Cauvery ಸಮಸ್ಯೆ ವಿಷಯದಲ್ಲಿ ಕೇಂದ್ರದಿಂದ ನಿರ್ಲಕ್ಷ್ಯ ನೀತಿ: ಎಚ್.ಕೆ.ಪಾಟೀಲ


Team Udayavani, Oct 31, 2023, 2:47 PM IST

ಕಾವೇರಿ ಸಮಸ್ಯೆ ವಿಷಯದಲ್ಲಿ ಕೇಂದ್ರದಿಂದ ನಿರ್ಲಕ್ಷ್ಯ ನೀತಿ: ಎಚ್.ಕೆ.ಪಾಟೀಲ

ವಿಜಯಪುರ: ಕಾವೇರಿ ವಿಷಯದಲ್ಲಿ ಕೇಂದ್ರ ಸರ್ಕಾರ ಅತ್ಯಂತ ನಿರ್ಲಕ್ಷ್ಯ ನೀತಿ ಅನುಸರಿಸುತ್ತಿದೆ. ಕರ್ನಾಟಕ ರಾಜ್ಯದಲ್ಲಿ ಭೀಕರ ಬರ ಆವರಿಸಿರುವ ವಿಷಯ ತಿಳಿದಿದ್ದರೂ ಕಾವೇರಿ ನದಿ ನೀರು ಹಂಚಿಕೆ ವಿಷಯದಲ್ಲಿ ಕೇಂದ್ರಕ್ಕೆ ಕಾಳಜಿ ಇಲ್ಲವಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಎಚ್.ಕೆ.ಪಾಟೀಲ‌ ಅಸಮಾಧಾನ ವ್ಯಕ್ತಪಡಿಸಿದರು.

ಮಂಗಳವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾವೇರಿ ಜಲ ವಿವಾದ ಬಗೆಹರಿಸುವ ವಿಷಯದಲ್ಲಿ ಕೇಂದ್ರಕ್ಕೆ ಕಳಕಳಿ, ಕಾಳಜಿ, ಆತುರ ಇಲ್ಲವಾಗಿದೆ. ಕರ್ನಾಟಕದಲ್ಲಿ ಮಳೆ ಇಲ್ಲದೇ ಭೀಕರ ಬರ ಆವರಿಸಿದ್ದು, ಕೇಂದ್ರದ ನಿಯಮದಂತೆಯೇ ರಾಜ್ಯದಲ್ಲಿ 215 ಕ್ಕೂ ಹೆಚ್ಚು ತಾಲೂಕುಗಳು ಬರ ಪೀಡಿತ ಎಂದು ಘೋಷಿಸಿಲಾಗಿದೆ. ಕಾವೇರಿ ನದಿಯ ಹರಿವು ಇಲ್ಲವಾಗಿ, ಜಲಾಶಯಗಳಲ್ಲಿ ನೀರಿನ‌ ಪ್ರಮಾಣ ಕಡಿಮೆಯಿದೆ. ಭವಿಷ್ಯದ ದಿನಗಳಲ್ಲಿ ಬೆಂಗಳೂರಿಗೆ ಕುಡಿಯುವ ನೀರಿಗೂ ತತ್ವಾರ ಎದುರಾಗಲಿದೆ. ಕರ್ನಾಟಕದ ಪರಿಸ್ಥಿತಿ ನೀರಿನ ವಿಷಯದಲ್ಲಿ ಗಂಭೀರವಾಗಿದ್ದರೂ ನಿತ್ಯವೂ 2600 ಕ್ಯೂಸೆಕ್ ನೀರು ಹರಿಸುವಂತೆ ಸಿ.ಡಬ್ಲ್ಯೂ.ಆರ್.ಸಿ. ನಿರ್ದೇಶನ ನೀಡುತ್ತಿದೆ. ಇಷ್ಟಾದರೂ ಕೇಂದ್ರ ಗಮನ ಹರಿಸುತ್ತಿಲ್ಲ ಎಂದು ಸಚಿವ ಎಚ್.ಕೆ.ಪಾಟೀಲ ಹರಿಹಾಯ್ದರು.

ಕೂಡಲೇ ಪ್ರಧಾನಿ ಮೋದಿ ಕಾವೇರಿ ನೀರಿನ ವಿಷಯದಲ್ಲಿ ತುರ್ತಾಗಿ ಗಮನಹರಿಸಬೇಕು. ಬರುವ ದಿನಗಳಲ್ಲಿ ಕರ್ನಾಟಕದಲ್ಲಿ ಎದುರಾಗುವ ನೀರಿನ ಗಂಭೀರ ಸಮಸ್ಯೆ ಬಗೆಹರಿಸಲು ತುರ್ತಾಗಿ ಮುಂದಾಗಬೇಕು ಎಂದು ಆಗ್ರಹಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ದೇಶದ ಎಲ್ಲ ರಾಜ್ಯ ಸರ್ಕಾರ ಹಾಗೂ ಜನರು ಜನರು ಕೇಂದ್ರದ ಬಗ್ಗೆ ಭರವಸೆ ಕಳೆದುಕೊಳ್ಳದಂತೆ ಕೇಂದ್ತ ಸರ್ಕಾರ ಜವಾಬ್ದಾರಿ ನಿಭಾಯಿಸಬೇಕು. ಇಲ್ಲವಾದರೆ ಬಹಳ ಸಮಸ್ಯೆ ಎದುರಿಸುವ ಗಂಭೀರತೆ ಎದುರಾಗಲಿದೆ ಎಂದು ಎಚ್ಚರಿಸಿದರು

