ಆಟೋ ಪಲ್ಟಿ: ಶಿಕ್ಷಕಿಯರಿಗೆ ಗಾಯ
Team Udayavani, Jan 27, 2022, 1:19 PM IST
ವಿಜಯಪುರ: ಗಣರಾಜ್ಯೋತ್ಸವ ಕಾರ್ಯಕ್ರಮ ಮುಗಿಸಿ ಶಾಲೆಯಿಂದ ಮನೆಗೆ ವಾಪಸ್ಸಾಗುತ್ತಿದ್ದಾಗ ಆಟೋ ಪಲ್ಟಿಯಾಗಿ ಮೂವರು ಶಿಕ್ಷಕಿಯರು ಗಾಯಗೊಂಡ ಘಟನೆ ಬುಧವಾರ ನಡೆದಿದೆ.
ತಿಕೋಟಾ ತಾಲೂಕಿನ ಜಾಲಗೇರಿ ಕ್ಲಸ್ಟರ ವ್ಯಾಪ್ತಿಯ ಚಿಗರಾಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುವ ಎಸ್.ಎ. ಕೇರೂರ, ಎಸ್.ಎ. ಗರಸಂಗಿ, ಎಸ್. ಎಂ. ಬನಸೋಡೆ ಅವರು ಇಟ್ಟಂಗಿಹಾಳ ರಸ್ತೆ ಮೂಲಕ ವಿಜಯಪುರಕ್ಕೆ ಆಟೋದಲ್ಲಿ ಮನೆಗೆ ವಾಪಸ್ಸಾಗುತ್ತಿದ್ದರು. ಈ ವೇಳೆ ಎದುರಿನಿಂದ ಬೈಕ್ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿದೆ.
ಗಾಯಾಳುಗಳನ್ನು ವಿಜಯಪುರ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎಸ್. ಹತ್ತಳ್ಳಿ, ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಡಿ. ಮೊಸಲಗಿ, ಶಿಕ್ಷಣ ಸಂಯೋಜಕ ರವೀಂದ್ರ ಚಿಕ್ಕಮಠ, ನೌಕರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಶಡಶ್ಯಾಳ ಇತರರು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಜಯಪುರ : ಆಲಮಟ್ಟಿ ಶಾಸ್ತ್ರಿ ಸಾಗರ ಉದ್ಯಾನ ವೀಕ್ಷಿಸಿದ ರಾಜ್ಯಪಾಲ ಗೆಹ್ಲೋಟ್
ನಾಲತವಾಡ: ಮೂರು ವರ್ಷಗಳಿಗೊಮ್ಮೆ ನಡೆಯುವ ಗ್ರಾಮ ದೇವತೆ ಜಾತ್ರೆಗೆ ಅದ್ಧೂರಿ ಆರಂಭ
ಅಕ್ರಮ ಮಕ್ಕಳ ಸಾಗಾಣಿಕೆ: ವಿಜಯಪುರದ ಸ್ಟಾಪ್ ನರ್ಸ್ ಪೊಲೀಸರ ವಶಕ್ಕೆ
ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ನಿರ್ಲಕ್ಷದಿಂದ ನೆಲದ ಮೇಲೆ ನರಳಾಡಿದ ಗರ್ಭಿಣಿ
ಪಂಚಪೀಠಗಳ ಕೊಡುಗೆ ಅಪಾರ: ರಂಭಾಪುರಿ ಜಗದ್ಗುರು