ವಿಜಯಪುರ: ನಕಲಿ ದಾಖಲೆ ಸೃಷ್ಟಿಸಿ ಸಾಲ; ಬ್ಯಾಂಕ್‍ಗೆ 3 ಕೋಟಿ ರೂ. ವಂಚನೆ ಮಾಡಿದವರ ಮೇಲೆ ಕೇಸ್


Team Udayavani, Jun 22, 2022, 5:46 PM IST

ವಿಜಯಪುರ: ನಕಲಿ ದಾಖಲೆ ಸೃಷ್ಟಿಸಿ ಸಾಲ; ಬ್ಯಾಂಕ್‍ಗೆ 3 ಕೋಟಿ ರೂ. ವಂಚನೆ ಮಾಡಿದವರ ಮೇಲೆ ಕೇಸ್

ವಿಜಯಪುರ: ನಕಲಿ ದಾಖಲೆ ಸೃಷ್ಟಿಸಿ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನಲ್ಲಿ 8 ಜನರು 3.15 ಕೋಟಿ ರೂ. ಸಾಲ ಪಡೆದು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ವಂಚನೆ ಮಾಡಿದ ಆರೋಪದಲ್ಲಿ 22 ಜನರ ವಿರುದ್ಧ ಇದೀಗ ನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಬಂಧನಕ್ಕೆ ಮುಂದಾಗಿದ್ದಾರೆ.

ಹನಮಂತ ಮುಂಜಾನೆ, ವೆಂಕಟೇಶ ಕೋರ್ಪಡೆ, ಗಜಾನಂದ ಬೀಸಣಿಕೆ, ರಾಘವೇಂದ್ರ ಚವನ, ಭಾರತಿ ಇಂಡಿ, ಸೈಯದ್ ಆರೀಫ್ ಹಾಗೂ ಸೈಫುದ್ದೀನ್ ಶೇಖ್ ಹಾಗೂ ನಜೀರ್ ಅಹ್ಮದ್ ಶೇಖ್ ಎಂಬವರ ವಿರುದ್ಧ ದೂರು ದಾಖಲಾಗಿದೆ. ಇದಲ್ಲದೇ ಸದರಿ ನಕಜಲಿ ದಾಖಲೆ ಸೃಷ್ಟಿಸಿ ಸಾಲ ಪಡೆದ ಪ್ರಕರಣದಲ್ಲಿ ಜಾಮೀನು ಹಾಕಿದ 14 ಜನರ ವಿರುದ್ಧವೂ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧಿಕಾರಿಗಳು ನಗರದ ಗಾಂಧಿಚೌಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತಮ್ಮ ವಿರುದ್ಧ ದೂರು ದಾಖಲಾಗಿದ್ದು ತಿಳಿಯುತ್ಲೇ ಸದರಿ ಪ್ರಕರಣದ ಆರೋಪಿಗಳಲ್ಲಿ ಕೆಲವರು ಜಾಮೀನು ಪಡೆಯುಲು ಮಂದಾಗಿದ್ದಾರೆ ಎಂದು ಹೇಳಲಾಗಿದೆ.

ಸಾಲ ಪಡೆಯಲು ವಂಚಕ ಆರೋಪಿಗಳು ಹೆಸರೇ ಇಲ್ಲದ ಬೇರೊಬ್ಬರ ಹೆಸರಿನಲ್ಲಿ ಸಾಲ ಪಡೆಯುವುದು, ಹೆಸರೇ ಇಲ್ಲದವರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆಯುವುದು, ಆಸ್ತಿ ಇಲ್ಲದವರ ಹೆಸರಿನಲ್ಲಿ ಖೊಟ್ಟಿ ದಾಖಲೆ ಸೃಷ್ಟಿಸಿ ಸಾಲ ಪಡೆದಿರುವುದು ಬೆಳಕಿಗೆ ಬಂದಿದೆ. ಈ ವಂಚನೆ ಪ್ರಕರಣದಲ್ಲಿ ನಕಲಿ ಆಧಾಋ ಕಾರ್ಡ್ ಸೃಷ್ಟಿ, ಆಸ್ತಿಗಳನ್ನು ನೋಂದಣಾಧಿಕಾರಿ ಕಛೇರಿಯಲ್ಲಿ ನೋಂದಣಿ ಮಾಡಿಸಿದಂತೆ ಅಸಲಿ ದಾಖಲೆಗಳನ್ನು ಹೋಲುವ ನಕಲಿ ದಾಖಲೆಗಳನ್ನು ಸೃಷ್ಟಿಸಿ, ವಂಚಿಸಲಾಗಿದೆ.

