ಅರಳದಿನ್ನಿ ರಸ್ತೆ ದೇವರಿಗೆ ಪ್ರೀತಿ


Team Udayavani, Sep 18, 2020, 7:18 PM IST

Udayavani Kannada Newspaper

ಆಲಮಟ್ಟಿ: ಸ್ಥಳೀಯ ಗ್ರಾಪಂ ಆಡಳಿತ ಮಂಡಳಿಯ ಬೇಜವಾಬ್ದಾರಿಯಿಂದ ಪ್ರಮುಖ ರಸ್ತೆಯಾಗಿರುವ ಅರಳದಿನ್ನಿಯಿಂದ ಆಲಮಟ್ಟಿ ಮಾರುಕಟ್ಟೆಗೆ ಬರುವ ರಸ್ತೆ ಸಂಪೂರ್ಣವಾಗಿ ಕೆಸರುಮಯವಾಗಿದೆ.

ಅರಳದಿನ್ನಿಯಲ್ಲಿರುವ ಕನ್ನಡ ಮಾಧ್ಯಮ ಹಾಗೂ ಉರ್ದು ಮಾಧ್ಯಮದ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಹೋಗುವ ರಸ್ತೆಯು ಇತ್ತೀಚೆಗೆ ಸುರಿದ ಮಳೆಯಿಂದ ಕೆಸರುಮಯವಾಗಿರುವುದಲ್ಲದೇ ನೀರು ಸಹ ರಸ್ತೆಯಲ್ಲಿ ತುಂಬಿದೆ. ಕೋವಿಡ್‌-19ರ ಪರಿಣಾಮದಿಂದ ಶಾಲೆಗೆ ಮಕ್ಕಳು ಬಾರದಿದ್ದರೂ ಶಿಕ್ಷಕರು ವಿದ್ಯಾಗಮ ಶಿಕ್ಷಣ ನೀಡಲು ಮಕ್ಕಳು ಇರುವಲ್ಲಿಗೆ ಹೋಗಿ ಬೋಧಿಸಿನಂತರ ಹಾಜರಾತಿ ಪುಸ್ತಕಕ್ಕೆ ಸಹಿ ಮಾಡಲು ಹಾಗೂ ಇನ್ನುಳಿದ ಸರ್ಕಾರದ ನಿಯಮದಂತೆ ದಾಖಲಾತಿಯನ್ನು ತಯಾರಿಸಲು ಆಗಮಿಸುವ ಶಿಕ್ಷಕರ ಮೈಯೆಲ್ಲಾ ಕೆಸರು ಮಾಡಿಕೊಂಡು ಶಾಲೆಗಳಿಗೆ ತೆರಳುವಂತಾಗಿದೆ.

ಇನ್ನು ನಾಗರಿಕರು ಪ್ರಮುಖವಾಗಿ ಅವಲಂಬಿಸಿರುವ ರಸ್ತೆಯಲ್ಲಿ ನೀರು ನಿಂತು ರಸ್ತೆಯೆಲ್ಲ ಕೆಸರುಮಯವಾಗಿದ್ದರಿಂದ ದೂರವಾದರೂ ಇನ್ನೊಂದು ಮಾರ್ಗದ ಮೂಲಕ ತಮ್ಮ ಮನೆಗಳಿಗೆ ತಲುಪುತ್ತಾರೆ. ಅದೇ ರಸ್ತೆಯ ಮೂಲಕ ತೆರಳಬೇಕಾಗಿರುವ ರೈತರು ಕೆಸರಿನಲ್ಲಿ ಕಾಲು ಜಾರಿ ಬಿದ್ದು ಕಾಲುಗಳಿಗೆ ನೋವು ಮಾಡಿಕೊಂಡಿರುವ ಘಟನೆಗಳೂ ನಡೆದಿವೆ ಎನ್ನುತ್ತಾರೆ ಮಾಧುರಾಯಗೌಡ ಪಾಟೀಲ.

ಸರ್ಕಾರ ಶೈಕ್ಷಣಿಕ ಪ್ರಗತಿಗಾಗಿ ಹಲವಾರು ಯೋಜನೆಗಳನ್ನು ಹಾಕಿಕೊಂಡು ಅನುಷ್ಠಾನಗೊಳಿಸುತ್ತಿದ್ದರೂ ಇಂಥ ಗ್ರಾಪಂ ವ್ಯವಸ್ಥೆಯಿಂದ ಶೈಕ್ಷಣಿಕ ಪ್ರಗತಿ ಕುಂಠಿತವಾಗುವಂತಾಗುತ್ತಿದೆ. ಪ್ರತಿ ಬಾರಿ ಮಳೆಯಾದಾಗಲೊಮ್ಮೆ ಇದೇ ರೀತಿ ತೊಂದರೆಯಾಗುತ್ತಿದೆ ಅಲ್ಲದೇ ಈ ಬಾರಿ ಕಳೆದ ಒಂದು ವಾರದಿಂದಲೂ ರಸ್ತೆಯಲ್ಲಿ ನೀರು ನಿಂತು ಸಂಪೂರ್ಣ ಕೆಸರುಮಯವಾಗಿ ಬೈಕ್‌ಗಳು ತೆರಳದಂತೆ ಜನರಿಗೆ ತೊಂದರೆಯಾಗುತ್ತಿದೆ. ಈ ಕುರಿತು ಸಂಬಂಧಿಸಿದವರೊಂದಿಗೆ ಹಲವಾರು ಬಾರಿ ತಿಳಿಸಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಆದ್ದರಿಂದ ಕೂಡಲೇ ಸಂಬಂಧಿಸಿದ ಇಲಾಖೆಯವರು ರಸ್ತೆ ದುರಸ್ತಿಗೊಳಿಸಬೇಕು.

ಬೇಜವಾಬ್ದಾರಿ ತೋರಿದ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಕೈಗೊಳ್ಳಬೇಕು. ತ್ವರಿತವಾಗಿ ದುರಸ್ತಿಗೊಳಿಸದಿದ್ದರೆ ಗ್ರಾಮಸ್ಥರೊಂದಿಗೆ ಸೇರಿಕೊಂಡು ಪ್ರತಿಭಟನೆ ಮಾಡಲಾಗುವುದು ಎಂದು ಉಮೇಶ ಗಣಿ, ಬಸಪ್ಪ ಮಾದರ, ಪರಸಪ್ಪ ಮಾದರ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ ಗ್ರಾಮ ಘಟಕದ ಅಧ್ಯಕ್ಷ ಹನಮಂತ ಮಾದರ ಎಚ್ಚರಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ

Supreme Court

State-Governor ಕದನ: ಕೇಂದ್ರ ಸರಕಾರಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

6-vijayapura

Vijayapura: ಸ್ಟೇಷನ್ ಬೇಲ್ ನೀಡಲು ಲಂಚ: ಇಬ್ಬರು ಕಾನ್‌ ಸ್ಟೇಬಲ್‌ ಲೋಕಾಯುಕ್ತ ಬಲೆಗೆ

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.