ಚೌಡಯ್ಯ ವಚನಗಳಲಿದೆ ಸಾಮಾಜಿಕ ಕಳಕಳಿ


Team Udayavani, Jan 22, 2018, 3:24 PM IST

vij-7.jpg

ವಿಜಯಪುರ: ಸಮಾಜ ಸುಧಾರಣೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಮಹಾಪುರುಷರ ಸ್ಮರಣೆ ನಮ್ಮ ಕರ್ತವ್ಯ.
ಜಾತಿ-ಮತ, ಬೇಧ ಎನ್ನದೆ ಸ್ವಸ್ಥ ಸಮಾಜದ ನಿರ್ಮಾಣಕ್ಕೆ ದುಡಿದ ಶರಣರ ಮಾರ್ಗದರ್ಶನದಲ್ಲಿ ನಡೆಯುವ ಮೂಲಕ ಅವರ ಸಂದೇಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಜಿಪಂ ಅಧ್ಯಕ್ಷೆ ನೀಲಮ್ಮ ಮೇಟಿ ಹೇಳಿದರು.

ರವಿವಾರ ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ಕನ್ನಡ ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ನಿಜ ಶರಣ ಅಂಬಿಗರ ಚೌಡಯ್ಯನವರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಮಾಜ ಸುಧಾರಕ ಮಹಾನ್‌ ಪುರುಷರ ಜನ್ಮದಿನಾಚರಣೆಗಳು ತಳ ಸಮುದಾಯಗಳನ್ನು ಮೇಲೆತ್ತಲು ಸಹಕಾರಿಯಾಗಿವೆ ಎಂದರು.

ಅಂಬಿಗ ಸಮಾಜ ಪ್ರಗತಿ ಹೊಂದಲು ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಸಮಾಜದವರು ಶೈಕ್ಷಣಿಕವಾಗಿ,
ಸಾಮಾಜಿಕವಾಗಿ ಮುಂದುವರಿಯಲು ಸುಶೀಕ್ಷಿತರಾಗಬೇಕು. ಪ್ರತಿಯೊಬ್ಬರು ತಮ್ಮ ಸಮುದಾಯವನ್ನು ಪೂಜಿಸಬೇಕು. ಇದರೊಂದಿಗೆ ಉಳಿದ ಸಮುದಾಯವನ್ನು ಗೌರವಿಸುವುದು ಮಾನವನ ಧರ್ಮ.

ಇಂದು ಸಮಾಜದಲ್ಲಿ ಹಿರಿಯರು ಹಾಕಿಕೊಟ್ಟ ಅಡಿಪಾಯ, ಶರಣರ, ಸಂತರ ನುಡಿದ ವಚನ ಪಾಲಿಸುವಲ್ಲಿ ವಿಫಲವಾಗಿದ್ದೇವೆ. ಸಮಾಜದಲ್ಲಿ ಶಾಂತಿ ನೆಮ್ಮದಿಯ ಜೀವನಕ್ಕೆ ಹಿರಿಯರು ಮಾರ್ಗದರ್ಶನ ಮಾಡಬೇಕು. ಕಿರಿಯರು ಹಿರಿಯರ ಮಾರ್ಗದರ್ಶನದಂತೆ ನಡೆಯಬೇಕು ಎಂದು ಕಿವಿಮಾತು ಹೇಳಿದರು.

