ಹೆಜ್ಜೇನಿಗೆ ಕಲ್ಲೆಸೆದ ಕಿಡಿಗೇಡಿಗಳು 20ಕ್ಕೂ ಹೆಚ್ಚು ಜನರ ಮೇಲೆ ದಾಳಿ

Team Udayavani, Dec 15, 2019, 5:14 PM IST

ವಿಜಯಪುರ : ಕಿಡಿಗೇಡಿಗಳು ಕಲ್ಲೆಸೆದ ಪರಿಣಾಮ ಹೆಜ್ಜೇನು ದಾಳಿ ನಡೆಸಿ ಮಕ್ಕಳು, ಮಹಿಳೆಯರು ಸೇರಿ 20ಕ್ಕೂ ಹೆಚ್ಚು ಜನ ಗಾಯಗೊಂಡ ಘಟನೆ ಮುದ್ದೇಬಿಹಾಳ ಪಟ್ಟಣದಲ್ಲಿ‌ ನಡೆದಿದೆ .

ಮುದ್ದೇಬಿಹಾಳ ಎಪಿಎಂಸಿ ಪಕ್ಕದಲ್ಲಿರುವ ಸಂತೆ ಬಜಾರನಲ್ಲಿ ರವಿವಾರ ಸಂತೆ ನಡೆಯುತ್ತಿದ್ದ ಸಂದರ್ಭದಲ್ಲಿ ಕಿಡಿಗೇಡಿಗಳು ಕಲ್ಲು ಎಸೆದ ಪರಿಣಾಮ ರೊಚ್ಚಿಗೆದ್ದ ಹೆಜ್ಜೇನು ಹುಳುಗಳು ಸಂತೆಗೆ ಬಂದವರ ಮೇಲೆ ದಾಳಿ ನಡೆಸಿವೆ.

ಹೆಜ್ಜೇನು ದಾಳಿಯಿಂದ ಮಹಿಳೆಯರು, ಮಕ್ಕಳು ಅಸ್ವಸ್ಥರಾಗಿ‌‌ ಕಿರುಚಾಟ ಆರಂಭಿಸಿದಾಗ ಸ್ಥಳಕ್ಕೆ ಧಾವಿಸಿದ ಸ್ಥಳೀಯರು. 7-8 ಜನರನ್ನು ಸ್ಥಳೀಯ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ಕೊಡಿಸಲು ಮುಂದಾಗಿದ್ದಾರೆ.

ಆದರೆ ಹೆಜ್ಜೇನು ದಾಳಿಯಿಂದ ಗಾಯಗೊಂಡವರಿಗೆ ಚಿಕಿತ್ಸೆ ನೀಡಬೇಕಾದ ಕರ್ತವ್ಯದ ಮೇಲಿದ್ದ ಅಧಿಕಾರಿ ಆಸ್ಪತ್ರೆಯಲ್ಲಿ ಇರಲಿಲ್ಲ. ಇದರಿಂದಾಗಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ವಿಷಯ ತಿಳಿದ ರಾತ್ರಿ ಕರ್ತವ್ಯ ಮಾಡಿ ಮನೆಗೆ ತೆರಳಿದ್ದ ವೈದ್ಯ ಡಾ.ಸಂಗಮೇಶ ಪಟ್ಟಣದ ಆಸ್ಪತ್ರೆಗೆ ಆಗಮಿಸಿ ಚಿಕಿತ್ಸೆ ನೀಡಿದ್ದಾರೆ. ಸದ್ಯ ಗಾಯಾಳುಗಳ ಪರಿಸ್ಥಿತಿಯಲ್ಲಿ ಚೇತರಿಕೆ ಕಂಡುಬಂದಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