ಕೋವಿಡ್-19: ವಿಜಯಪುರ ಜಿಲ್ಲೆಯ 12 ವರದಿ ಬಾಕಿ, ಮತ್ತೆ 12 ಪರೀಕ್ಷೆಗೆ
Team Udayavani, Apr 10, 2020, 3:06 PM IST
ವಿಜಯಪುರ: ಕೋವಿಡ್-19 ಸೋಂಕು ಲಕ್ಷಣ ಇರುವ 12 ಜನರ ಗಂಟಲು ದ್ರವ ಪರೀಕ್ಷೆ ಮಾದರಿ ವರದಿ ಬರಬೇಕಿದ್ದು, ಇದೀಗ ಮತ್ತೆ 12 ಜನರ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಹೇಳಿದರು.
ಶುಕ್ರವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈವರೆಗೆ 75 ಜನರ ಗಂಟಲು ದ್ರವ ಮಾದರಿ ಪರೀಕ್ಷೆಗೆ ಕಳಿಸಿದ್ದು, 63 ವರದಿ ನೆಗೆಟಿವ್ ಬಂದಿವೆ ಎಂದರು.
ವಿದೇಶಗಳಿಂದ ಜಿಲ್ಲೆಗೆ ಬಂದಿರುವ 434 ಜನರಲ್ಲಿ 247 ಜನರು 28 ದಿನಗಳ ಹೋಂ ಕ್ವಾರಂಟೈನ್ ನಿಗಾ ಪೂರೈಸಿದ್ದಾರೆ. 149 ಜನರು 15 ರಿಂದ 28 ದಿನಗಳ ರಿಪೋರ್ಟಿಂಗ್ ಪೀರಿಯಡ್ ಮುಕ್ತಾಯ ಮಾಡಿದ್ದಾರೆ. 38 ಜನರ ಕ್ವಾರಂಟೈನ್ ನಿಗಾದಲ್ಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದಲ್ಲಿ 24ಗಂಟೆಯಲ್ಲಿ 2,628 ಕೋವಿಡ್ ಪ್ರಕರಣ ದೃಢ, 18 ಮಂದಿ ಸಾವು
ಭಾರತದಲ್ಲಿ 24ಗಂಟೆಯಲ್ಲಿ 1,675 ಕೋವಿಡ್ ಪ್ರಕರಣ ದೃಢ, ಸಕ್ರಿಯ ಪ್ರಕರಣ ಅಲ್ಪ ಏರಿಕೆ
ಭಾರತದಲ್ಲಿ 24ಗಂಟೆಯಲ್ಲಿ 2,022 ಕೋವಿಡ್ ಸೋಂಕು ಪ್ರಕರಣ ದೃಢ, 46 ಮಂದಿ ಸಾವು
ಭಾರತದಲ್ಲಿ 24ಗಂಟೆಯಲ್ಲಿ 2,323 ಕೋವಿಡ್ 19 ಸೋಂಕು ಪ್ರಕರಣ ದೃಢ, 25 ಮಂದಿ ಸಾವು
ಭಾರತದಲ್ಲಿ 24 ಗಂಟೆಯಲ್ಲಿ 2,259 ಕೋವಿಡ್ ಪ್ರಕರಣ ದೃಢ, ಸಕ್ರಿಯ ಪ್ರಕರಣ 15,044ಕ್ಕೆ ಇಳಿಕೆ