ಸಾಹಿತಿ ಸಂಗಮೇಶ ಬದಾಮಿ ಉಪನ್ಯಾಸ ನೀಡಿ, ನಿಜಶರಣ ಅಂಬಿಗರ ಚೌಡಯ್ಯನವರು ಭವಸಾಗರ ದಾಟಿಸುವ ನಿಷ್ಟೂರ ವಚನಕಾರನಾಗಿದ್ದ. ಏಕದೇವೋಪಾಸನೆಯಲ್ಲಿ ಪರಮ ನಿಷ್ಠೆ. ಕೆಳವರ್ಗದ ಜನರ ನೋವು-ನಲಿವುಗಳನ್ನು ಅನುಭವಿಸಿದ ಮಹಾನುಭಾವಿ. ಆಚಾರ ಹೇಳುತ್ತ ನಡೆ-ನುಡಿ ಒಂದಾಗದವರ ವಿರುದ್ಧ ಅವನು ಛಾಟಿಯೇಟು ಅವರ ವಚನಗಳುದ್ದಕ್ಕೂ ತಾತ್ವಿಕತೆಗಿಂತ ನೈತಿಕತೆ ಮತ್ತು ಸಾಮಾಜಿಕ ಕಳಕಳಿ ಎದ್ದು ಕಾಣುತ್ತಿತ್ತು. ಪರಮಾತ್ಮನ ನಿಲುವು ಏನೆಂಬುವುದನ್ನು ಹೇಗೆಂಬುದನ್ನು ಚೌಡಯ್ಯ ತನ್ನ ವಚನಗಳಲ್ಲಿ ಸ್ಪಷ್ಟಪಡಿದ್ದಾರೆ. ಕೆಳ ವರ್ಗದಲ್ಲಿ ಜನಿಸಿದ ಅಂಬಿಗರ ಚೌಡುಯ್ಯ ಶರಣ ಸಮುದಾಯದಲ್ಲಿಯೇ ವಿಶಿಷ್ಟ ವ್ಯಕ್ತಿತ್ವವುಳ್ಳವವರು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಆಜಾದ ಪಟೇಲ್‌ ಮಾತನಾಡಿ, ಸಮಾಜದಲ್ಲಿ ಅನ್ಯೋನ್ಯವಾಗಿ ಬದುಕಲು ಮಹಾನ್‌ ಪುರುಷರು ಹಾಕಿಕೊಟ್ಟ ಮಾರ್ಗದಲ್ಲಿ ಮುನ್ನಡೆಯಬೇಕು. ಇಂದು ಸಮಾಜ ಒಡೆದು ಆಳುವ ಭಾವನೆ ನಮ್ಮಲ್ಲಿ ಬೆಳೆದು ಬಂದಿದೆ. ಅದನ್ನು ಮರೆತು ಸಹಬಾಳ್ವೆಯಿಂದ ಎಲ್ಲರೂ ಒಗ್ಗಟ್ಟಾಗಿ ಬೆರೆಯಬೇಕು. ಈ ನಾಡಿನಲ್ಲಿನ ಸೂಫಿ ಸಂತರು ಬೇರೆ ನಾಡಿನಲ್ಲಿ ಸಿಗುವುದಿಲ್ಲ ಎಂದರು.

ಜಿಪಂ ಸಿಇಒ ಎಂ. ಸುಂದರೇಶ ಬಾಬು, ಉಪ ವಿಭಾಗಾಧಿಕಾರಿ ಡಾ| ಶಂಕರ ವಣಿಕ್ಯಾಳ, ಜಿಪಂ ಸದಸ್ಯೆ ಶಾಂತಾಬಾಯಿ ನಾಗರಾಳ, ಸಮಾಜದ ಮುಖಂಡರಾದ ಸಾಹೇಬಗೌಡ ಬಿರಾದಾರ, ಭರತ ಕೋಳಿ, ಶಿವಾನಂದ ಹಿಪ್ಪರಗಿ, ಪ್ರದೀಪ ಭುಯ್ನಾರಕರ, ಪ್ರಕಾಶ ನಾಯ್ಕೋಡಿ, ಶರಣಪ್ಪ ಕಣಮೇಶ್ವರ, ಮಹಾದೇವಪ್ಪ ಸೊನ್ನ, ಶಂಕರ ನಾಟೀಕಾರ, ಸಿದ್ದಣ್ಣ ತಳವಾರ, ಶಿವಾನಂದ ಭುಯ್ನಾರ, ಶಿವಾನಂದ ಅಂಬಿಗೇರ ಇದ್ದರು.

ಇದೇ ವೇಳೆ ವಿವಿಧ ಕಲಾವಿದರು ಅಂಬಿಗರ ಚೌಡಯ್ಯ ಜೀವನಾಧಾರಿತ ರೂಪಕ ಪ್ರದರ್ಶಿಸಿದರು. ನಂತರ ವಿವಿಧ
ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮಹೇಶ ಪೋತದಾರ ಸ್ವಾಗತಿಸಿದರು.

ಇದಕ್ಕೂ ಮೊದಲು ನಗರದ ಸಿದ್ದೇಶ್ವರ ದೇವಸ್ಥಾನ ದಿಂದ ಆರಂಭಗೊಂಡ ನಿಜಶರಣ ಅಂಬಿಗರ ಚೌಡಯ್ಯ ಭಾವಚಿತ್ರ
ಮೆರವಣಿಗೆಗೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ ಚಾಲನೆ ನೀಡಿದರು. ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ ಮಹಾತ್ಮ ಗಾಂಧೀಜಿ ಮಾರ್ಗವಾಗಿ ಕಂದಗಲ್‌ ಹನುಮಂತರಾಯ ಮಂದಿರದವರೆಗೆ ನಡೆಯಿತು.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.