ಗವಾಯಿಗಳು ಶತಮಾನದ ಅದ್ಭುತ ಸೃಷ್ಟಿ

Team Udayavani, Mar 13, 2021, 7:34 PM IST

wonderful creation of the century

ಬೀದರ: ಅಂಧ- ಅನಾಥ ಕಲಾವಿದರನ್ನು ಸಲಹುತ್ತಿದ್ದ ಪಂ. ಪಂಚಾಕ್ಷರಿ ಗವಾಯಿಗಳು ಮತ್ತು ಪುಟ್ಟರಾಜ ಗವಾಯಿಗಳು ನಾಡಿನ ಮಹಾನ್‌ ಚೇತನರಾಗಿದ್ದರು. ಅಂಧರ ಹೊಂಬೆಳಕು ಆಗಿದ್ದ ಗವಾಯಿಗಳು 20ನೇ ಶತಮಾನದ ಅದ್ಭುತ ಸೃಷ್ಟಿಯಾಗಿದ್ದಾರೆ ಎಂದು ಗುಲಬರ್ಗಾ ವಿಶ್ವವಿದ್ಯಾಲಯ ಉಪ ಕುಲಪತಿ ಪೊÅ. ದಯಾನಂದ ಅಗಸರ್‌ ಬಣ್ಣಿಸಿದರು.

ನಗರದ ರಂಗ ಮಂದಿರದಲ್ಲಿ ಶುಕ್ರವಾರ ಪಂಚಾಕ್ಷರಿ ಗವಾಯಿ ಸೇವಾ ಸಂಘ ಪಂಚಾಕ್ಷರಿ ಗವಾಯಿಗಳ 76ನೇ ಪುಣ್ಯತಿಥಿ, ಪುಟ್ಟರಾಜ ಕವಿ ಗವಾಯಿಗಳ 10ನೇ ಪುಣ್ಯಸ್ಮರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಸಾಹಿತ್ಯ, ಸಂಗೀತ ಮತ್ತು ನೃತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಗವಾಯಿಗಳ ಸಂಗೀತ ಮತ್ತು ಸಾಹಿತ್ಯದ ಪರಂಪರೆ ಮುನ್ನಡೆಸಿಕೊಂಡು ಹೋಗುತ್ತಿರುವ ಸೇವಾ ಸಂಘದ ಕಾರ್ಯ ಶ್ಲಾಘನೀಯ ಎಂದು ಹೇಳಿದರು.

ಕರ್ನಾಟಕದ ಕಲಾ ಪೋಷಕರು: ಹಿರಿಯ ಸಾಹಿತಿ ಶಂಭುಲಿಂಗ ಕಾಮಣ್ಣ ಮಾತನಾಡಿ, ಪಂ. ಪಂಚಾಕ್ಷರಿ ಗವಾಯಿಗಳು ಮತ್ತು ಪುಟ್ಟರಾಜ ಕವಿಗವಾಯಿಗಳು ಕನ್ನಡದ ಕುಲತಿಲಕರಾಗಿ, ಸಾವಿರಾರು ಸಂಗೀತ ಕಲಾವಿದರನ್ನು ನಿರ್ಮಾಣ ಮಾಡಿ ಅಂಧ-ಅನಾಥರ ಆಶ್ರಿತರಾಗಿದ್ದಾರೆ. ಬಹಿರಂಗದ ಚಕ್ಷು ಇಲ್ಲದಿದ್ದರೂ ಅಂತರಂಗದ ದಿವ್ಯಚಕ್ಷುವಿನಿಂದ ಎಲ್ಲವನ್ನೂ ಬಲ್ಲವರಾಗಿ ಕರ್ನಾಟಕದ ಕಲಾಪೋಷಕರಾಗಿ ಕೆಲಸ ಮಾಡಿದ್ದಾರೆ. ಇಂದು ಅವರ ಪರಂಪರೆ, ಸಂಪ್ರದಾಯವನ್ನು ಪ್ರೊ| ಕಲ್ಮಠ ನೇತೃತ್ವದಲ್ಲಿ ಸೇವಾ ಸಂಘ ಉಳಿಸಿ ಬೆಳೆಸುತ್ತಿರುವುದು ಮಾದರಿ ಕಾರ್ಯ ಎಂದರು.

