Udayavni Special

ಆರೋಗ್ಯವರ್ಧನೆಗೆ ಪೂರಕ ಆಹಾರ ಸೇವಿಸಿ

ಮಗುವಿನ ಸರ್ವಾಂಗೀಣ ವಿಕಾಸಕ್ಕೆ ಸತ್ವಭರಿತ ಆಹಾರ ಬಹುಮುಖ್ಯ.

Team Udayavani, Sep 30, 2021, 5:51 PM IST

ಆರೋಗ್ಯವರ್ಧನೆಗೆ ಪೂರಕ ಆಹಾರ ಸೇವಿಸಿ

ವಿಜಯಪುರ: ಭವಿಷ್ಯದ ಸಶಕ್ತ ಭಾರತ ತರಗತಿ ಕೋಣೆಗಳಲ್ಲಿ ನಿರ್ಮಾಣವಾಗುತ್ತಿವೆ. ಇಂದಿನ ಮಕ್ಕಳೇ ಮುಂದಿನ ಸಮಾಜದ ರೂವಾರಿಗಳು ಎಂದು ಡಿಡಿಪಿಐ ಎನ್‌.ವಿ. ಹೊಸೂರ ಹೇಳಿದರು. ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಅಕ್ಷರ ದಾಸೋಹ ಇಲಾಖೆ ಹಾಗೂ ಪಿಡಿಜೆ “ಅ’ ಮಾಧ್ಯಮಿಕ ಶಾಲೆ ವಿಭಾಗದ ಆಶ್ರಯದಲ್ಲಿ ಜಿಲ್ಲಾಮಟ್ಟದ “ರಾಷ್ಟ್ರೀಯ ಪೋಷಣ್‌ ಅಭಿಯಾನ’ ಕಾರ್ಯಕ್ರಮಕ್ಕೆ ಸಸಿಗೆ ನೀರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳ ಭವಿಷ್ಯ ಹಾಗೂ ಆರೋಗ್ಯದ ಹಿತರಕ್ಷಣೆ ದೃಷ್ಟಿಯಿಂದ ಕೇಂದ್ರ ಸರ್ಕಾರ ಮಗುವಿನ ದೈಹಿಕ ಮತ್ತು ಮಾನಸಿಕ ವಿಕಾಸಕ್ಕೆ ಅಕ್ಷರ ದಾಸೋಹದ ಯೋಜನೆ ಜಾರಿಗೊಳಿಸಿ ಬಲಿಷ್ಠ ಭಾರತದ ಕನಸು ನನಸುಗೊಳಿಸುತ್ತಿದೆ. ರಾಷ್ಟ್ರೀಯ-ಅಂತಾರಾಷ್ಟ್ರೀಯ ಸ್ಪರ್ಧೆಗಳಲ್ಲಿ ಪದಕ ವಿಜೇತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಬೇಕಾದರೆ ಆರೋಗ್ಯಕ್ಕಾಗಿ ಆಹಾರ ಎಂಬ ಮೂಲಮಂತ್ರ ಮರೆಯಬಾರದು. ಜಂಕ್‌ಫುಡ್‌ ತ್ಯಜಿಸಿ ಶುಚಿಯಾದ ಆರೋಗ್ಯವರ್ಧನೆಗೆ ಪೂರಕ
ಆಹಾರ ಸೇವಿಸಬೇಕು ಎಂದರು.

ಮಗುವಿನ ಸರ್ವಾಂಗೀಣ ವಿಕಾಸಕ್ಕೆ ಸತ್ವಭರಿತ ಆಹಾರ ಬಹುಮುಖ್ಯ. ಸರ್ಕಾರದ ಅಕ್ಷರ ದಾಸೋಹದ ಈ ಮಹಾತ್ವಾಕಾಂಕ್ಷಿ ಯೋಜನೆಯ ಸಂಪೂರ್ಣ ಸದುಪಯೋಗ ಪಡೆಯಬೇಕೆಂದು ಅಕ್ಷರ ದಾಸೋಹ ಯೋಜನೆ ಶಿಕ್ಷಣಾಧಿ ಕಾರಿ ಎಸ್‌. ಎಸ್‌. ಮುಜಾವಾರ ಪ್ರಾಸ್ತಾವಿಕ ನುಡಿಗಳ ಮೂಲಕ ಮಕ್ಕಳಿಗೆ ತಿಳಿಸಿದರು.

