ಬಸ್‌ ಸೌಲಭ್ಯ ನೀಡಿ ಪುಣ್ಯಾ ಬರ್ತೇತಿ!

Team Udayavani, Jan 11, 2019, 9:48 AM IST

vij-3.jpg

ಹೂವಿನಹಿಪ್ಪರಗಿ: ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಗತಿಸಿದರೂ ರಾಜ್ಯದ ಕೆಲ ಗ್ರಾಮಗಳಿಗೆ ಮೂಲ ಸೌಲಭ್ಯ ಕಲ್ಪಿಸಲು ಆಗುತ್ತಿಲ್ಲ. ಇದಕ್ಕೆ ನಿದರ್ಶನವೆಂಬಂತೆ ಬಸವನಬಾಗೇವಾಡಿ ತಾಲೂಕಿನ ಉತ್ನಾಳ ತಾಂಡಾ (ರಾಮನಗರ) ಗ್ರಾಮಸ್ಥರು ಬಸ್‌ ಸೌಕರ್ಯವಿಲ್ಲದೆ ನಿತ್ಯ ಪರದಾಡುತ್ತಿದ್ದಾರೆ. ಹೀಗಾಗಿ ಇಲ್ಲಿನ ವಿದ್ಯಾರ್ಥಿಗಳು ನಮಗೆ ಬಸ್‌ ಸೌಲಭ್ಯ ನೀಡಿ ಪುಣ್ಯಾ ಕಟ್ಟಗೋರಿ ಎಂದು ಆಗ್ರಹಿಸಿದ್ದಾರೆ.

ಹೌದು, ಈ ಗ್ರಾಮ ಈಚೆಗೆ ಕಂದಾಯ ಗ್ರಾಮವಾಗಿ ಮೇಲ್ದರ್ಜೆಗೇರಿದೆ. ಆದರೂ ಸಾರಿಗೆ ಸೌಲಭ್ಯ ವಂಚಿತ ಗ್ರಾಮ. ಸುಮಾರು ಎರಡು ಸಾವಿರ ಜನ ಇಲ್ಲಿ ನೆಲೆಸಿದ್ದಾರೆ. ಇಲ್ಲಿ ದಿನ ಬೆಳಗಾದರೆ ನೂರಾರು ವಿದ್ಯಾರ್ಥಿಗಳು ವಿದ್ಯಾರ್ಜನೆಗಾಗಿ ಸಮೀಪದ ಸಾತಿಹಾಳ, ದಿಂಡವಾರ, ಇಂಗಳೇಶ್ವರ, ಹೂವಿನಹಿಪ್ಪರಗಿ ಹಾಗೂ ದೇವರಹಿಪ್ಪರಗಿಗೆ ತೆರಳಬೇಕು.

ಈ ಗ್ರಾಮವು ಹೂವಿನಹಿಪ್ಪರಗಿ ಹಾಗೂ ದೇವರಹಿಪ್ಪರಗಿ ಮುಖ್ಯ ರಸ್ತೆಯಿಂದ ಮೂರು ಕಿ.ಮೀ. ಅಂತರದಲ್ಲಿದೆ. ಶಾಲಾ ಮಕ್ಕಳು ಸೇರಿದಂತೆ ಗ್ರಾಮಸ್ಥರು ಬ್ಯಾಂಕ್‌ ಹಾಗೂ ಇತರೆ ಸರಕಾರಿ ಕೆಲಸಕ್ಕೆ ಪಟ್ಟಣದ ಕಡೆಗೆ ಮುಖ ಮಾಡಿದಾಗ ಮೊದಲು ಸಾರಿಗೆ ಸಮಸ್ಯೆ ಎದುರಾಗುತ್ತದೆ. ವಿಪರ್ಯಾಸವೆಂದರೆ ಇಲ್ಲಿ ಖಾಸಗಿ ವಾಹನದ ಸೌಲಭ್ಯವೂ ಇಲ್ಲ. ಚಳಿಗಾಲ ಮತ್ತು ಬೇಸಿಗೆಯಲ್ಲಿ ಹೇಗೋ ನಡೆದುಕೊಂಡು ಹೋಗಾತ್ತಾರೆ. ಆದರೆ ಮಳೆಗಾಲದಲ್ಲಿ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ನಿತ್ಯ ಪರದಾಡುತ್ತಾರೆ.

ಬಸ್‌ ಸೌಕರ್ಯ ಕಲ್ಪಿಸುವಂತೆ ಗ್ರಾಮದ ಹಿರಿಯರು ಮತ್ತು ವಿದ್ಯಾರ್ಥಿಗಳು ಬಸವನಬಾಗೇವಾಡಿ ಸಾರಿಗೆ ಘಟಕದ ವ್ಯವಸ್ಥಾಪಕರಿಗೆ ಹಾಗೂ ವಿಭಾಗೀಯ ಸಂಚಾರಿ ನಿಯಂತ್ರಕರಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಏನು ಪ್ರಯೋಜನವಾಗಿಲ್ಲ. ಬರೀ ಅಧಿಕಾರಿಗಳಿಂದ ಭರವಸೆ ಮಾತುಗಳು ಸಿಕ್ಕಿವೆ. ಇನ್ನಾದರೂ ಸಂಬಂಧಿಸಿದ ರಾಜಕಾರಣಿಗಳು, ಅಧಿಕಾರಿಗಳು ಇತ್ತ ಗಮನ ಹರಿಸಿ ಮೂಲ ಸೌಲಭ್ಯ ಒದಗಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.