ವಿಜಯಪುರ : ಜಿಲ್ಲೆಯಲ್ಲಿ ಮತ್ತೆ 596 ಸೋಂಕಿತರು ಪತ್ತೆ, ನಾಲ್ವರ ಸಾವು
Team Udayavani, May 4, 2021, 8:49 PM IST
ವಿಜಯಪುರ: ಜಿಲ್ಲೆಯಲ್ಲಿ ಮಂಗಳವಾರ ಮತ್ತೆ 596 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ನಾಲ್ವರು ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಒಂದೇ ದಿನ 596 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಪ್ರಮುಖವಾಗಿ ವಿಜಯಪುರ ನಗರದಲ್ಲಿ 174, ಮುದ್ದೇಬಿಹಾಳ ತಾಲ್ಲೂಕಿನಲ್ಲಿ 151, ಇಂಡಿ ತಾಲೂಕಿನಲ್ಲಿ 105 ಸೋಂಕಿತರು ಹೊಸದಾಗಿ ಪತ್ತೆಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 23109 ಕ್ಕೆ ಏರಿದ್ದು ಪರಿಸ್ಥಿತಿ ಕೈಮೀರುವ ಅಪಾಯದ ಮುನ್ಸೂಚನೆ ನೀಡುತ್ತಿದೆ. ಇದೇ ದಿನ 405 ಜನರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದರೂ ಸಕ್ರೀಯ ರೋಗಿಗಳ ಸಂಕ್ಯೆ 3000 ಕ್ಕೆ ಏರಿಕೆಯಾಗಿದೆ.
ಸೋಂಕಿತರಲ್ಲಿ ಮತ್ತೆ ನಾಲ್ವರು ವಿವಿಧ ಕಾಯಿಲೆಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಾಗ ಮೃತಪಟ್ಟಿದ್ದಾರೆ. ಕೋವಿಡ್ ಸೋಂಕಿತ 73 ವರ್ಷದ ವೃದ್ಧ ಪಿ-1130818, 58 ವರ್ಷದ ಮಹಿಳೆ ಪಿ-1163939, 65 ವರ್ಷದ ಪುರುಷ ಪಿ-1373037 ಹಾಗೂ 60 ವರ್ಷದ ಪುರುಷ ಪಿ-1374082 ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಕೋವಿಡ್ ಸೋಂಕಿನಿಂದ ಮೃತಪಟ್ಟ ನಾಲ್ಕೂ ವ್ಯಕ್ತಿಗಳ ಶವಗಳ ಅಂತ್ಯ ಸಂಸ್ಕಾರ ಶಿಷ್ಟಾಚಾರದಂತೆ ನೆರವೇರಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