ಮನೆಗೆ ಹೋಗಿ ಕೋವಿಡ್‌ ಲಸಿಕೆ ಹಾಕಲು ತಾಕೀತು

Team Udayavani, Nov 23, 2021, 3:17 PM IST

16vaccine

ವಿಜಯಪುರ: ಜಿಲ್ಲೆಯಲ್ಲಿ ಕೋವಿಡ್‌ ಲಸಿಕಾಕರಣದ ಪ್ರಸ್ತುತ ಪ್ರಗತಿ ಹಾಗೂ ಅಭಿಯಾನದಲ್ಲಿ ಬಾಕಿ ಉಳಿದಿರುವ ಒಂದನೇ ಮತ್ತು ಎರಡನೇ ಡೋಸ್‌ ಕೊವಿಡ್‌ ಲಸಿಕೆ ಪಡೆಯಬೇಕಾಗಿರುವ ಫಲಾನುಭವಿಗಳನ್ನು ಗುರುತಿಸಬೇಕು. ಅಲ್ಲದೇ ಇಂಥವರ ಪ್ರತಿ ಮನೆಗೆ ಭೇಟಿ ನೀಡಿ ಸ್ಥಳದಲ್ಲೇ ಲಸಿಕೆ ನೀಡಬೇಕು. ಲಸಿಕೆ ನೀಡಿದ ಬಗ್ಗೆ ಸ್ಥಳದಲ್ಲೇ ಕೊವಿಡ್‌ ಪೋರ್ಟಲ್‌ನಲ್ಲಿ ದಾಖಲಿಸುವಂತೆ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದ ಸಭೆಯಲ್ಲಿ ಈ ಸೂಚನೆ ನೀಡಿದ ಅವರು, ಎಲ್ಲ ತಾಲೂಕಿನಲ್ಲಿರುವ ಕೆಸ್ವಾನ್‌ ಕೇಂದ್ರಗಳಲ್ಲಿ ತಾಲೂಕು ಆರೋಗ್ಯಾಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾ ಧಿಕಾರಿಗಳು ಹಾಜರಿದ್ದು ತಮ್ಮ ತಾಲೂಕಿಗೆ ಸಂಬಂಧಿ ಸಿದ ಅಧಿಕಾರಿಗಳು ಸ್ಥಳಗಳಿಗೆ ಭೇಟಿ ನೀಡಬೇಕು ಎಂದು ಸೂಚಿಸಿದರು.

ಕೋವಿಡ್‌ ಲಸಿಕಾಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಹರ ಘರ ದಸ್ತಕ್‌ -ಪ್ರತಿ ಮನೆ ಮನೆಗೆ ಕೋವಿಡ್‌ ಲಸಿಕಾ ಅಭಿಯಾನ ಕಾರ್ಯಕ್ರಮ ಯಶಸ್ವಿಗೊಳಿಸಲು ಎಲ್ಲ ಅಧಿಕಾರಿಗಳು, ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಕೋರಿದರು.

ರಾಷ್ಟ್ರೀಯ ಪಲ್ಸ್‌ ಪೋಲಿಯೋ ಮಾದರಿಯಲ್ಲಿ ನ. 11ರಿಂದ 30ರವರೆಗೆ ಪ್ರತಿ ಮನೆಗೆ ಭೇಟಿ ನೀಡಿ ಕೊವಿಡ್‌ ಲಸಿಕೆಯನ್ನು ನೀಡಬೇಕು. ನಿಗದಿತ ನಮೂನೆಯಲ್ಲಿ ಪ್ರತಿ ದಿನದ ಕೋವಿಡ್‌ ಲಸಿಕಾಕರಣದ ಪ್ರಗತಿ ವರದಿಯನ್ನು ಪ್ರತಿ ತಂಡಗಳಿಂದ ಕ್ರೋಢೀಕರಿಸಿ ಪ್ರಾಥಮಿಕ ಆರೋಗ್ಯ ಕೇಂದ್ರದ ವರದಿ ಸಿದ್ಧಪಡಿಸಿ, ತಾಲೂಕಿಗೆ ಕಳುಹಿಸಿ ಕೊಡಬೇಕು. ಮೂರು ದಿನದ ನಂತರ ಸಭೆ ಸೇರಿ ಪ್ರಗತಿ ಪರಿಶೀಲಿಸಬೇಕು ಎಂದು ಸೂಚಿಸಿದರು.

ನ. 30 ನಿಗದಿತ ಅವಧಿಯಲ್ಲಿ ಪೂರ್ಣ ಪ್ರಮಾಣದಲ್ಲಿ ಲಸಿಕಾಕರಣ ಮಾಡಿ, 1 ಹಾಗೂ 2ನೇ ಡೋಸ್‌ ವಿಷಯದಲ್ಲಿ ಶೇ. 100 ಸಾಧನೆ ಮಾಡಬೇಕು. ಇದರ ಹೊರತಾಗಿಯೂ ಎರಡನೇ ಡೋಸ್‌ ಲಸಿಕೆ ಪಡೆಯುವ ಪ್ರಕರಣದಲ್ಲಿ ಡಿಸೆಂಬರ 1ರಿಂದ ಕೇವಲ 2ನೇ ಡೋಸ್‌ ಲಸಿಕಾಕರಣಕ್ಕೆ ಹೆಚ್ಚು ಪ್ರಾತಿನಿಧ್ಯ ನೀಡಿ, ಗುರಿ ಸಾಧನೆಯನ್ನು ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ಜಿಪಂ ಸಿಇಒ ಗೋವಿಂದ ರೆಡ್ಡಿ ಸೇರಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಅಧಿಕಾರಿಗಳು, ಜಿಲ್ಲಾ ಆರ್‌ಸಿಎಚ್‌ ಅಧಿಕಾರಿಗಳು, ಡಬ್ಲೂಎಚ್‌ಒ ಅಧಿಕಾರಿಗಳು ಹಾಗೂ ಜಿಲ್ಲಾಮಟ್ಟದ ಅನುಷ್ಠಾನ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.