ರಾಷ್ಟ್ರೀಯ ಸಂಪತ್ತು ಉಳಿಸಲು ಸಲಹೆ


Team Udayavani, Oct 23, 2017, 12:13 PM IST

vij-2.jpg

ಬಸವನಬಾಗೇವಾಡಿ: ರಾಷ್ಟ್ರೀಯ ಸಂಪತ್ತನ್ನು ಉಳಿಸಬೇಕೆಂಬ ಉದ್ದೇಶದಿಂದ ತಾಲೂಕಿನ ಎಲ್ಲ ಗ್ರಾಮೀಣ ಭಾಗದ ರಸ್ತೆಗಳಿಗೆ ಸಂಪರ್ಕ ಕಲ್ಪಿಸಿಕೊಡಲಾಗಿದೆ ಎಂದು ಕರ್ನಾಟಕ ನಗರ ನೀರು ಸರಬುರಾಜು ಮತ್ತು ಒಳಚರಂಡಿ ನಿಗಮ ಮಂಡಳಿ ಅಧ್ಯಕ್ಷ ಶಾಸಕ ಶಿವಾನಂದ ಪಾಟೀಲ ಹೇಳಿದರು.

ರವಿವಾರ ಜಿಪಂ ಅನುದಾನದಲ್ಲಿ ತಾಲೂಕಿನ ಮನಗೂಳಿ-ಬಿಜ್ಜಳ ರಾಜ್ಯ ಹೆದ್ದಾರಿ 61ರಿಂದ ನಂದಿಹಾಳ ಪಿಯು ಗ್ರಾಮದವರೆಗೆ ಕೂಡುವ ರಸ್ತೆ ಸುಧಾರಣೆ ಹಾಗೂ ನಂದಿಹಾಳ ಪಿ.ಯು. ಗ್ರಾಮದಲ್ಲಿ 50 ಲಕ್ಷದಲ್ಲಿ ಸಿಸಿ ರಸ್ತೆ ಹಾಗೂ ಬೊಮ್ಮನಹಳ್ಳಿ ಗ್ರಾಮದಲ್ಲಿ 50 ಲಕ್ಷದಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಡಿಸೇಲ್‌ ಮತ್ತು ಪೆಟ್ರೋಲ್‌ ನಮ್ಮ ದೇಶದಲ್ಲಿ ಉತ್ಪತ್ತಿಯಾಗುವುದಿಲ್ಲ. ಬೇರೆ ದೇಶದಿಂದ ಆಮದು ಮಾಡಿಕೊಂಡು ಉಪಯೋಗಿಸಬೇಕಾಗಿದೆ. ಹೀಗಾಗಿ ಈ ರಾಷ್ಟ್ರೀಯ ಸಂಪತ್ತನ್ನು ಉಳಿಸಿ ಬೆಳೆಸಬೇಕಾಗಿದ್ದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಹೇಳಿದರು. ರಾಷ್ಟ್ರೀಯ ಸಂಪತ್ತನ್ನು ಉಳಿಸಬೇಕೆಂಬ ಉದ್ದೇಶದಿಂದ ತಾಲೂಕಿನ ಎಲ್ಲ ಹಳ್ಳಿಗಳಿಗೂ ಮತ್ತು ಗ್ರಾಮೀಣ ಭಾಗದಿಂದ ಪಟ್ಟಣ ಪ್ರದೇಶಕ್ಕೆ ಬಂದು ಮತ್ತೆ ಬೇರೆ ಹಳ್ಳಿಗೆ ತೆರಳಿದರೆ ಡಿಸೇಲ್‌ ಮತ್ತು ಸಮಯ ವ್ಯರ್ಥವಾಗುವ ಉದ್ದೇಶದಿಂದ ಆಯಾ ಗ್ರಾಮದಿಂದ ಒಳ ರಸ್ತೆಗಳನ್ನು ಮಾಡಲಾಗಿದೆ.

