ನಿವೃತ್ತಿ ವೇತನ ಪರಿಷ್ಕರಣೆಗೆ ಆಗ್ರಹ

Team Udayavani, Nov 23, 2018, 11:45 AM IST

vij-2.jpg

ವಿಜಯಪುರ: ನಿವೃತ್ತ ವೇತನ ಪರಿಷ್ಕರಣೆಗೆ ಆಗ್ರಹಿಸಿ ಬಿಎಸ್‌ಎನ್‌ಎಲ್‌ ನಿವೃತ್ತ ನೌಕರರು ಗುರುವಾರದಿಂದ ನಗರದಲ್ಲಿರುವ ಪ್ರಧಾನ ವ್ಯವಸ್ಥಾಪಕರ ಕಚೇರಿ ಎದುರು ಉಪವಾಸ ಸತ್ಯಾಗ್ರಹ ಆರಂಭಿಸಿದರು.

ಕೇಂದ್ರ ಸರಕಾರದ ನಿವೃತ್ತಿ ನೌಕರರ 7ನೇ ವೇತನ ಆಯೋಗದ ಶಿಫಾರಸಿನ ಅನ್ವಯಂತೆ 1-1-2016ರಿಂದ ನಿವೃತ್ತ ವೇತನ ಪರಿಷ್ಕರಿಸಿದೆ. ನಿವೃತ್ತಿ ಹೊಂದಿದವರೂ ಸಹ ಕೇಂದ್ರ ನಿವೃತ್ತಿ ವೇತನದಾರರು 1972 ಪ್ರಕಾರ ನಿವೃತ್ತಿ ವೇತನ ಪಡೆಯುತ್ತಿದ್ದಾರೆ. 2017ರಂದು ಜನೇವರಿ 1ರಿಂದ ಪಿಂಚಣಿದಾರರ ನಿವೃತ್ತಿ ವೇತನ ಪರಿಷ್ಕರಿಸಬೇಕಾಗಿದೆ. ಆದರ ದೂರವಾಣಿ ಇಲಾಖೆ ಅನೇಕ ಕಾರಣ ನೀಡಿ ನಿವೃತ್ತಿ ವೇತನ ನೀಡದೆ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ದೂರಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆ ಮುಖಂಡ ಎಸ್‌.ಆರ್‌. ನಾಯಕ, 2007ರಲ್ಲಿ ಪಿಂಚಣಿ ಪರಿಷ್ಕರಣೆ ಆಗಿತ್ತು. ನಂತರದಲ್ಲಿ ಜಾರಿಯಾದ ಏಳನೇ ವೇತನ ಆಯೋಗವು ಬಿ.ಎಸ್‌.ಎನ್‌.ಎಲ್‌. ನೌಕರರಿಗೆ ಔದ್ಯೋಗಿಕ ತುಟ್ಟಿ ಭತ್ಯೆ ಸಿಗುವ ಕಾರಣದಿಂದಾಗಿ, ಪಿಂಚಣಿಯನ್ನು ಪರಿಷ್ಕರಿಸಲಿಲ್ಲ. ಹೀಗಾಗಿ ಬಿ.ಎಸ್‌.ಎನ್‌.ಎಲ್‌. ನೌಕರರಿಗೆ ಈಗ 1-1-2017ರಿಂದ ಪಿಂಚಣಿ ಪರಿಷ್ಕರಣೆ ಆಗಬೇಕಿದೆ. ನಿವೃತ್ತ ನೌಕರರ ಪಿಂಚಣಿ ಪರಿಷ್ಕರಣೆಗೂ, ಸೇವೆಯಲ್ಲಿರುವ ಬಿ.ಎಸ್‌.ಎನ್‌.ಎಲ್‌. ನೌಕರರ ವೇತನ ಪರಿಷ್ಕರಣೆಗೂ ಯಾವುದೇ ಸಂಬಂಧವಿರುವುದಿಲ್ಲ. ಆದರೂ ಪಿಂಚಣಿ ಪರಿಷ್ಕರಣೆ ವಿಷಯದಲ್ಲಿ ವಿಳಂಬ ನೀತಿ ಅನುಸರಿಲಾಗುತ್ತಿದೆ
ಎಂದು ಕಿಡಿ ಕಾರಿದರು.

2007ರಲ್ಲಿ ಅನುಷ್ಠಾನಕ್ಕೆ ಬಂದ ಎರಡನೇ ವೇನ ಪರಿಷ್ಕರಣೆಯ ಸಂದರ್ಭದಲ್ಲಿ ಪಿಂಚಣಿ ಪರಿಷ್ಕರಣೆಯ ಆದೇಶವು 2011ರಲ್ಲಿ ನೀಡಲಾಗಿತ್ತು. ಈ ರೀತಿ ವಿಳಂಬ ಮಾಡದೇ ತ್ವರಿತವಾಗಿ 3ನೇ ವೇತನ ಪರಿಷ್ಕರಣೆ ಆದೇಶದ ಸಂದರ್ಭದಲ್ಲೇ ಪಿಂಚಣಿ ಪರಿಷ್ಕರಣೆಯ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.

ಕೆ.ಜಿ. ದೇಶಪಾಂಡೆ, ಎಂ.ಡಿ.ಸೂರ್ಯವಂಶಿ, ಪ್ರಕಾಶ ಜೀರಂಕಲಗಿ, ಸಿ.ಎಸ್‌. ಹಿರೇಮಠ, ಕೆ.ಆರ್‌. ಸಾವಳಸಂಗ ಮಾತನಾಡಿದರು. ಎಸ್‌.ಎಲ್‌. ಕುಲಕರ್ಣಿ, ಎಂ.ಜಿ. ಬಿಜ್ಜರಗಿ, ಡಿ.ಎಸ್‌.ಎನ್‌.ಇ.ಎ. ವಿ.ಆರ್‌. ತೇಲಗಾರ, ವಿ.ಡಿ.ನಾಯಕ, ಎಸ್‌.ಎನ್‌. ಚಿಕ್ಕಣ್ಣವರ, ಎಸ್‌.ಎಂ. ಹಗ್ಗದ, ಪಿ.ಐ. ಗಿರಾಣಗಲ್ಲಿ, ಎಸ್‌.ಆರ್‌. ಮಕಾನದಾರ, ಬಾಗಲಕೋಟೆ, ವಿಜಯಪುರ ಜಿಲ್ಲೆಯ ಬಿ.ಎಸ್‌.ಎನ್‌. ಎಲ್‌. ಯೂನಿಯನ್‌ ಈ ಸಂಘಟನೆಗಳ ಪದಾಧಿಕಾರಿಗಳು ಬಹುಸಂಖ್ಯೆಯಲ್ಲಿ ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.