Udayavni Special

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವವರೆಗೆ ಹೋರಾಟ: ಯತ್ನಾಳ

Team Udayavani, Sep 27, 2021, 4:13 PM IST

ಯತ್ನಾಳ

ವಿಜಯಪುರ: ಪಂಚಮಸಾಲಿಗೆ ಸಮುದಾಯಕ್ಕೆ ಪ್ರವರ್ಗ 2-ಎ ಮೀಸಲಾತಿ ಸೌಲಭ್ಯ ಸಿಗುವ ವರೆಗೂ ನಮ್ಮ ಸಮಾಜದ ಹೋರಾಟ ಮುಂದುವರೆಯಲಿದೆ ಎಂದು ಬಿಜೆಪಿ ಶಾಸಕ, ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಸೋಮವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯಕ್ಕೆ ಮೀಸಲು ಸೌಲಭ್ಯ ನೀಡುವ ಕುರಿತು ಕ್ರಮ ಕೈಗೊಳ್ಳುವುದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೂರು ತಿಂಗಳ ಕಾಲಾವಕಾಶ ಕೋರಿದ್ದಾರೆ. ಅಲ್ಲದೇ ಮೀಸಲು ಸೌಲಭ್ಯಕ್ಕೆ ಬೇಡಿಕೆ ಇರಿಸಿರುವ ಎಲ್ಲ ಸಮುದಾಯಗಳಿಗೆ ನ್ಯಾಯ ಸಲ್ಲಿಸುವುದಾಗಿ ಹೇಳಿದ್ದಾರೆ. ಆದರೆ ಬೇಡಿಕೆ ಈಡೇರುವವರೆಗೆ ನಮ್ಮ ಹೋರಾಟ ಮುಂದುವರೆಯಲಿದೆ ಎಂದರು.

ಇನ್ನು ನಾನು ಪಂಚಮಸಾಲಿ ಸಮುದಾಯದ ಮೀಸಲು ಹೋರಾಟದ ಮುಂಚೂಣಿಯಲ್ಲಿದ್ದರೂ ಕೇವಲ ನಮ್ಮ ಸಮಾಜಕ್ಕೆ ಮಾತ್ರ ಮೀಸಲಾತಿ ಬೇಕೆಂದು ಪಟ್ಟು ಹಿಡಿದಿಲ್ಲ. ಬದಲಾಗಿ ಹಿಂದುಳಿದ ಇತರೆ ಸಮುದಾಯಗಳಿಗೂ ಮೀಸಲು ಸೌಲಭ್ಯ ಕೊಡುವಂತೆ ಸದನದ ಹೊರಗೆ ಹಾಗೂ ಒಳಗೆ ಹೋರಾಟ ಮಾಡಿದ್ದೇನೆ. ಹೀಗಾಗಿ ಸಾಮಾಜಿಕ ನ್ಯಾಯಕಾಗಿ ಅರ್ಹ ಎಲ್ಲ ಸಮುದಾಯಗಳಿಗೆ ಮೀಸಲು ಸೌಲಭ್ಯ ಸಿಗುವ ವರೆಗೆ ಹೋರಾಟ ಮುಂದುವರೆಸುವುದಾಗಿ ಹೇಳಿದರು.