ಸದರಿ 8 ಆರೋಪಿಗಳು ಹಲವು ವರ್ಷಗಳ ಹಿಂದೆ ನಕಲಿ ದಾಖಲೆಗಳನ್ನು ನೀಡಿ 3.15 ಕೋಟಿ ರೂ. ಸಾಲ ಪಡೆದಿದ್ದರು. ವರ್ಷಗಳೇ ಕಳೆದರೂ ಸಾಲ ಮರುಪಾವತಿಗೆ ಕಂತುಗಳನ್ನು ಕಟ್ಟಿರಲಿಲ್ಲ. ಹೀಗಾಗಿ ಸಹಜವಾಗಿ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧಿಕಾರಿಗಳು ಸಾಲ ಮರುಪಾವತಿಸುವಂತೆ ಸಂಬಂಧಿಸಿದವರ ಹೆಸರಿನಲ್ಲಿ ನೋಟೀಸ್ ಕಳಿಸಿದ್ದಾರೆ. ಆದರೆ ಬ್ಯಾಂಕ್ ನೋಟೀಸ್ ಕಳಿಸಿದ ಸ್ಥಳದಲ್ಲಿ ಸಾಲ ಪಡೆದವರ ಹೆಸರಿನ ವ್ಯಕಿತಳೇ ವಾಸವಾಗಿಲ್ಲ ಎಂದ ಅಂಶ ಬೆಳಕಿಗೆ ಬಂದಿದೆ.

ಇದರಿಂದ ಆತಂಕಕ್ಕೀಡಾದ ವಿಡಿಸಿಸಿ ಬ್ಯಾಂಕ್ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದಾಗ ತಮ್ಮ ಬ್ಯಾಂಕ್‍ಗೆ ನಕಲಿ ದಾಖಲೆ ನೀಡಿ ವಂಚಿಸಿರುವುದು ಸ್ಪಷ್ಟವಾಗಿದೆ. ಇದರಿಂದ ಎಚ್ಚೆತ್ತ ಅಧಿಕಾರಿಗಳು ಕೂಡಲೇ ವಿ.ಜಿ.ಕೇಂ. ಸ. ಬ್ಯಾಂಕ್ ಅಧ್ಯಕ್ಷರು ಹಾಗೂ ಮೇಲಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಪರಿಶೀಲನೆ ಬಳಿಕ ಮೇಲ್ನೋಟಕ್ಕೆ ಇದು ವಂಚನೆ ಪ್ರಕರಣ ಎಂದು ಸಾಬೀತಾಗುತ್ತಲೇ ಇಬ್ಬರು ಸಿಬ್ಬಂದಿಯನ್ನು ಸೇವೆಯಿಂದ ಅಮಾನತು ಆಡಲಾಗಿದೆ.

ಮತ್ತೊಂದೆಡೆ ಮೇ 1 ರಂದು ಈ ಕುರಿತು ಗಾಂಧೀಚೌಕ್ ಠಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದರಿ ವಂಚನೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಅಧಿಕಾರಿಗಳನ್ನು ನೇಮಿಸಿದ್ದಾಗಿ ಎಸ್ಪಿ ಆನಂದಕುಮಾರ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.