ವಿಜ್ಞಾನ ಶಿಕ್ಷಕ ವಿ.ಆರ್‌. ಕಟ್ಟಿ ಮಾತನಾಡಿ, ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವುದರಲ್ಲಿ ಜೀವಸತ್ವಗಳು, ಮಿನರಲ್ಸ್‌, ಕಾಬೊìಹೈಡ್ರೇಟ್ಸ್‌ಗಳ ಪಾತ್ರ ಮುಖ್ಯ. ನಮ್ಮ ಆಹಾರದಲ್ಲಿ ಸಮತೋಲನಕ್ಕೆ ಪ್ರಾಮುಖ್ಯ ನೀಡಬೇಕು ಎಂದರು. ಉಪ ಪ್ರಾಚಾರ್ಯ ಎಂ.ಎ. ಆಲೂರ ಅಧ್ಯಕ್ಷತೆ ವಹಿಸಿದ್ದರು. ಶಾಲೆ ಮಕ್ಕಳು ರಾಷ್ಟ್ರೀಯ ಪೋಷಣ್‌ ಅಭಿಯಾನಕ್ಕೆ ಪೂರಕವಾದ ರಂಗೋಲಿ, ವಸ್ತು ಪ್ರದರ್ಶನ, ರಸಪ್ರಶ್ನೆಯಲ್ಲಿ ಪಾಲ್ಗೊಂಡು ಪೌಷ್ಟಿಕ ಆಹಾರದ ಪ್ರಾಮುಖ್ಯತೆ ಅರಿತುಕೊಂಡರು. ಪಿ.ಡಿ. ಪೂಜಾರ, ಪಿ.ಕೆ. ಮಲಘಾಣ ಕಾರ್ಯಕ್ರಮ ನಿರೂಪಿಸಿದರು. ಬಿ.ಜಿ. ಮೆಡೆಗಾರ ವಂದಿಸಿದರು.

ಟಾಪ್ ನ್ಯೂಸ್

jghjgyj

ಕೋವಿಡ್ ಮದ್ದು, ಅನ್ಯ ಕಾಯಿಲೆಗೂ ಗುದ್ದು?  

ಮಲ್ಲಿಕಾರ್ಜುನ ಖರ್ಗೆಯ ಭ್ರಷ್ಟ ಸಂಪತ್ತಿನ ಮುಂದೆ ಮಿಕ್ಕವರೆಲ್ಲ ಲೆಕ್ಕಕ್ಕಿಲ್ಲ: ಬಿಜೆಪಿ ಆರೋಪ

ಮಲ್ಲಿಕಾರ್ಜುನ ಖರ್ಗೆಯ ಭ್ರಷ್ಟ ಸಂಪತ್ತಿನ ಮುಂದೆ ಮಿಕ್ಕವರೆಲ್ಲ ಲೆಕ್ಕಕ್ಕಿಲ್ಲ: ಬಿಜೆಪಿ ಆರೋಪ

1-aa

ತೃತೀಯ ಲಿಂಗಿಗಳನ್ನು ಒಪ್ಪಿಕೊಳ್ಳದ ಕಾರಣ ನೀವು ದಂಡ ಕಟ್ಟಬೇಕು: ಪದ್ಮಶ್ರೀ ಮಂಜಮ್ಮ ಜೋಗತಿ

“ಜಾಗೃತ ಭಾರತ, ಸಮೃದ್ಧ ಭಾರತ”

