ವಾರದಲ್ಲಿ ಆರ್‌ಟಿಪಿಸಿಆರ್‌ ಲ್ಯಾಬ್‌ ಕಾರ್ಯಾರಂಭ

Team Udayavani, Jul 4, 2020, 9:06 AM IST

ವಾರದಲ್ಲಿ  ಆರ್‌ಟಿಪಿಸಿಆರ್‌ ಲ್ಯಾಬ್‌ ಕಾರ್ಯಾರಂಭ

ವಿಜಯಪುರ: ಜಿಲ್ಲೆಯಲ್ಲಿ ಕೋವಿಡ್‌ ಕೋವಿಡ್ ಸಾಂಕ್ರಾಮಿಕ ರೋಗ ಹೆಚ್ಚುತ್ತಿದೆ. ಇದರಿಂದ ಸೋಂಕಿತರ ಗಂಟಲು ದ್ರವ ಮಾದರಿ ಸಂಗ್ರಹಿಸಿ, ಪರೀಕ್ಷೆ ಮಾಡಲು ಬೆಂಗಳೂರು, ಕಲಬುರಗಿ ಪ್ರಯೋಗಾಲಯಕ್ಕೆ ಕಳುಸಲಾಗುತ್ತಿದೆ. ಅಲ್ಲಿಂದ ವರದಿ ಬರಲು ವಿಳಂಬ ಆಗುತ್ತಿದೆ. ಹೀಗಾಗಿ ಜಿಲ್ಲೆಯಲ್ಲಿ ಬರುವ ಒಂದು ವಾರದಲ್ಲಿ ನಿತ್ಯ 300 ಪರೀಕ್ಷೆ ಮಾಡುವ ಸಾಮರ್ಥ್ಯದ ಆರ್‌ಟಿಪಿಸಿಆರ್‌ ಪ್ರಯೋಗಾಲಯ ಆರಂಭಿಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಶುಕ್ರವಾರ ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲೆಯ ಕೋವಿಡ್‌-19 ನಿಯಂತ್ರಣ ಸೇರಿದಂತೆ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಪರಿಶೀಲನಾ ಸಭೆಯಲ್ಲಿ ಅವರು ಈ ವಿಷಯ ತಿಳಿಸಿದರು. ಜಿಲ್ಲೆಯಲ್ಲಿ ದಿನೇ ದಿನೇ ಸೋಂಕು ಶಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಗಂಟಲು ದ್ರವ ಮಾದರಿ ಪರೀಕ್ಷೆ ಸವಾಲಾಗುತ್ತಿದೆ. ಈಗಿರುವ ನಿತ್ಯ 25 ಮಾದರಿ ಪರೀಕ್ಷೆ ಪ್ರಯೋಗಾಲಯಗಳಿಂದ ಜಿಲ್ಲೆಯ ಮಾದರಿ ಸಂಗ್ರಹಕ್ಕೆ ತಕ್ಕಂತೆ ಪರೀಕ್ಷೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಆರ್‌ ಟಿಪಿಸಿಆರ್‌ ಪ್ರಯೋಗಾಲಯ ಸ್ಥಾಪನೆಗೆ ಸರ್ಕಾರ ಅನುಮತಿಸಿದೆ. ಇದರಿಂದ 24 ಗಂಟೆಯಲ್ಲಿ 300 ಗಂಟಲು ದ್ರವ ಮಾದರಿ ಪರೀಕ್ಷೆ ಮಾಡಬಹುದು. ಇದಕ್ಕಾಗಿ ಪ್ರಯೋಗಾಲಯದ ತಾಂತ್ರಿಕ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ ಎಂದರು.