ಇದನ್ನೂ ಓದಿ:ಕೈಗಾರಿಕಾ ಪ್ರದೇಶದಲ್ಲಿಯೇ ಟೌನ್ ಶಿಪ್ ನಿರ್ಮಾಣಕ್ಕೆ ಚಿಂತನೆ: ಸಚಿವ ನಿರಾಣಿ

ರಾಜ್ಯದಲ್ಲಿ ಶಾಸ್ವತ ಹಿಂದುಳಿದ ಆಯೋಗವಿದ್ದು, ಕಾಲಕಾಲಕ್ಕೆ ಈ ಆಯೋಗ ಮೀಸಲಾತಿ ಪರಿಶೀಲಿಸಿ, ಬದಲಾವಣೆ ಮಾಡುತ್ತದೆ.  ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಹಿಂದುಳಿದಿರುವಿಕೆ ಅವಲೋಕಿಸುತ್ತದೆ. ಅಭಿವೃದ್ಧಿ ಹೊಂದದ ಸಮುದಾಯಗಳಿಗೆ ಮೀಸಲು ಸೌಲಭ್ಯ ನೀಡುವ ಅಗತ್ಯದ ಕುರಿತು ಹಾಗೂ ಅಭಿವೃದ್ಧಿ ಕಂಡಿರುವ ಸಮುದಾಯಗಳನ್ನು ಮೀಸಲಾತಿ ಸೌಲಭ್ಯದಿಂದ ಕೈ ಬಿಡಲು ಸರ್ಕಾರಕ್ಕೆ ಶಿಫಾರಸು ಮಾಡುವ ಅಧಿಕಾರ ಹೊಂದಿದೆ. ನಮ್ಮ ಸಮುದಾಯದ ಮೀಸಲು ಸೌಲಭ್ಯದ ವಿಷಯದಲ್ಲಿ ಆಯೋಗ ನ್ಯಾಯ ಸಮ್ಮತ ನಿರ್ಧಾರಕ್ಕೆ ಬರಲಿದೆ ಎಂಬ ವಿಶ್ವಾಸವಿದೆ ಎಂದರು.

ಟಾಪ್ ನ್ಯೂಸ್

ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಮಾಚಲಾಗಿದೆ, ಅವರಿಗೆ ನ್ಯಾಯ ಒದಗಿಸಬೇಕು; ಶಾ

ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಮಾಚಲಾಗಿದೆ, ಅವರಿಗೆ ನ್ಯಾಯ ಒದಗಿಸಬೇಕು; ಶಾ

ಕ್ಯಾಚ್ ಆಫ್ ದಿ ಸೀಸನ್, ಪವರ್ ಪ್ಲೇಯರ್, ಗೇಮ್ ಚೇಂಜರ್ ಪ್ರಶಸ್ತಿ ಯಾರಿಗೆ? ಇಲ್ಲಿದೆ ಪಟ್ಟಿ

ಕ್ಯಾಚ್ ಆಫ್ ದಿ ಸೀಸನ್, ಪವರ್ ಪ್ಲೇಯರ್, ಗೇಮ್ ಚೇಂಜರ್ ಪ್ರಶಸ್ತಿ ಯಾರಿಗೆ? ಇಲ್ಲಿದೆ ಪಟ್ಟಿ

b-c-nagesh

1 ರಿಂದ 5ರ ವರೆಗೆ ಶಾಲೆ ಆರಂಭಕ್ಕೆ ಸರ್ವ ಸಿದ್ದತೆ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್

20

ಶೆರ್ಲಿನ್ ದೂರು: ರಾಜ್ ಕುಂದ್ರಾ ಹಾಗೂ ಶಿಲ್ಪಾ ಶೆಟ್ಟಿಗೆ ಬಂಧನದ ಭೀತಿ

ಜೋಗ ನೋಡಲು ಸಾವಿರಾರು ಪ್ರವಾಸಿಗರ ಆಗಮನ: ಮೂರು ಕಿ.ಮೀ ಟ್ರಾಫಿಕ್ ಜಾಮ್!

ಜೋಗ ನೋಡಲು ಸಾವಿರಾರು ಪ್ರವಾಸಿಗರ ಆಗಮನ: ಮೂರು ಕಿ.ಮೀ ಟ್ರಾಫಿಕ್ ಜಾಮ್!

