ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಸರ್ಕಾರ


Team Udayavani, Dec 6, 2018, 12:36 PM IST

vij-1.jpg

ವಿಜಯಪುರ: ರಾಜ್ಯದಲ್ಲಿ ಕಳೆದ 40 ವರ್ಷಗಳಲ್ಲೇ ಕಂಡರಿಯದ ಭೀಕರ ಬರ ಆವರಿಸಿ ರೈತರು ಕಂಗೆಟ್ಟಿದ್ದಾರೆ. ಇಷ್ಟಾದರೂ ಸರ್ಕಾರ ರೈತರ ಸಂಕಷ್ಟದ ಸಂದರ್ಭದಲ್ಲಿ ರೈತರ ನೆರವಿಗೆ ಬಾರದೇ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಬಿಜೆಪಿ ಹಿರಿಯ ನಾಯಕ ಕೆ.ಎಸ್‌. ಈಶ್ವರಪ್ಪ ಕಿಡಿ ಕಾರಿದರು.

ಬುಧವಾರ ಜಿಲ್ಲೆಯ ಬರ ಅಧ್ಯಯನಕೆ ಆಗಮಿಸಿದ್ದ ಬಿಜೆಪಿ ಬರ ಅಧ್ಯಯನ ತಂಡದ ನೇತೃತ್ವ ವಹಿಸಿದ್ದ ಅವರು, ವಿಜಯಪುರ ತಾಲೂಕಿನ ತಾಜಪುರ, ತೊರವಿ ಗ್ರಾಮಗಳ ಜಮೀನಿಗೆ ಭೇಟಿ ನೀಡಿ ಒಣಗಿದ ಬೆಳೆ ಪರಿಶೀಲಿಸಿ ರೈತರಿಂದ ಅಹವಾಲು ಸ್ವೀಕರಿಸಿದರು.

ಬೆಳೆದು ನಿಂತ ಬೆಳಿ ಒಣಗಿ ಬಾಳಾ ತ್ರಾಸ್‌ ಪರಸ್ಥಿತಿ ಬಂದೈತ್ರಿ ಸಾಹೇಬ್ರ, ಸರ್ಕಾರ ಸಾಲ ಮನ್ನಾ ಮಾಡ್ತೀನಿ ಅಂತಿದ್ರೂ ಮಾಡಿಲ್ಲ, ಮಾಡಿದ ಸಾಲ ತೀರಿಸೋದ ಹೆಂಗಂತ ತಿಳಿವಲ್ತಾಗೇತಿ. ಸರ್ಕಾರಕ್ಕೆ ನೀವರ ಒಂಚೂರು ಹೇಳಿ ನಮ್ಮ ನೆರವಿಗೆ ಕಳಿಸಿಕೊಡ್ರಿ ಎಂದು ಅಂಗಲಾಚಿದರು.

ಮಳೆ ಇಲ್ಲದೇ ಬೆಳೆದು ನಿಂತಿರುವ ಬೆಳೆಗಳು ಸಂಪೂರ್ಣ ನಷ್ಟವಾಗಿದ್ದು, ಪ್ರತಿ ಜಮೀನಿನ ಬೆಳೆ ಹಾನಿಯೇ ಇಲ್ಲಿನ ಬರದ ಭೀಕರತೆಯನ್ನು ಮನವರಿಕೆ ಮಾಡಿಕೊಡುತ್ತಿದೆ. ಒಣಗಿದ ಬೆಳೆ ರಕ್ಷಣೆಗೆ ದಾರಿ ತೋಚದೇ ರೈತರು ಕಂಗಾಲಾಗಿದ್ದಾರೆ.

ಜಾನುವಾರುಗಳನ್ನು ಕಸಾಯಿಖಾನೆಗೆ ಮಾರಿಕೊಂಡು ರೈತರು ಪಟ್ಟಣಗಳಿಗೆ ಗುಳೆ ಹೋಗುತ್ತಿದ್ದಾರೆ. ಇಷ್ಟಾದರೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ ಎಂದು ದೂರಿದರು. ವಿಜಯಪುರ ಜಿಲ್ಲೆಯಲ್ಲಿ ಸಂಪೂರ್ಣ ಭೀಕರ ಬರ ಆವರಿಸಿದ್ದು, ಹೊಲದಲ್ಲಿ ಒಣಗಿರುವ ಬೆಳೆ ಸ್ವತ್ಛಗೊಳಿಸಲು ಕೂಡ ರೈತರ ಬಳಿ ಹಣ ಇಲ್ಲದ ಆರ್ಥಿಕ ಸಂಕಷ್ಟ ಎದುರಾಗಿದೆ. ಹೀಗಾಗಿ ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ಸಿಎಂ ಬರ ವೀಕ್ಷಣೆಗೆ ಮುಂದಾಗಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಶಾಸಕರಾದ ಎ.ಎಸ್‌. ಪಾಟೀಲ ನಡಹಳ್ಳಿ, ಸೋಮನಗೌಡ ಪಾಟೀಲ ಸಾಸನೂರ, ಪಕ್ಷದ ಮುಖಂಡ ವಿಜುಗೌಡ ಪಾಟೀಲ ಇತರರು ಜಿಲ್ಲೆಯಲ್ಲಿ ಮಳೆ ಇಲ್ಲದೇ ಆವರಿಸಿರುವ ಭೀಕರ ಬರ ಪರಿಸ್ಥಿತಿಯ ಮನವರಿಕೆ ಮಾಡಿಕೊಟ್ಟರು. 

ಜಿಲ್ಲೆಯ ಒಣಗಿದ ಬೆಳೆಗಳೇ ಇಲ್ಲಿನ ಭೀಕರ ಬರವನ್ನು ಮನವರಿಕೆ ಮಾಡಿಕೊಡುತ್ತಿವೆ. ಹೀಗಾಗಿ ಜಿಲ್ಲೆಯ ರೈತರ ಹೊಲದಲ್ಲಿ ಒಣಗಿ ನಿಂತಿರುವ ಬೆಳೆಯನ್ನು ಬೆಳಗಾವಿ ವಿಧಾನಸೌಧಕ್ಕೆ ತಂದು ಸದನದಲ್ಲಿ ತಂದು ಪ್ರದರ್ಶಿಸಿ. ಆಗಲಾದರೂ ದಪ್ಪ ಚರ್ಮದ ಸರ್ಕಾರ ಕಣ್ತೆರೆದು ನೋಡಲಿ ಎಂದು ಸಲಹೆ ನೀಡಿದರು. ಆರ್‌.ಎಸ್‌. ಪಾಟೀಲ, ಚಿದಾನಂದ ಚಲವಾದಿ, ರಾಜು ಬಿರಾದಾರ, ಶಿಲ್ಪಾ ಕುದರಗೊಂಡ ಇತರರು ಇದ್ದರು.

ಟಾಪ್ ನ್ಯೂಸ್

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.