1859 ಕೋಟಿ ವೆಚ್ಚದಲ್ಲಿ ಜಲಧಾರೆ ಯೋಜನೆ ಸಿದ್ಧ


Team Udayavani, Sep 19, 2020, 7:40 PM IST

1859 ಕೋಟಿ ವೆಚ್ಚದಲ್ಲಿ ಜಲಧಾರೆ ಯೋಜನೆ ಸಿದ್ಧ

ವಿಜಯಪುರ: ಜಿಲ್ಲೆಯ 1045 ಜನವಸತಿ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಜಲಧಾರೆ ವಿಶೇಷ ಯೋಜನಾ ವರದಿ ಸಿದ್ಧಗೊಂಡಿದೆ. 1859.76 ಕೋಟಿ ರೂ. ವೆಚ್ಚದ ಈ ಯೋಜನೆ ಕುರಿತು ಜಿಲ್ಲೆಯ ಎಲ್ಲ ಜನಪ್ರತಿನಿಧಿ ಗಳಿಂದ ಅಭಿಪ್ರಾಯ ಮತ್ತು ಸಲಹೆ ಪಡೆಯಲಾಗುತ್ತಿದೆ ಎಂದು ಜಿಪಂ ಸಿಇಒ ಗೋವಿಂದರೆಡ್ಡಿ ತಿಳಿಸಿದ್ದಾರೆ.

ಶುಕ್ರವಾರ ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್‌ ಸಭೆ, ಜಿಲ್ಲೆಯ ಶಾಸಕರು ಮತ್ತು ಜಿಲ್ಲಾಧಿಕಾರಿಗಳೊಂದಿಗೆ ಜಲಧಾರೆ ಯೋಜನೆ ಅಭಿಪ್ರಾಯ ಸಂಗ್ರಹಣೆಯ ವಿಡಿಯೋ ಸಂವಾದದಲ್ಲಿ ಅವರು ಈ ವಿಷಯ ತಿಳಿಸಿದರು.

ಸದರಿ ಯೋಜನೆಗೆ ಈಗಾಗಲೇ ಸಮಗ್ರ ಯೋಜನಾ ವರದಿ ಸಿದ್ಧಗೊಂಡಿದೆ. ಸಚಿವ ಸಂಪುಟದಲ್ಲಿ ಅನುಮೋದನೆ ಪಡೆಯಬೇಕಿದೆ. ಇದಕ್ಕೂ ಮುನ್ನ ಜಿಲ್ಲೆಯ ಸಚಿವರು, ಶಾಸಕರು, ಸಂಸದರು ಸೇರಿದಂತೆ ಇತರೆ ಜನಪ್ರತಿನಿಧಿಗಳ, ಜಿಲ್ಲಾಧಿಕಾರಿಗಳ ಅಭಿಪ್ರಾಯ, ಸಲಹೆ ಸೂಚನೆ ಪಡೆಯಲಾಗುತ್ತಿದೆ. ನಂತರ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ ವಿವರಿಸಿದರು.

ಜಲಧಾರೆ ಯೋಜನೆಯಡಿ ವಿವಿಧ ಗ್ರಾಮಗಳು ಹಾಗೂ ನಿಗದಿತ ಪಟ್ಟಣಗಳ ವರೆಗೆ ನೀರು ಲಭ್ಯವಾಗಲಿದೆ. ವಿವಿಧ ಗ್ರಾಮಗಳಿಗೆ ಆಂತರಿಕವಾಗಿ ಮನೆ ಮನೆಗಳಿಗೆ ಜಲ ಜೀವನ ಮಿಷನ್‌ ಅಡಿಯಲ್ಲಿ ನಳಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತದೆ ಎಂದರು.

ಆಲಮಟ್ಟಿ ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಸಾಗರ ಹಾಗೂ ನಾರಾಯಣಪುರ ಬಸವಸಾಗರ ಜಲಾಶಯಗಳ ಜಲ ಸಂಪನ್ಮೂಲ ಬಳಸಿಕೊಂಡು ಬೇಸಿಗೆಯಲ್ಲಿ ನೀರಿನ ಕೊರತೆ ನೀಗಲು ಈ ಯೋಜನೆ ರೂಪಿಸಲಾಗಿದೆ. ಸದರಿ ಯೋಜನೆ ಅನುಷ್ಠಾನಗೊಂಡಲ್ಲಿ ವಾರದ ಏಳು ದಿನವೂ ದಿನ 24 ಗಂಟೆ ನೀರು ಪೂರೈಕೆ ಆಗಲಿದೆ. ಜಿಲ್ಲೆಯ ಮೂಲ 5 ತಾಲೂಕುಗಳಾದ ಇಂಡಿ, ಸಿಂದಗಿ, ಬಸವನಬಾಗೇವಾಡಿ, ವಿಜಯಪುರ ಹಾಗೂ ಮುದ್ದೇಬಿಹಾಳ ತಾಲೂಕು ವ್ಯಾಪ್ತಿಯ 1045 ಗ್ರಾಮ, 11 ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯ ಪಟ್ಟಣಗಳಿಗೆ ಕುಡಿಯಲು ಸಮರ್ಪಕ ನೀರು ದೊರೆಯಲಿದೆ ಎಂದರು.

