ಅಭಿವೃದ್ದಿಗೆ ಬೇಕು ಎಲ್ಲರ ಸಹಕಾರ: ಶಿವಾನಂದ


Team Udayavani, Jul 24, 2022, 5:19 PM IST

18develop

ಬಸವನಬಾಗೇವಾಡಿ: ಕೃಷ್ಣಾ ನ್ಯಾಯಾಧಿಕರಣ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ವ್ಯಾಜ್ಯ ಇದೆ. ಅದು ಇತ್ಯರ್ಥವಾದಲ್ಲಿ ವಿಜಯಪುರ ಜಿಲ್ಲೆ ಸಂಪೂರ್ಣ ನೀರಾವರಿ ಆಗುತ್ತದೆ. ಬರಗಾಲವೆಂಬ ಜಿಲ್ಲೆಯ ಹಣೆ ಬರಹ ಬದಲಾಗಿ ಜಿಲ್ಲೆ ಬಂಗಾರದ ಕಡ್ಡಿಯಾಗುತ್ತದೆ ಎಂದು ಮಾಜಿ ಸಚಿವ, ಶಾಸಕ ಶಿವಾನಂದ ಪಾಟೀಲ ಹೇಳಿದರು.

ಶನಿವಾರ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ 5 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಗಲೀಕರಣ, ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ, ಘನತ್ಯಾಜ ವಿಲೆವಾರಿ ವಾಹನ ಹಾಗೂ ಅಂಗನವಾಡಿ ಕಟ್ಟಡ ಉದ್ಘಾಟನೆ ನೆರವೇರಿಸಿ ನಂತರ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಅವರು ಮಾತನಾಡಿದರು.

ವಿಜಯಪುರ ಜಿಲ್ಲೆ ಸಂಪೂರ್ಣ ನೀರಾವರಿ ಯೋಜನೆಗೆ ಒಳಪಡಬೇಕಾದರೆ ಕೃಷ್ಣಾ ನ್ಯಾಯಾ ಧಿಕರಣ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಇರುವ ವ್ಯಾಜ್ಯ ಇತ್ಯರ್ಥವಾಗಬೇಕು. ಕೇಂದ್ರ ಸರ್ಕಾರ ಗೇಜಟ್‌ ನೋಟಿಫಿಕೇಶನ್‌ ಹೊರಡಿಸಿದಾಗ ಕೃಷ್ಣಾ ನ್ಯಾಯಾಧಿಕರಣದ ಸಮಸ್ಯೆ ಬಗೆಹರಿಯಲು ಸಾಧ್ಯ ಎಂದು ಹೇಳಿದರು.

ಕೇಂದ್ರ ರಾಜ್ಯ ಸರ್ಕಾರದ ಅನುದಾನ ತರುವ ಕೆಲಸ ನನ್ನದಾಗಿದ್ದು ಅದನ್ನು ಸರಿಯಾಗಿ ಬಳಸಿಕೊಳ್ಳುವುದು ಗ್ರಾಪಂ ಸದಸ್ಯರ ಕರ್ತವ್ಯವಾಗಿದೆ. ಎಲ್ಲರ ಸಹಕಾರ ಇದ್ದಾಗ ಮಾತ್ರ ಅಭಿವೃದ್ಧಿ ಕೆಲಸ ನಿಂತ ನೀರಾಗದೆ ಹರಿಯುವ ನೀರಾಗುತ್ತದೆ ಎಂದರು.

ಸರ್ಕಾರದಲ್ಲಿ ಯಾವುದೇ ಕಾಲದಲ್ಲಿಯೂ ಅನುದಾನದ ಕೊರತೆಯಿಲ್ಲ. ಸರ್ಕಾರದಲ್ಲಿ ಅನುದಾನ ಇದ್ದೆ ಇರುತ್ತದೆ. ಆದರೆ ಅನುದಾನವನ್ನು ತರುವ ಶಕ್ತಿ ಸಾಮರ್ಥ್ಯ ಆ ಶಾಸಕನಾದವನಿಗೆ ಬೇಕು. ಅದನ್ನು ಬಿಟ್ಟು. ಸರ್ಕಾರದಲ್ಲಿ ಅನುದಾನದ ಕೊರತೆಯಿತ್ತು. ಹೀಗಾಗಿ ಕ್ಷೇತ್ರದ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಮಾತಿನಲ್ಲೆ ಕ್ಷೇತ್ರದ ಜನರನ್ನು ಮರುಳು ಮಾಡುವ ವ್ಯಕ್ತಿಗಳಿಗೆ ಮಣೆ ಹಾಕದಿರಿ. ಕೆಲಸ ಮಾಡುವ ವ್ಯಕ್ತಿಗೆ ಮಣೆ ಹಾಕಿ ಅವರು ದುಡಿದ ಕೆಲಸಕ್ಕೆ ಸಂಬಳ ನೀಡಿ ಎಂದು ಕೋರಿದರು.

ವಿರಕ್ತಮಠದ ಸಿದ್ದರಾಮ ಶ್ರೀಗಳು ಸಾನ್ನಿಧ್ಯ, ಗ್ರಾಪಂ ಅಧ್ಯಕ್ಷೆ ಪಾರ್ವತಿ ಮೂರಮಾನ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಈರಣ್ಣ ಪಟ್ಟಣಶೆಟ್ಟಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸುರೇಶ ಹಾರಿವಾಳ, ಎಪಿಎಂಸಿ ಅಧ್ಯಕ್ಷ ವಿಶ್ವನಾಥ ಪಾಟೀಲ, ಗ್ರಾಪಂ ಉಪಾಧ್ಯಕ್ಷ ಅಪ್ಪಾಸಾಹೇಬ ಮಡಗೊಂಡ, ಯರನಾಳ ಗ್ರಾಪಂ ಅಧ್ಯಕ್ಷ ಬಸವರಾಜ ಜಾಲಗೇರಿ, ರಾಮು ಕೌಲಗಿ, ರಾಜುಗೌಡ ಪಾಟೀಲ, ಸಂಗಮೇಶ ಓಲೇಕಾರ, ತಾಪಂ ಇಒ ಭಾರತಿ ಚಲುವಯ್ಯ, ಪಿಡಬ್ಲ್ಯೂಡಿ. ಎಇಇ ಜೆ.ವಿ. ಕಿರಸೂರ, ಜೆಇ ಭೀಮನಗೌಡ ಬಿರಾದಾರ ಇದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.