ಸಕ್ಕರೆ ಸಾಗಾಟಕ್ಕೆ ಕೋವಿಡ್ 19 ಕಾಟ!

Team Udayavani, Mar 30, 2020, 12:51 PM IST

ಸಕ್ಕರೆ ಸಾಗಾಟಕ್ಕೆ ಕೋವಿಡ್ 19 ಕಾಟ!

ಸಾಂದರ್ಭಿಕ ಚಿತ್ರ

ವಿಜಯಪುರ: ಕೋವಿಡ್ 19 ಬಾಧೆ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳ ಮೇಲೆ ಕರಿ ನೆರಳು ಬೀರಿದೆ. ಲಾಕ್‌ ಡೌನ್‌ನಿಂದಾಗಿ ಅನ್ಯ ರಾಜ್ಯ ಹಾಗೂ ವಿದೇಶಗಳಿಗೆ ರಫ್ತಾಗಲು ಸಿದ್ಧವಾಗಿದ್ದ ಹತ್ತಾರು ಸಾವಿರ ಮೆಟ್ರಿಕ್‌ ಟನ್‌ ಸಕ್ಕರೆ ಸಾಗಾಟ ಸಮಸ್ಯೆಯಿಂದ ಗೋದಾಮಿನಲ್ಲಿ ಸಿಹಿಯ ಬದಲು ಕಹಿಯಾಗತೊಡಗಿದೆ.

ಬಸವನಾಡು ವಿಜಯಪುರ ಜಿಲ್ಲೆಯಲ್ಲಿ ಎರಡು ಸಹಕಾರಿ ಹಾಗೂ 6 ಖಾಸಗಿ ಮಾಲೀಕತ್ವದ ಕಾರ್ಖಾನೆಗಳು ಸೇರಿದಂತೆ 8 ಕಾರ್ಖಾನೆಗಳು ಸಕ್ಕರೆ ಉತ್ಪಾದಿಸುತ್ತವೆ. ಕೋವಿಡ್ 19  ಭೀತಿ ಆವರಿಸುತ್ತಲೇ ಮಾ. 31ರ ವರೆಗೆ ಸರ್ಕಾರ ನಿರ್ಬಂಧ ಹೇರುತ್ತಲೇ ಕಾರ್ಖಾನೆಗಳ ಸಿಬ್ಬಂದಿ-ಕಾರ್ಮಿಕರು ಮನೆ ಸೇರಿದ್ದರು. ಈ ಹಂತದಲ್ಲೇ ಕೇಂದ್ರ ಸರ್ಕಾರ ದೇಶದಾದ್ಯಂತ 21 ದಿನಗಳ ಲಾಕ್‌ಡೌನ್‌ ಘೋಷಿಸಿರುವುದು ಸಕ್ಕರೆ ಕಾರ್ಖಾನೆ ಮಾಲೀಕರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

ಲಾಕ್‌ಡೌನ್‌ನಿಂದ ಅಗತ್ಯ ವಸ್ತುಗಳ ಸರಬರಾಜು ವಾಹನ ಸಂಚಾರಕ್ಕೆ ನಿರ್ಬಂಧ ಇಲ್ಲ ಎಂದು ಸರ್ಕಾರಗಳು ಹೇಳಿವೆ. ಆದರೂ ಪೊಲೀಸರು ವಾಹನಗಳ ಚಾಲಕರ ಮೇಲೆ ಲಾಠಿ ಪ್ರಯೋಗ ಮಾಡುವ, ದೈಹಿಕವಾಗಿ ಹಲ್ಲೆ ಮಾಡುವ ಪ್ರಕರಣಗಳಿಂದಾಗಿ ಸರಕು ಸಾಗಾಣಿಕೆ ಮಾಲೀಕರು ತಮ್ಮ ವಾಹನಗಳನ್ನು ಮೂಲೆ ಸೇರಿಸಿದ್ದಾರೆ. ಇದಲ್ಲದೇ ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಬಾರ್ಡರ್‌ ಸೀಲ್‌ ಹಾಕಿದ್ದು, ಜಿಲ್ಲೆಯನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿಗಳಲ್ಲಿ ಕಲ್ಲು-ಮುಳ್ಳುಗಳ ರಾಶಿಹಾಕಿ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