ಸಂಘದ ಅಧ್ಯಕ್ಷ ಪ್ರೊ| ಎಸ್‌.ವಿ. ಕಲ್ಮಠ ಪ್ರಾಸ್ತಾವಿಕ ಮಾತನಾಡಿ, ಚಿಟಗುಪ್ಪದಲ್ಲಿ ಸುಮಾರು 1985ರಿಂದ ಸಂಗೀತ ನೃತ್ಯ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿತ್ತು. ಆದರೆ, 2002ರಿಂದ ಬೀದರ ನಗರದಲ್ಲಿ ಅರ್ಥಪೂರ್ಣವಾಗಿ ರಾಜ್ಯದ ಬಹುತೇಕ ಜಿಲ್ಲೆಗಳ ಕಲಾವಿದರಿಗೆ ಬೀದರಗೆ ಕರೆಸಿ, ಕಲೆ ಉಳಿಸಿ ಬೆಳೆಸುವ ಕಾರ್ಯ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಪಂಚಾಕ್ಷರಿ ಗವಾಯಿಗಳ ಹಾಗೂ ಪುಟ್ಟರಾಜ ಕವಿಗವಾಯಿಗಳ ಪರಂಪರೆ ಮುನ್ನಡೆಸಿಕೊಂಡು ಬರಲಾಗುತ್ತಿದೆ ಎಂದರು.

ಸಾಧಕರಿಗೆ ಪ್ರಶಸ್ತಿ ಪ್ರದಾನ: ಹಾರಕೂಡ ಶ್ರೀ ಮಠದ ಡಾ| ಚೆನ್ನವೀರ ಶಿವಾಚಾರ್ಯರು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಸಮ್ಮೇಳನದ ಸರ್ವಾಧ್ಯಕ್ಷ ಪಂ. ವೀರಭದ್ರಪ್ಪ ಗಾದಗಿ ಅವರನ್ನು ಸನ್ಮಾನಿಸಲಾಯಿತು. 2021ನೇ ಸಾಲಿನ ಪಂಚಾಕ್ಷರಿ ಪ್ರಶಸ್ತಿಯನ್ನು ಹಿರಿಯ ಕಲಾವಿದ ರಘುನಾಥರಾವ್‌ ಪಾಂಚಾಳ ಅವರಿಗೆ ಹಾಗೂ ಪುಟ್ಟರಾಜ ಪ್ರಶಸ್ತಿಯನ್ನು ಅಂಧ ಕಲಾವಿದರಾದ ಶಿವಸ್ವಾಮಿ ಚೀನಕೇರಾ ಅವರಿಗೆ ನೀಡಿ ಗೌರವಿಸಲಾಯಿತು. ಕೊಪ್ಪಳದ ಬಾಲಕ ವೈಭವ್‌ ರೆಡ್ಡಿ ಅವರ ಪುಟ್ಟರಾಜ ಗವಾಯಿ ಪಾತ್ರದಲ್ಲಿ ಅಭಿನಯ ಗಮನ ಸೆಳೆಯಿತು.

ಈ ವೇಳೆ ಸ್ವಾಗತ ಸಮಿತಿ ಅಧ್ಯಕ್ಷ ಚಂದ್ರಶೇಖರ ಹೆಬ್ಟಾಳೆ, ನಗರಾಭಿವೃದ್ಧಿ ಪ್ರಾ ಧಿಕಾರದ ಅಧ್ಯಕ್ಷ ಬಾಬು ವಾಲಿ, ಧನರಾಜ ಸ್ವಾಮಿ, ಸುರೇಶ ಮಾಶೆಟ್ಟಿ, ಪ್ರೊ| ಬಿ.ಎಸ್‌. ಬಿರಾದಾರ, ಲಕ್ಷ್ಮಣರಾವ್‌ ಆಚಾರ್ಯ, ಎಸ್‌.ಬಿ. ಕುಚಬಾಳ, ಪ್ರೊ| ದೇವೇಂದ್ರ ಕಮಲ, ಡಾ| ರಾಜಕುಮಾರ ಹೆಬ್ಟಾಳೆ, ಬಾಬುರಾವ್‌ ದಾನಿ, ಧರ್ಮವೀರ ಬಿರಾದಾರ, ಪ್ರಕಾಶ ಕನ್ನಾಳೆ, ಪಂಚಾಕ್ಷರಿ ಕಲ್ಮಠ ಮತ್ತು ಡಿ.ಎಸ್‌. ಜೋಶಿ ಇದ್ದರು.

ಟಾಪ್ ನ್ಯೂಸ್

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.