರ ಸಾರಿಗೆ ಬಸ್‌ ಆರಂಭಿಸುವಂತೆ ಜನರು ಒತ್ತಾಯಿಸಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಶಾಸಕ ರಾಜಶೇಖರ ಬಿ.
ಪಾಟೀಲ 2016ರಲ್ಲಿ ರೈಲು ನಿಲ್ದಾಣ ವರೆಗೆ ಬಸ್‌ ಸೌಲಭ್ಯ ಕಲ್ಪಿಸಿದ್ದರು. 

ಅದಾದ ನಂತರ ಇದೀಗ ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ಬಸ್‌ ಸೌಲಭ್ಯ ಕಲ್ಪಿಸಲು ಮಾಡಿದ ಮನವಿಗೆ ಸ್ಪಂದಿಸಿದ ಸಚಿವ ರಾಜಶೇಖರ ಬಿ. ಪಾಟೀಲ ಅವರು ವಾರದ ಹಿಂದೆಯಷ್ಟೇ ಎರಡು ಹೊಸ ಬಸ್‌ ಸೇವೆ
ಆರಂಭಿಸಿದ್ದಾರೆ. ಹೊಸ್‌ ಬಸ್‌ ಸಂಚಾರದಿಂದ ಸದ್ಯ ಪ್ರಯಾಣಿಕರಿಗೆ ಸಾಕಷ್ಟು ಅನುಕೂಲವಾಗಿದೆ. ಆದರೆ ಮುಂದಿನ ದಿನಗಳಲ್ಲಿ ಸಾರಿಗೆ ಸಂಸ್ಥೆಗೆ ಲಾಭ, ನಷ್ಟದ ಲೆಕ್ಕಚಾರಿ ಹಾಕಿ ಎಲ್ಲಿ ಸೇವೆ ಸ್ಥಗಿತಗೊಳಿಸುವುದೋ ಎಂಬ ಅನುಮಾನ ಸಾರ್ವಜನಿಕರನ್ನು ಕಾಡುತ್ತಿ¨

ನಗರ ಸಾರಿಗೆ ಬಸ್‌ ಸೇವೆ ಆರಂಭಿಸಿರುವುದು ಒಳ್ಳೆ ಬೆಳವಣಿಗೆ. ಗ್ರಾಮೀಣ ಭಾಗದಿಂದ ಬರುವ ಜನರಿಗೆ ವಿಶೇಷ ಅನುಕೂಲ ಆಗಿದೆ. ಸದ್ಯದ ಎರಡು ಬಸ್‌ಗಳ ಜತೆಗೆ ಇನ್ನೆರಡು ಬಸ್‌ ಸೇವೆ ಆರಂಭಿಸಬೇಕು.  ಪ್ರಭುರಾವ್‌ ದಸಪಳ್ಳಿ, ಪ್ರಯಾಣಿಕ  ನಗರ ಸಾರಿಗೆ ಬಸ್‌ ಆರಂಭಿಸಿದ್ದಕ್ಕೆ ಪ್ರಯಾಣಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಸದ್ಯ ಆದಾಯ ಸಹ ಉತ್ತಮವಾಗಿದೆ. ಬೇಡಿಕೆ ಆಧರಿಸಿ ಮುಂದಿನ ದಿನಗಳಲ್ಲಿ ಮೇಲಧಿಕಾರಿಗಳ ಜತೆ ಚರ್ಚಿಸಿ ಹೆಚ್ಚಿನ ಸೌಲಭ್ಯಕ್ಕೆ ಯತ್ನಿಸಲಾಗುವುದು. 
 ಸುರೇಶ ಖಮೀತ್ಕರ್‌, ಘಟಕ ವ್ಯವಸ್ಥಾಪಕರು

„ಶಶಿಕಾಂತ ಕೆ. ಭಗೋಜಿ

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.