ತಮಿಳುನಾಡಿಗೆ 2600 ಕ್ಯೂಸೆಕ್ ಕಾವೇರಿ ನದಿ ನೀರು ಹರಿಸುವಂತೆ ಸಿ.ಡಬ್ಲ್ಯೂ.ಆರ್.ಸೊ. ನೀಡಿರುವ ಆದೇಶ ಮರು ಪರಿಶೀಲನೆ ಮಾಡಬೇಕೆಂದು ಮನವಿ ಮಾಡಿದರು.

ಈ ವಿಷಯವಾಗಿ ಕೇಂದ್ರಕ್ಕೆ ನಿಯೋಗ ಕೊಂಡೊಯ್ಯುಯ್ದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ, ಜಲಸಂಪನ್ಮೂಲ‌ ಖಾತೆ ಹೊಂದಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಪ್ರಯತ್ನಿಸಿದರೂ ಪ್ರಧಾನಿ ಅವಕಾಶ ನೀಡುತ್ತಿಲ್ಲ ಎಂದು ದೂರಿದರು.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗುವ ವಿಷಯದಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ವಿರೋಧ ಪಕ್ಷಗಳ ಆರೋಪ ಅರ್ಥಹೀನ. ಪ್ರಧಾನಿ ಅವರನ್ನು ಭೇಟಿಯಾಗಲು ಅವಕಾಶ ನೀಡಿದರೂ ನಮ್ಮ ಮುಖ್ಯಮಂತ್ರಿ, ಸಚಿವರು ಹೋಗದಿದ್ದರೆ ವಿಫಲ ಎನ್ನಬಹುದು. ಆದರೆ ಪ್ರಧಾನಿ ನರೇಂದ್ರ ಮೋದಿ ಅವರೇ ತಮ್ಮ ಭೇಟಿಗೆ ಅವಕಾಶ ನೀಡುತ್ತಿಲ್ಲ. ಇಂಥ ಸ್ಥಿತಿಯಲ್ಲಿ‌ ಕರ್ನಾಟಕ ರಾಜ್ಯದ ಬಿಜೆಪಿ 25 ಸಂಸದರು ಏನು ಮಾಡುತ್ತಿದ್ದಾರೆ. ರಾಜ್ಯದ ಸಂಸದರೇ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ವಾಸ್ತವಿಕ ಸಮಸ್ಯೆ ಮನವರಿಕೆ ಮಾಡಿಕೊಡಲು ಮುಂದಾಗಬೇಕಿತ್ತು. ರಾಜ್ಯದಲ್ಲಿ ಭೀಕರ ಬರ ಎಂದು ಘೋಷಿಸಿದ ಬಳಿಕವೂ 2600 ಕ್ಯೂಸೆಕ್ ನೀರು ಬಿಡುವಂತೆ ಆದೇಶ ಮಾಡಿದ್ದು ಸರಿಯಲ್ಲ ಎಂದು ಕೇಂದ್ರಕ್ಕೆ ತಿಳಿಸಿ ಹೇಳಲು ಸಾಧ್ಯವಾಗಲಿಲ್ಲ ಏಕೆ ಎಂದು ಪ್ರಶ್ನಿಸಿದರು.

ಮಹಾದಾಯಿ ಯೋಜನೆ ಕಾಮಗಾರಿಗೆ ಕೇಂದ್ರಕ್ಕೆ ಸರಿಯಾದ ದಾಖಲೆಗಳನ್ನು ರಾಜ್ಯ ಸರ್ಕಾರ ನೀಡಿಲ್ಲ ಎಂಬ ಆರೋಪವೂ ಅರ್ಥಹೀನ. ನಾವು ಇಂಥ ದಾಖಲೆ ಕೊಟ್ಟಿಲ್ಲ ಎಂದು ಕೇಂದ್ರ ಸರ್ಕಾರವೇನು ಕೇಳಿದೆಯೆ? ಮಹದಾಯಿ ಯೋಜನೆ ಘೋಷಣೆ ಮಾಡುವುದಕ್ಕೆ ಇವರಿಗೆ ಏನು ತೊಂದರೆ ಎಂದು ಹರಿಹಾಯ್ದರು.

ಟಾಪ್ ನ್ಯೂಸ್

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.