ರಾಂಗ್ ಸೈಡ್ ಚಾಲನೆ ಮಾಡಿ ದ್ವಿಚಕ್ರ ವಾಹನಕ್ಕೆ ಢಿಕ್ಕಿ: ಆರೋಪಿಗೆ 1 ವರ್ಷ ಶಿಕ್ಷೆ
Team Udayavani, Apr 6, 2022, 10:48 AM IST
ಹುಮನಾಬಾದ: ಟಿಪ್ಪರ್ನ್ನು ರಾಂಗ್ ಸೈಡ್ ಚಾಲನೆ ಮಾಡಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಆರೋಪಿಗೆ ಒಂದು ವರ್ಷ ಶಿಕ್ಷೆ ಹಾಗೂ 1500 ರೂ. ದಂಡ ವಿಧಿಸಿ ಹಿರಿಯ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶರಾದ ಸರಸ್ವತಿದೇವಿ ಆದೇಶ ನೀಡಿದ್ದಾರೆ.
ನಿಷ್ಕಾಳಜಿತನದಿಂದ ವಾಹನ ಚಾಲನೆ ಮಾಡಿದ ಆರೋಪಿ ಲಖನರೆಡ್ಡಿ ಮಾಣಿಕರೆಡ್ಡಿ ಎಡ್ಲಾ ಶಿಕ್ಷೆಗೆ ಗುರಿಯಾಗಿದ್ದಾನೆ.
ದಿ. 27-11-2018ರಲ್ಲಿ ರಾಷ್ಟ್ರೀಯ ಹೆದ್ದಾರಿ 65ರ ಹುಡಗಿ ಸೇತುವೆ ಹತ್ತಿರದ ಹುಡಗಿ ನಂದಗಾಂವ ರಸ್ತೆಯಲ್ಲಿ ಟಿಪ್ಪರ್ನ್ನು ರಾಂಗ್ ಸೈಡ್ ಚಾಲನೆ ಮಾಡಿ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ರಾಜೇಶ್ವರ ಮೂಲದ ಶಿವಾನಂದ ಹಡಪದ ಮೃತಪಟ್ಟಿದ್ದನು. ಪ್ರಕರಣದ ಕುರಿತು ಅಂದಿನ ಸಿಪಿಐ ಜೆ.ಎಸ್. ನ್ಯಾಮರಗೌಡರ್ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದು, ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕ ರವಿಕುಮಾರ ಹಣಮಂತ ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