ಜಿಲ್ಲೆಯಲ್ಲಿ ಈ ವರ್ಷ 8 ಸಕ್ಕರೆ ಕಾರ್ಖಾನೆಗಳು ಉತ್ಪಾದನೆ ನಡೆಸಿದ್ದು, ಸುಮಾರು 24 ಸಾವಿರ ಮೆಟ್ರಿಕ್‌ ಟನ್‌ ಸಕ್ಕರೆ ದಾಸ್ತಾನಿದೆ. ಇದಲ್ಲದೇ ಕೇಂದ್ರ ಸರ್ಕಾರದ ಮಾರ್ಗದರ್ಶಿ ಸೂತ್ರದಂತೆ ಹೆಚ್ಚುವರಿಯಾಗಿ ಸುಮಾರು 11 ಸಾವಿರ ಮೆಟ್ರಿಕ್‌ ಟನ್‌ (ಬಫರ್‌ ಸ್ಟಾಕ್‌) ಸಕ್ಕರೆ ದಾಸ್ತಾನಿದೆ. ಕಾಪು ದಾಸ್ತಾನು ಹೊರತುಪಡಿಸಿ ಸಕ್ಕರೆ ಕಾರ್ಖಾನೆ ಮಾಲೀಕರು ಮಾರಿಕೊಳ್ಳಲು ಅವಕಾಶ ಇರುವ 24 ಸಾವಿರ ಮೇಟ್ರಿಕ್‌ ಟನ್‌ ಸಕ್ಕರೆ ಸಾಗಾಟಕ್ಕೆ ಲಾಕ್‌ ಡೌನ್‌ ಸಂಕಷ್ಟ ತಂದೊಡ್ಡಿದ್ದು, ಇತ್ತ ಸರಕು ಲೋಡ್‌ ಮಾಡಲು ಸಿಬ್ಬಂದಿ ಸಹ ಲಭ್ಯ ಇಲ್ಲದಂತಾಗಿದೆ. ಜಿಲ್ಲೆಯಲ್ಲಿ ಉತ್ಪಾದನೆ ಆಗುತ್ತಿರುವ ಸಕ್ಕರೆಗೆ ವಿದೇಶದಲ್ಲೂ ಬೇಡಿಕೆ ಇದ್ದು, ಜಾಗತಿಕ ಮಟ್ಟದಲ್ಲಿ ಕೋವಿಡ್ 19  ದಾಳಿಯಿಂದಾಗಿ ರಫ್ತಿಗೂ ಕೊಕ್ಕೆ ಬಿದ್ದಿದೆ.

ಭಾರತದ ತಮಿಳುನಾಡು, ಕೇರಳ, ಗೋವಾ, ಮಹಾರಾಷ್ಟ್ರ, ತೆಲಂಗಾಣ, ಸೀಮಾಂಧ್ರ ಸೇರಿದಂತೆ ವಿವಿಧ ರಾಜ್ಯಗಳಿಗೂ ಸಕ್ಕರೆ ಸಾಗಾಣಿಕೆ ಮಾಡಲು ಲಾರಿ ಚಾಲಕರು ಹಿಂದೇಟು ಹಾಕುತ್ತಿದ್ದಾರೆ. ಸಕ್ಕರೆ ಮಾಲೀಕರು ಅನುಭವಿಸುತ್ತಿರುವ ಈ ಸಂಕಷ್ಟಕ್ಕೆ ಪರಿಹಾರ ಕಂಡುಕೊಳ್ಳಲು ಜಿಲ್ಲಾಡಳಿತ ಮುಂದಾಗಿದೆ. ಲಾಕ್‌ಡೌನ್‌ ಆದೇಶದ ಪರಿಣಾಮ ಮನೆಯಲ್ಲೇ ಉಳಿಯಿರಿ ನಿಯಮದಿಂದ ಊರುಗಳಿಗೆ ತೆರಳಿರುವ ಕಾರ್ಖಾನೆಗಳ ಸಿಬ್ಬಂದಿ-ಕಾರ್ಮಿಕರನ್ನು ಕರೆಸಿಕೊಳ್ಳುವ ಕುರಿತು ಚಿಂತನೆ ನಡೆಸುವ ಸಾಧ್ಯತೆ ಇದೆ. ಅಲ್ಲದೇ ಸದರಿ ಸಿಬ್ಬಂದಿಗೆ ಹಾಗೂ ಲಾರಿ ಚಾಲಕ-ಸಹಾಕರಿಗೆ ಕೋವಿಡ್ 19  ಲಾಕ್‌ಡೌನ್‌ ವಿನಾಯ್ತಿಯ ಸರಕು ಸಾಗಾಟದ ವಾಹನಗಳಿಗೆ ವಿಶೇಷ ಪಾಸ್‌ ನೀಡಲು ಯೋಜನೆ ರೂಪಿಸಲಾಗಿದೆ.

ಇಂಥ ಸಾಧ್ಯಾಸಾಧ್ಯತೆಗಳ ಕುರಿತು ಚರ್ಚಿಸಲು ಮಾ.30 ರಂದು ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ಅಧ್ಯಕ್ಷತೆಯಲ್ಲಿ ಸಭೆ ಕರೆದಿದೆ. ಸದರಿ ಸಭೆಯಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ತಮ್ಮ ಸಮಸ್ಯೆಗಳ ಸರಮಾಲೆಯನ್ನು ನಿವೇದಿಸಿಕೊಳ್ಳುವ ಸಾಧ್ಯತೆ ಇದೆ.

-ಜಿ.ಎಸ್‌.ಕಮತರ

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.