ಸದರಿ ಯೋಜನೆಯಲ್ಲಿ 2052ನೇ ಇಸ್ವಿಯ ಹಂತದಲ್ಲಿನ ಜನಸಂಖ್ಯೆ ಆಧಾರದ ದೂರಗಾಮಿ ಚಿಂತನೆಯಿಂದ ಯೋಜನೆ ರೂಪಿಸಲಾಗಿದೆ. 2011ರ ಜನಗಣತಿ ಅನ್ವಯ 2022ರ ಅವಧಿ ಗೆ 17.77 ಲಕ್ಷ, 2037ರ ಅವ ಧಿಗೆ 20.59 ಲಕ್ಷ ಹಾಗೂ 2052ರ ಅವಧಿಗೆ 23.42 ಲಕ್ಷ ಜನಸಂಖ್ಯೆಗೆ ಅನುಗುಣವಾಗಿ ನೀರು ಪೂರೈಸುವ ಯೋಜನಾ ವರದಿಯನ್ನು ಸ್ತುಪ್‌ ಕನ್ಸಲ್ಟಂಟ್‌ ವತಿಯಿಂದ ಸಿದ್ಧಪಡಿಸಲಾಗಿದೆ. 2022ನೇ ವರ್ಷದಲ್ಲಿ 1.58 ಟಿಎಂಸಿ, 2037 ನೇ ವರ್ಷದಲ್ಲಿ 1.83 ಟಿಎಂಸಿ ಹಾಗೂ 2052ನೇ ವರ್ಷದಲ್ಲಿ 2.08 ಟಿಎಂಸಿ ಅಡಿ ನೀರಿನ ಅಗತ್ಯ ಬೀಳಲಿದೆ ಎಂದು ಯೋಜನೆಯಲ್ಲಿ ಅಳವಡಿಸಲಾಗಿದೆ. ಜಿಲ್ಲೆಯ ಎಲ್ಲ ಗ್ರಾಮಗಳಿಗೆ ಪೈಪ್‌ಲೈನ್‌ ಮೂಲಕ ಮೇಲ್‌ ಜಲ ಸಂಗ್ರಹಗಾರಗಳಿಗೆ (ಒಎಚ್‌ಟಿ) ನೀರು ಪೂರೈಸುವ ಮತ್ತು ನೀರಿನ ಮಿತವ್ಯಯ ಹಾಗೂ ನಿರ್ವಹಣೆಗಾಗಿ ಸ್ಕಾಡಾ ತಾಂತ್ರಿಕತೆ ಅಳವಡಿಸಲಾಗುತ್ತದೆ. ಸ್ತುಪ್‌ ಕನ್ಸಲ್ಟಂಟ್‌ ಸಂಸ್ಥೆ ಯೋಜನೆ ಸಿದ್ಧಪಡಿಸಿದೆ ಎಂದು ಯೋಜನೆ ಅಧಿಕಾರಿಗಳು ವಿವರಿಸಿದರು.

ಈ ಸಂದರ್ಭದಲ್ಲಿ ಶಾಸಕ ಅರುಣ ಶಹಾಪುರ ವಿಡಿಯೋ ಸಂವಾದದ ಮೂಲಕ ಜಿಲ್ಲೆಯ ವಲಸಿಗ ಸಮುದಾಯ ಬಿಟ್ಟು ಹೋಗದಂತೆ ನೋಡಿಕೊಳ್ಳಲು, ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ಅವರು ಅಧಿಕೃಕೃತ ಜನಸಂಖ್ಯೆ ಅಂಕಿಅಂಶ ಸಂಗ್ರಹಣೆಗೆ, ಗ್ರಾÂವಿಟಿ ಮೂಲಕ ನೀರು ಪೂರೈಕೆಯ ಸಾಧಕ ಬಾಧಕಗಳ ಬಗ್ಗೆ ಪರಿಶೀಲಿಸುವಂತೆ ಸಲಹೆ ನೀಡಿದರು. ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಮಾತನಾಡಿ, ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ಪಡೆದು ಯೋಜನೆ ಸಾಧಕ-ಬಾಧಕ ಕುರಿತು ಅಭಿಪ್ರಾಯ ಪಡೆಯಬೇಕು. ಯೋಜನೆ ಜಾರಿಗಾಗಿ ರೈತರ ಸಹಕಾರ, ಭೂಸ್ವಾ ಧೀನ ಪರಿಹಾರ, ಪೈಪ್‌ ಲೈನ್‌ ಅಳವಡಿಕೆ ಸಂದರ್ಭದಲ್ಲಿ ಎದುರಾಗುವ ಸಮಸ್ಯೆಗಳ ಕುರಿತು ಪೂರ್ವಭಾವಿ ಪರಿಶೀಲನೆ ನಡೆಸುವಂತೆ ಹೇಳಿದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.