ತೀವ್ರ ಕಟ್ಟೆಚ್ಚರ ನಡುವೆ ಇಂಗ್ಲಿಷ್‌ ಪರೀಕ್ಷೆ ಯಶಸ್ವಿ

Team Udayavani, Jun 19, 2020, 7:10 AM IST

ತೀವ್ರ ಕಟ್ಟೆಚ್ಚರ ನಡುವೆ ಇಂಗ್ಲಿಷ್‌ ಪರೀಕ್ಷೆ ಯಶಸ್ವಿ

ಮುದ್ದೇಬಿಹಾಳ: ಕೋವಿಡ್ ಸೋಂಕಿನ ಆತಂಕ ಮತ್ತು ತಾಲೂಕಾಡಳಿತ ಕಟ್ಟೆಚ್ಚರದ ನಡುವೆ ಗುರುವಾರ ಪಿಯು ದ್ವಿತೀಯ ವರ್ಷದ ಇಂಗ್ಲೀಷ್‌ ಪರೀಕ್ಷೆ ಯಶಸ್ವಿಯಾಗಿ ಮುಗಿದಿದೆ.

ಯಾವುದೇ ಪರೀಕ್ಷಾ ಕೇಂದ್ರದಲ್ಲಿ ಕೋವಿಡ್ ಸೋಂಕಿನ ಪ್ರಕರಣ ಕಂಡುಬಂದಿಲ್ಲ. ಒಂದೆರಡು ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಮುಖಕ್ಕೆ ಮಾಸ್ಕ್ ಧರಿಸಿದ್ದರಿಂದ ಉಸಿರುಗಟ್ಟಿದಂತಾಗಿ ತೊಂದರೆ ಉಂಟಾಗಿತ್ತು. ತಕ್ಷಣ ಕೇಂದ್ರದಲ್ಲಿದ್ದ ಆರೋಗ್ಯ ಸಿಬ್ಬಂದಿ ಅಂಥವರ ನೆರವಿಗೆ ಧಾವಿಸಿ ಮಾಸ್ಕ್ ತೆಗೆಸಿ ಉಸಿರಾಟ ಸರಾಗವಾಗುವಂತೆ ನೋಡಿಕೊಂಡು ಆತಂಕ ನಿವಾರಿಸಿದರು.

ಮುದ್ದೇಬಿಹಾಳ, ತಾಳಿಕೋಟೆ ತಾಲೂಕು ವ್ಯಾಪ್ತಿಯಲ್ಲಿ ಒಟ್ಟು 6 ಪರೀಕ್ಷಾ ಕೇಂದ್ರಗಳಿದ್ದು 3869 ವಿದ್ಯಾರ್ಥಿಗಳ ಪೈಕಿ 3659 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. 210 ವಿದ್ಯಾರ್ಥಿಗಳು ಗೈರಾಗಿದ್ದರು. ಪ್ರತಿಯೊಂದು ಕೇಂದ್ರದಲ್ಲಿ ತಲಾ ಇಬ್ಬರು ಉಪನ್ಯಾಸಕರನ್ನು ಥರ್ಮಲ್‌ ಸ್ಕ್ರೀನಿಂಗ್‌ ಗೆ, ಸ್ಯಾನಿಟರೈಸಿಂಗ್‌ಗೆ ಬಳಸಿಕೊಳ್ಳಲಾಗಿತ್ತು. ಝಿಗ್‌ಜಾಗ್‌ ಮಾದರಿಯಲ್ಲಿ ಆಸನಗಳ ವ್ಯವಸ್ಥೆ ಮಾಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗಿತ್ತು ಎಂದು ಸರ್ಕಾರಿ ಪಪೂ ಕಾಲೇಜಿನ ಪ್ರಾಂಶುಪಾಲ ಎಸ್‌.ಎಸ್ .ಅಂಗಡಿ ಉದಯವಾಣಿಗೆ ಮಾಹಿತಿ ನೀಡಿದರು.