ಡೋಣಿ ಭಾಗದ ಹಳ್ಳಿಗಳಿಗೆ ರಸ್ತೆ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಉಕ್ಕಲಿ ಮತ್ತು ಯಂಭತ್ನಾಳ ಡೋಣಿ ನದಿ ಮಧ್ಯೆ 8 ಕೋಟಿ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣ ಮಾಡಿರುವುದರಿಂದ ಮಾರಕಪ್ಪನಹಳ್ಳಿ, ಬೊಮ್ಮನಹಳ್ಳಿ, ಮನಗೂಳಿ, ಮಸಿಬಿನಾಳ, ಉಕ್ಕಲಿ ಸೇರಿದಂತೆ ಅನೇಕ ಹಳ್ಳಿಗಳಿಗೆ ಈ ಸೇತುವೆಯಿಂದ ಅನೇಕ ರಸ್ತೆಗಳಿಗೆ ಸಂಪರ್ಕ ಕಲ್ಪಿಸಲಾಗಿದೆ ಎಂದು ಹೇಳಿದರು.

ಡೋಣಿ ನದಿ ಭಾಗದ ಸುಮಾರು 40 ಹಳ್ಳಿಗಳಿಗೆ 72 ಕೋಟಿ ಹಣದಲ್ಲಿ ಕೃಷ್ಣಾ ನದಿಯಿಂದ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಯೋಜನೆಯ ಕಾಮಗಾರಿ ಪೂರ್ಣಗೊಂಡಿದ್ದು ಬರುವ ತಿಂಗಳಲ್ಲಿ ಎಲ್ಲ ಹಳ್ಳಿಗಳಿಗೆ ಕೃಷ್ಣಾ ನದಿಯ ನೀರು ಪೂರೈಕೆ ಮಾಡಲಾಗುವುದು. ಇದರ ಜೊತೆಯಲ್ಲೇ ಈ ಭಾಗದ ರೈತರಿಗೆ ಮತ್ತು ಸರ್ವಾಜನಿಕರಿಗೆ ನಿರಂತರ ವಿದ್ಯುತ್‌ ನೀಡುವ ಉದ್ದೇಶದಿಂದ ಉಕ್ಕಲಿ, ರೋಣಿಹಾಳ, ತೆಲಗಿ ಗ್ರಾಮಗಳಲ್ಲಿ 110 ಕೆ.ವಿ. ವಿದ್ಯುತ್‌ ಸ್ಟೇಷನ್‌ ನಿರ್ಮಾಣ ಕಾರ್ಯ ಪ್ರಗತಿಯಲ್ಲಿ ಇದೆ ಎಂದು ಹೇಳಿದರು.

ಇಂಗಳೇಶ್ವರದ ಚನ್ನಬಸವ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ, ಎಪಿಎಂಸಿ ನಿರ್ದೇಶಕ ವಿಶ್ವನಾಥ ಪಾಟೀಲ, ಎ.ಎಂ. ಪಾಟೀಲ, ಉಕ್ಕಲಿ, ಬಸವರಾಜ ಸೋಮಪುರ, ಶಂಕರಗೌಡ ಬಿರಾದಾರ, ಸಂಗಮೇಶ ಓಲೇಕಾರ, ರಾಜುಗೌಡ ಪಾಟೀಲ, ಶಾಂತಪ್ಪ ಬೈಯಿಚಬಾಳ, ಲಕ್ಕಪ್ಪ ಚಿರಚಲಕಲ್ಲ, ಸುಭಾಷ್‌ ಕಲ್ಯಾಣಿ, ಬಾಬುಗೌಡ ಪಾಟೀಲ, ಜಗದೀಶ ತಡಗಲ್ಲ, ತಿಮ್ಮರಾಜಪ್ಪ, ಚಂದ್ರಶೇಖರ ಮ್ಯಾಗೇರಿ, ಚಂದ್ರಶೇಖರಗೌಡ ಪಾಟೀಲ, ಮಹೇಶ ಮುಳವಾಡ, ಕಲ್ಲನಗೌಡ ಪಾಟೀಲ, ರಾಮು ಕವಲಗಿ, ಬಿ.ಎಸ್‌. ಭೋಸ್ಲೆ ಇದ್ದರು.  ಅಶೋಕ ಪಾಟೀಲ ಸ್ವಾಗತಿಸಿದರು. ಶರಣಗೌಡ ಭಾವಿಕಟ್ಟಿ ನಿರೂಪಿಸಿದರು. ರವಿ ಭಾವಿಕಟ್ಟಿ ವಂದಿಸಿದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.