ಜಾಗೃತ ಭಾರತ, ಸಮೃದ್ಧ ಭಾರತ

ffhjutgfd

ತುಮಕೂರು : ಮದುವೆ ಮಾಡಿಸುವಂತೆ ಡಿಸಿಗೆ ಅರ್ಜಿ ಸಲ್ಲಿಸಿದ ಯುವಕರು

ಇಂದಿನ ರಾಜಕಾರಣ ನನಗೆ ತೃಪ್ತಿ ಎನಿಸುತ್ತಿಲ್ಲ: ಬಸವರಾಜ ಹೊರಟ್ಟಿ

ಇಂದಿನ ರಾಜಕಾರಣ ನನಗೆ ತೃಪ್ತಿ ಎನಿಸುತ್ತಿಲ್ಲ: ಬಸವರಾಜ ಹೊರಟ್ಟಿ

ಇಂದು ಚಿರು ಹುಟ್ಟುಹಬ್ಬ: ಮೇಘನಾ ಹೊಸ ಸಿನಿಮಾ ಆರಂಭ

ಇಂದು ಚಿರು ಹುಟ್ಟುಹಬ್ಬ: ಮೇಘನಾ ಹೊಸ ಸಿನಿಮಾ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21

ಬಿಜೆಪಿಯಿಂದ ಮಾತ್ರ ತಾಂಡಾ ಅಭಿವದ್ಧಿ

14

ಜನ ನನ್ನ ಕೈ ಬಿಡಲ್ಲ: ರಮೇಶ ಭೂಸನೂರ

11

ಭೂಸನೂರ ಪರ ಸಚಿವ ಸಿ.ಸಿ. ಪಾಟೀಲ ಪ್ರಚಾರ

10

ಬಿಜೆಪಿ-ಕಾಂಗ್ರೆಸ್‌ ರಾಜ್ಯದ ಅಭಿವೃದ್ಧಿಗೆ ಮಾರಕ: ನಾಜಿಯಾ

eart

ವಿಜಯಪುರದಲ್ಲಿ ಮತ್ತೆ ಭೂಕಂಪನ : ಜನರಲ್ಲಿ ಹೆಚ್ಚುತ್ತಿರುವ ಆತಂಕ

MUST WATCH

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

ಹೊಸ ಸೇರ್ಪಡೆ

jghjgyj

ಕೋವಿಡ್ ಮದ್ದು, ಅನ್ಯ ಕಾಯಿಲೆಗೂ ಗುದ್ದು?  

Dak Seva Award for Achievers

8 ಸಾಧಕರಿಗೆ ಡಾಕ್ ಸೇವಾ ಪ್ರಶಸ್ತಿ ಪ್ರಧಾನ ಮಾಡಿದ ರಾಜ್ಯಪಾಲರು

davanagere news

ಹಿರೇಕಲ್ಮಠದೊಂದಿಗೆ ಅವಿನಾಭಾವ ಸಂಬಂಧ

12

ಕ್ಷಯ ಮುಕ್ತ ದೇಶಕ್ಕೆ ಸಹಕಾರ ಅಗತ್ಯ

ಮಲ್ಲಿಕಾರ್ಜುನ ಖರ್ಗೆಯ ಭ್ರಷ್ಟ ಸಂಪತ್ತಿನ ಮುಂದೆ ಮಿಕ್ಕವರೆಲ್ಲ ಲೆಕ್ಕಕ್ಕಿಲ್ಲ: ಬಿಜೆಪಿ ಆರೋಪ

ಮಲ್ಲಿಕಾರ್ಜುನ ಖರ್ಗೆಯ ಭ್ರಷ್ಟ ಸಂಪತ್ತಿನ ಮುಂದೆ ಮಿಕ್ಕವರೆಲ್ಲ ಲೆಕ್ಕಕ್ಕಿಲ್ಲ: ಬಿಜೆಪಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.