ಬಾಲಕಿಯರಿಗೆ ಶಿಕ್ಷಣ ಅವಶ್ಯ: ಗಾಂಜಿ

Team Udayavani, Jan 29, 2019, 10:59 AM IST

vij-1.jpg

ಮುದ್ದೇಬಿಹಾಳ: ಬಾಲ್ಯ ವಿವಾಹದ ದುಷ್ಪರಿಣಾಮದಿಂದ ಹೆಣ್ಣು ಮಕ್ಕಳನ್ನು ರಕ್ಷಿಸಬೇಕು. ತಾಳ್ಮೆ, ಬುದ್ಧಿವಂತಿಕೆ, ಸಹನೆಗೆ ಹೆಸರಾಗಿರುವ ಹೆಣ್ಣು ಮಕ್ಕಳನ್ನು ಉಳಿಸಿ, ವಿದ್ಯಾವಂತರನ್ನಾಗಿ ಮಾಡಿ ಬೆಳೆಸುವ ಅವಶ್ಯಕತೆ ಎಂದಿಗಿಂತ ಇಂದು ಹೆಚ್ಚಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್‌.ಡಿ.ಗಾಂಜಿ ಹೇಳಿದರು.

ಇಲ್ಲಿನ ಕ್ಷೇತ್ರ ಸಮನ್ವಯಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಜಯಪುರ ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಹೆಣ್ಣು ಮಗುವಿನ ಸಪ್ತಾಹ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಂಗನವಾಡಿ ಮೂಲ ಶಿಕ್ಷಣಕ್ಕೆ ರಹದಾರಿಯಾಗಿದ್ದು ಇಲ್ಲಿಗೆ ಕಲಿಯಲು ಬರುವ ಹೆಣ್ಣು ಮಕ್ಕಳಿಗೆ ಉತ್ತಮ ಶಿಕ್ಷಣ, ಸಂಸ್ಕಾರ ನೀಡಿದಲ್ಲಿ ಅವರ ಭವಿಷ್ಯ ಉಜ್ವಲವಾಗುತ್ತದೆ ಎನ್ನುವುದನ್ನು ಪ್ರತಿಯೊಬ್ಬರೂ ಅರಿಯಬೇಕು. ಹೆಣ್ಣು ಮಕ್ಕಳಲ್ಲಿ ಬೆರಳೆಣಿಕೆಯಷ್ಟು ಜನ ತಪ್ಪು ದಾರಿ ಹಿಡಿದರೂ ದೇಶದ ಭವಿಷ್ಯವೇ ಬುಡಮೇಲಾಗುವುದರಲ್ಲಿ ಸಂದೇಹವಿಲ್ಲ ಎಂದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗೀತಾ ಗುತ್ತರಗಿಮಠ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಹೆಣ್ಣು ಮಕ್ಕಳಿಗೆ ಹೆಚ್ಚಿನ ಸೌಲಭ್ಯ, ಸೌಕರ್ಯ ಕಲ್ಪಿಸಿದ್ದು ಎಲ್ಲರೂ ಪ್ರಯೋಜನ ಪಡೆದುಕೊಳ್ಳಬೇಕು. ಹೆಣ್ಣು ಭ್ರೂಣ ಹತ್ಯೆ ನಿಲ್ಲಿಸಲು, ಹೆಣ್ಣು ಶಿಶುವನ್ನು ಉಳಿಸಲು ಸರ್ಕಾರ ಎಲ್ಲ ರೀತಿಯ ಕ್ರಮ ಕೈಗೊಂಡಿದೆ. ತಾಯಂದಿರು ಹೆಣ್ಣು ಮಕ್ಕಳನ್ನು ರಕ್ಷಿಸುವಲ್ಲಿ ಮುಂದಾಗಬೇಕು. ಹೆಣ್ಣು ಮಕ್ಕಳಿಗೆ ಉತ್ತಮ ವಿದ್ಯೆ ನೀಡಿ ಅವರಿಗಾಗಿ ಆಸ್ತಿ ಮಾಡದೆ ಅವರನ್ನೇ ಆಸ್ತಿಯನ್ನಾಗಿ ಮಾಡಬೇಕು ಎಂದರು.

ದೈಹಿಕ ಶಿಕ್ಷಣ ಪರಿವೀಕ್ಷಕ ಎಸ್‌.ಬಿ. ಚಲವಾದಿ, ತಾಲೂಕು ಆರೋಗ್ಯ ಇಲಾಖೆ ಪ್ರತಿನಿಧಿ ಎಸ್‌.ಎ. ರುದ್ರವಾಡಿ, ಅಂಗನವಾಡಿ ಮೇಲ್ವಿಚಾರಕಿಯರು ವೇದಿಕೆಯಲ್ಲಿದ್ದರು. ಇದೇ ವೇಳೆ ಬಾಲಕಿಯರಾದ ತಸ್ಲೀಮಾ ಹಳ್ಳೂರ ಮತ್ತು ದೀಪ್ತಿ ಮುರಾಳ ಇವರ ಜನ್ಮದಿನವನ್ನು ಕೇಕ್‌ ಕತ್ತರಿಸುವ ಮೂಲಕ ಆಚರಿಸಲಾಯಿತು. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿನಿಯರಾದ ಸುಮತಿ ಹಿರೇಮನಿ, ಅನುಸೂಯಾ ಹಿರೇಮಠ ಅವರನ್ನು ಸನ್ಮಾನಿಸಲಾಯಿತು.

ತುಳಸಿ ಸಂಗಡಿಗರು ಪ್ರಾರ್ಥಿಸಿದರು. ಮೇಲ್ವಿಚಾರಕಿ ಸುಮಿತ್ರಾ ಹಗರಗೊಂಡ ಸ್ವಾಗತಿಸಿದರು. ಟಿ.ಡಿ. ಲಮಾಣಿ ನಿರೂಪಿಸಿದರು. ಕಾರ್ಯಕ್ರಮಕ್ಕೂ ಮುನ್ನ ಸಿಡಿಪಿಒ ಕಚೇರಿಯಿಂದ ಬಸವೇಶ್ವರ ವೃತ್ತ, ಅಂಬೇಡ್ಕರ್‌ ವೃತ್ತ ಮಾರ್ಗವಾಗಿ ಕ್ಷೇತ್ರ ಸಮನ್ವಯಾಧಿಕಾರಿ ಕಚೇರಿವರೆಗೆ ಮಕ್ಕಳ ಜಾಥಾ ನಡೆಸಲಾಯಿತು.

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.