ಇದಲ್ಲದೇ ಜಿಲ್ಲೆಯಲ್ಲಿರುವ ಎರಡು ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲೂ ಐಸಿಆರ್‌ಎಂ ಪ್ರಯೋಗಾಲಯ ಆರಂಭಕ್ಕೂ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಇದರಲ್ಲಿ ಒಂದು ಕಾಲೇಜಿಗೆ ಎನ್‌ಎಬಿಎಲ್‌ ಮಾನ್ಯತೆ ಪ್ರಮಾಣ ಪತ್ರ ಸಿಕ್ಕುತ್ತಲೇ ಪ್ರಯೋಗಾಲಯ ಆರಂಭಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದಲ್ಲದೇ ಕೋವಿಡ್‌ ಸೋಂಕಿತರು ಹೆಚ್ಚಳವಾದಲ್ಲಿ ಚಿಕಿತ್ಸೆ ನೀಡಲು 10 ಖಾಸಗಿ ಆಸ್ಪತ್ರೆಗಳು ಮುಂದೆ ಬಂದಿವೆ. ಇನ್ನೂ ಕೆಲ ಆಸ್ಪತ್ರೆಗಳು ಮಾತುಕತೆ ನಡೆಸಿವೆ. ಖಾಸಗಿ ಆಸ್ಪತ್ರೆಗಳಲ್ಲಿರುವ ಸೌಲಭ್ಯಗಳ ಕುರಿತು ಪರಿಶೀಲಿಸಿ ವರದಿ ನೀಡಲು ಡಿಎಚ್‌ಒ ಅವರಿಗೆ ಸೂಚನೆ ನೀಡಲಾಗಿದೆ ಎಂದು ವಿವರಿಸಿದರು.

ಜಿಲ್ಲೆಯಲ್ಲಿ ಕಂಟೈನ್ಮೆಂಟ್‌ ವಲಯಗಳ ಸಂಖ್ಯೆ ಕಡಿಮೆಯಾಗುತ್ತಿದ್ದು ಪಾಸಿಟಿವ್‌ ಪ್ರಕರಣ ದೃಢಪಟ್ಟ ವಲಯಗಳಲ್ಲಿ ಪಾಥಮಿಕ-ದ್ವಿತೀಯ ಸಂಪರ್ಕ ಇರುವವರ ಮೇಲೆ ನಿಗಾ ಇಡಬೇಕು ಎಂದು ಸೂಚಿಸಿದರು. ಸೋಂಕಿತರಿಗೆ ಗುಣಮುಖ ಸಂಖ್ಯಾ ಪ್ರಮಾಣ ಹೆಚ್ಚಿರುವುದಕ್ಕೆ ಮತ್ತು ಜಿಲ್ಲಾಡಳಿತ, ಪೊಲೀಸ್‌ ಇಲಾಖೆ, ಆರೋಗ್ಯ ಇಲಾಖೆಯಿಂದ ಅತ್ಯುತ್ತಮ ಕಾರ್ಯ ನಿರ್ವಹಣೆ ಬಗ್ಗೆ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಟಾಸ್ಕ್ ಫೂರ್ಸ್‌ ಸಮಿತಿಗಳು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವುದಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.

ಸಭೆಯಲ್ಲಿ ಸಿಂದಗಿ ಶಾಸಕ ಎಂ.ಸಿ. ಮನಗೂಳಿ, ನಾಗಠಾಣ ಶಾಸಕ ದೇವಾನಂದ ಚವ್ಹಾಣ, ಜಿಲ್ಲಾ ಧಿಕಾರಿ ವೈ.ಎಸ್‌. ಪಾಟೀಲ, ಜಿಪಂ ಸಿಇಒ ಗೋವಿಂದರೆಡ್ಡಿ, ಎಸ್ಪಿ ಅನುಪಮ್‌ ಅಗರವಾಲ, ಮಹಾನಗರ ಪಾಲಿಕೆ ಆಯುಕ್ತ ಹರ್ಷಾ ಶಟ್ಟಿ, ಡಿಎಚ್‌ಒ ಡಾ| ಮಹೇಂದ್ರ ಕಾಪ್ಸೆ ಇದ್ದರು.

ಟಾಪ್ ನ್ಯೂಸ್

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.