ಸ್ಕ್ರೀನಿಂಗ್‌ ಕಾರಣ ವಿದ್ಯಾರ್ಥಿಗಳು ಕೇಂದ್ರಗಳಿಗೆ ಸರದಿಯಲ್ಲಿ ಪ್ರವೇಶಿಸುವ ವ್ಯವಸ್ಥೆ ಮಾಡಿದ್ದರಿಂದ ಕೇಂದ್ರದ ಹೊರಗೆ ರಸ್ತೆಯಲ್ಲೂ ವಿದ್ಯಾರ್ಥಿಗಳ ಸರದಿ ಸಾಲು ಕಂಡು ಬಂದವು. ನಾಗರಬೆಟ್ಟ ಪರೀಕ್ಷಾ ಕೇಂದ್ರ ಸೇರಿದಂತೆ ರಸ್ತೆ ಪಕ್ಕದಲ್ಲಿರುವ ಕೇಂದ್ರಗಳ ಎದುರು ವಿದ್ಯಾರ್ಥಿಗಳನ್ನು ಕರೆತಂದಿದ್ದ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಪರೀಕ್ಷೆಗೆ ಸಂಬಂಧಿ  ಸಿದವರನ್ನು ಹೊರತುಪಡಿಸಿ ಉಳಿದವರನ್ನು ಕೇಂದ್ರದ ಒಳಗೆ ಪ್ರವೇಶಿಸಲು ಅವಕಾಶ ನಿರಾಕರಿಸಲಾಗಿತ್ತು.

ಸಿಪಿಐ ಆನಂದ ವಾಗಮೋಡೆ, ಪಿಎಸೈಗಳಾದ ಮಲ್ಲಪ್ಪ ಮಡ್ಡಿ, ವಸಂತ ಬಂಡಗಾರ ಪರೀಕ್ಷಾ ಕೇಂದ್ರದಲ್ಲಿ ಬಿಗಿಬಂದೋಬಸ್ತ್ ಉಸ್ತುವಾರಿ ನೋಡಿಕೊಂಡರು. ತಹಶೀಲ್ದಾರ್‌ ಜಿ.ಎಸ್‌. ಮಳಗಿ, ಬಿಇಒ ರೇಣುಕಾ ಕಲಬುರ್ಗಿ ಸೇರಿದಂತೆ ಪರೀಕ್ಷಾ ಉಸ್ತುವಾರಿ ಅಧಿಕಾರಿಗಳು ಎಲ್ಲೆಡೆ ಸಂಚರಿಸಿ ನಕಲು ತಡೆಗಟ್ಟಲು ಶ್ರಮಿಸಿದರು.

ತಾಲೂಕು ಆರೋಗ್ಯಾಧಿಕಾರಿ ಡಾ| ಸತೀಶ ತಿವಾರಿ, ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಸಿ.ಬಿ. ವಿರಕ್ತಮಠ, ತಂಗಡಗಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ದಶವಂತ ನೇತೃತ್ವದ ಆರೋಗ್ಯ ಸಿಬ್ಬಂದಿ ತಂಡ ಪ್ರತಿಯೊಂದು ಕೇಂದ್ರದಲ್ಲಿ ಬೀಡುಬಿಟ್ಟು ವಿದ್ಯಾರ್ಥಿಗಳ ಆರೋಗ್ಯದ ಮೇಲೆ ನಿಗಾ ವಹಿಸಿತ್ತು.

ಸ್ಯಾನಿಟೈಸರ್‌-ಮಾಸ್ಕ್ ಬಳಕೆ: ಪರೀಕ್ಷೆ ಎದುರಿಸುವ ಎಲ್ಲ ವಿದ್ಯಾರ್ಥಿಗಳಿಗೆ ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ಅವರು ಉಚಿತವಾಗಿ ಪೂರೈಸಿದ್ದ ಮಾಸ್ಕ್, 100 ಎಂಎಲ್‌ ಸ್ಯಾನಿಟೈಸರ್‌ ಬಾಟಲ್‌ಗ‌ಳನ್ನು ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದಲ್ಲೇ ಹಂಚಿಕೆ ಮಾಡಲಾಗಿತ್ತು.

ಟಾಪ್ ನ್ಯೂಸ್

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.