ದೀರ್ಘ‌ ಕಾಲದ ಆರೋಗ್ಯ ಸಮಸ್ಯೆ ನಿವಾರಣೆ ಮತ್ತು ಉತ್ತಮ ಆರೋಗ್ಯಕ್ಕಾಗಿ ಶುಂಠಿ

ದೀರ್ಘ‌ ಕಾಲದ ಆರೋಗ್ಯ ಸಮಸ್ಯೆ ನಿವಾರಣೆ ಮತ್ತು ಉತ್ತಮ ಆರೋಗ್ಯಕ್ಕಾಗಿ ಶುಂಠಿ

2022ರಲ್ಲಿ ಸಿಡಬ್ಲ್ಯುಸಿ ಚುನಾವಣೆ; ರಾಹುಲ್ ಗಾಂಧಿಗೆ ಅಧ್ಯಕ್ಷ ಪಟ್ಟ ಸಾಧ್ಯತೆ?

2022ರಲ್ಲಿ ಸಿಡಬ್ಲ್ಯುಸಿ ಚುನಾವಣೆ; ರಾಹುಲ್ ಗಾಂಧಿಗೆ ಅಧ್ಯಕ್ಷ ಪಟ್ಟ ಸಾಧ್ಯತೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21

ಬಿಜೆಪಿಯಿಂದ ಮಾತ್ರ ತಾಂಡಾ ಅಭಿವದ್ಧಿ

14

ಜನ ನನ್ನ ಕೈ ಬಿಡಲ್ಲ: ರಮೇಶ ಭೂಸನೂರ

11

ಭೂಸನೂರ ಪರ ಸಚಿವ ಸಿ.ಸಿ. ಪಾಟೀಲ ಪ್ರಚಾರ

10

ಬಿಜೆಪಿ-ಕಾಂಗ್ರೆಸ್‌ ರಾಜ್ಯದ ಅಭಿವೃದ್ಧಿಗೆ ಮಾರಕ: ನಾಜಿಯಾ

eart

ವಿಜಯಪುರದಲ್ಲಿ ಮತ್ತೆ ಭೂಕಂಪನ : ಜನರಲ್ಲಿ ಹೆಚ್ಚುತ್ತಿರುವ ಆತಂಕ

MUST WATCH

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

ಹೊಸ ಸೇರ್ಪಡೆ

21

ಬಿಜೆಪಿಯಿಂದ ಮಾತ್ರ ತಾಂಡಾ ಅಭಿವದ್ಧಿ

ಚಿಪ್ಪು ಸುಡುವುದರಿಂದ ಕೃಷಿಗೆ ಕಂಟಕ ಪರಿಸರಕ್ಕೆ ಧಕ್ಕೆ

ಚಿಪ್ಪು ಸುಡುವುದರಿಂದ ಕೃಷಿಗೆ ಕಂಟಕ, ಪರಿಸರಕ್ಕೆ ಧಕ್ಕೆ

ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಮಾಚಲಾಗಿದೆ, ಅವರಿಗೆ ನ್ಯಾಯ ಒದಗಿಸಬೇಕು; ಶಾ

ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಮಾಚಲಾಗಿದೆ, ಅವರಿಗೆ ನ್ಯಾಯ ಒದಗಿಸಬೇಕು; ಶಾ

roop

ಅಮಿತ್‌ ಶಾಗೆ ಶಾಸಕಿ ರೂಪಾಲಿ ಭೇಟಿ : ಹಾಲಕ್ಕಿ ಒಕ್ಕಲಿಗರನ್ನು ಎಸ್ಟಿಗೆ ಸೇರಿಸಲು ಮನವಿ

ಕ್ಯಾಚ್ ಆಫ್ ದಿ ಸೀಸನ್, ಪವರ್ ಪ್ಲೇಯರ್, ಗೇಮ್ ಚೇಂಜರ್ ಪ್ರಶಸ್ತಿ ಯಾರಿಗೆ? ಇಲ್ಲಿದೆ ಪಟ್ಟಿ

ಕ್ಯಾಚ್ ಆಫ್ ದಿ ಸೀಸನ್, ಪವರ್ ಪ್ಲೇಯರ್, ಗೇಮ್ ಚೇಂಜರ್ ಪ್ರಶಸ್ತಿ ಯಾರಿಗೆ? ಇಲ್ಲಿದೆ ಪಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.