ಕೋವಿಡ್ ಸೋಂಕಿತರ ಸಂಖ್ಯೆ 896ಕ್ಕೆ ಏರಿಕೆ

Team Udayavani, Jul 15, 2020, 11:46 AM IST

vp-tdy-1

ವಿಜಯಪುರ: ಜಿಲ್ಲೆಯಲ್ಲಿ ಮಂಗಳವಾರ ಮತ್ತೆ 52 ಜನರಿಗೆ ಕೋವಿಡ್‌ ಸೋಂಕು ದೃಢಪಟ್ಟಿದ್ದರೆ, ಮತ್ತೂಂದೆಡೆ ಚಿಕಿತ್ಸೆ ಫಲಕಾರಿಯಾಗದೇ ಸೋಂಕಿತ ಮೂವರು ಮೃತಪಟ್ಟಿದ್ದಾರೆ. ಇದರ ಮಧ್ಯೆ ಗುಣಮಟ್ಟದ ಚಿಕಿತ್ಸೆಯಿಂದ 80 ಜನರು ಕೋವಿಡ್‌ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ ಎಂದು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ತಿಳಿಸಿದ್ದಾರೆ.

ವಿಜಯಪುರ ನಗರದ ಶಾಪೇಟೆಯ 55 ವರ್ಷದ ಸೋಂಕಿತ ಪಿ 24773 ಜು. 5ರಂದು ನಿಮೋನಿಯಾ, ಜ್ವರ, ತೀವ್ರ ಉಸಿರಾಟ ತೊಂದರೆ ಲಕ್ಷಣಗಳಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಕೋವಿಡ್‌ ಸೋಂಕು ದೃಢಪಟ್ಟಿದ್ದು ಜು. 11ರಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ನಗರದ ಮುರಾಣಕೇರಿ ಕಾಲೋನಿ ನಿವಾಸಿ 50 ವರ್ಷದ ಸೋಂಕಿತ ಪಿ 31880, ಜು. 10ರಂದು ಜ್ವರ, ತೀವ್ರ ಉಸಿರಾಟ ತೊಂದರೆ ಲಕ್ಷಣಗಳಿಂದ, ದೀರ್ಘ‌ ಕಾಲದ ಸಕ್ಕರೆ-ಹೃದಯ ಕಾಯಿಲೆ, ರಕ್ತದೊತ್ತಡ ಹೀಗೆ ಹಲವು ರೋಗಗಳಿಂದ ಬಳಲುತ್ತಿದ್ದು, ಸರ್ಕಾರಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್‌ ಪಾಸಿಟಿವ್‌ ದೃಢಪಟ್ಟು ಅದೇ ದಿನ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ನಗರದ ಕಾಳಿಕಾ ನಗರದ ಆಶ್ರಮದ ಪ್ರದೇಶದ ನಿವಾಸಿ 68 ವರ್ಷದ ಸೋಂಕಿತ ಪಿ 35216 ಜು. 7ರಂದು ಕೆಮ್ಮು, ತೀವ್ರ ಉಸಿರಾಟ ತೊಂದರೆ ಲಕ್ಷಣಗಳಿಂದ ಬಳಲುತ್ತಿದ್ದರು. 7 ವರ್ಷದಿಂದ ಸಕ್ಕರೆ ಕಾಯಿಲೆ ಇದ್ದ ಅವರಿಗೆ ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ಸೋಂಕು ದೃಢಪಟ್ಟಿತ್ತು. ಸದರಿ ರೋಗಿ ಜು. 13ರಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ಶಿಷ್ಟಾಚಾರದಂತೆ ನೆರವೇರಿಸಲಾಗಿದೆ. ಈ ಮೂವರ ಸಾವಿನೊಂದಿಗೆ ಜಿಲ್ಲೆಯಲ್ಲಿ ಸೋಂಕಿನಿಂದ ಮೃತರಾದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ವಿವರಿಸಿದ್ದಾರೆ.

ಮಂಗಳವಾರವೇ ಜಿಲ್ಲೆಯಲ್ಲಿ ಮತ್ತೆ 52 ಜನರಿಗೆ ಕೋವಿಡ್‌ ಸೋಂಕು ದೃಢಟ್ಟಿದ್ದು ಈವರೆಗೆ 896 ಜನರಿಗೆ ಸೋಂಕು ತಗುಲಿದಂತಾಗಿದೆ. ಇದರಲ್ಲಿ 15 ಪೊಲೀಸರು ಹಾಗೂ ತಹಶೀಲ್ದಾರ್‌ ಕಚೇರಿಯ ನಾಲ್ವರು ಸಿಬ್ಬಂದಿಗಳಿಗೆ ಸೋಂಕು ದೃಢಪಟ್ಟಿದೆ. ಸದರಿ ಕಚೇರಿಗಳ ಸೀಲ್‌ಡೌನ್‌ ಮತ್ತು ಸ್ಯಾನಿಟೈಸೇಷನ್‌ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಕೋವಿಡ್‌

ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಯಿಂದಾಗಿ 80 ರೋಗಿಗಳು ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಇದರೊಂದಿಗೆ ಆಸ್ಪತ್ರೆಯಿಂದ ಬಿಡುಗಡೆ ಆದವರ ಸಂಖ್ಯೆ 654ಕ್ಕೆ ಏರಿಕೆಯಾಗಿದೆ. ಉಳಿದಂತೆ 223 ಸೋಂಕಿತರಿಗೆ ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.