30ರಂದು ಗ್ರಾಮ ಸ್ವರಾಜ್ಯ ಸಮಾವೇಶ
ಡಿಸಿಎಂ ಕಾರಜೋಳ, ಸಚಿವರು-ಸಂಸದರು-ಶಾಸಕರು ಭಾಗಿ
Team Udayavani, Nov 26, 2020, 5:52 PM IST
ತಾಳಿಕೋಟೆ: ಗ್ರಾಪಂ ಚುನಾವಣೆಗೆ ಪಕ್ಷವನ್ನು ಸಿದ್ಧಗೊಳಿಸಬೇಕು. ಕಾರ್ಯಕರ್ತರನ್ನು ತಯಾರಿಗೆರಾಜ್ಯಾದ್ಯಂತ 5 ಜಿಲ್ಲೆಗಳಿಗೆ ತಲಾ ಒಂದು ತಂಡ ರಚಿಸಿ ನ.27ರಿಂದ ಡಿ.3ರ ವರೆಗೆ ಗ್ರಾಮ ಸ್ವರಾಜ್ಯ ಸಮಾವೇಶ ನಡೆಯಲಿದ್ದು, ವಿಜಯಪುರ ಜಿಲ್ಲೆಯಲ್ಲಿ ನ.30ರಂದು ಎರಡು ಭಾಗಗಳಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ (ಕೂಚಬಾಳ) ಹೇಳಿದರು.
ಸಂಗಮೇಶ್ವರ ಸಭಾಭವನದಲ್ಲಿ ಬುಧವಾರಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಗಲಕೋಟೆ, ವಿಜಯಪುರ, ಯಾದಗಿರಿ, ಕಲ್ಬುರ್ಗಿ, ಬೀದರ ಒಳಗೊಂಡ ಜಿಲ್ಲೆಗಳಲ್ಲಿ ನಡೆಯಲಿರುವ ಸಮಾವೇಶದಲ್ಲಿ ಡಿಸಿಎಂ ಗೋವಿಂದ ಕಾರಜೋಳ, ವಸತಿ ಸಚಿವ ವಿ. ಸೋಮಣ್ಣ, ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ, ಶಾಸಕ ರಾಜುಗೌಡ ನರಸಿಂಹನಾಯಕ, ನಂದೀಶ ರಡ್ಡಿ, ಬಿಜೆಪಿ ರಾಜ್ಯಪ್ರಧಾನ ಕಾರ್ಯದರ್ಶಿ ಅಶ್ವತ್ಥ್ ನಾರಾಯಣ ಸೇರಿದಂತೆ ಸಂಸದರು, ಜಿಲ್ಲೆಯ ಶಾಸಕರು ಪಾಲ್ಗೊಳ್ಳಲಿದ್ದಾರೆ ಎಂದರು.
ಮೊದಲನೇ ಕಾರ್ಯಕ್ರಮ ಬಾಗಲಕೋಟೆಯಿಂದ ಪ್ರಾರಂಭಗೊಳ್ಳಲಿದ್ದು, ನ.30ರಂದು ವಿಜಯಪುರ ಜಿಲ್ಲೆಯಲ್ಲಿ ಸಮಾವೇಶ ನಡೆಯಲಿದೆ. ಮೊದಲನೇ ಕಾರ್ಯಕ್ರಮ ಬಬಲೇಶ್ವರ, ವಿಜಯಪುರ ನಗರ,ನಾಗಠಾಣ, ಚಡಚಣ, ಈ ನಾಲ್ಕು ಮಂಡಲ ರಾಣಿ ಚನ್ನಮ್ಮ ಸಬಾಭವನದಲ್ಲಿ ಬೆಳಗ್ಗೆ 11ಕ್ಕೆನಡೆಯಲಿದೆ ಎಂದರು. ಎರಡನೇಯದಾಗಿ ಮುದ್ದೇಬಿಹಾಳ, ದೇವರಹಿಪ್ಪರಗಿ, ಸಿಂದಗಿ, ಬಸವನ ಬಾಗೇವಾಡಿ ಮಂಡಲ ಒಳಗೊಂಡು ತಾಳಿಕೋಟೆ ಪಟ್ಟಣದ ಸಂಗಮೇಶ್ವರ ಸಭಾಭವನದಲ್ಲಿ ಮಧ್ಯಾಹ್ನ 3ಕ್ಕೆ ಸಮಾವೇಶ ನಡೆಯಲಿದೆ ಎಂದರು. ಈ ಸಮಾವೇಶಗಳ ಮೂಲಕ ಅಪೇಕ್ಷಿತರ ಪಟ್ಟಿ ತಯಾರಿಸಿ ಸಂಘಟನಾತ್ಮಕವಾಗಿ ಶಕ್ತಿಕೇಂದ್ರ, ಮಹಾಶಕ್ತಿ ಕೇಂದ್ರ, ಮಂಡಲ ಮತ್ತು ರಾಜ್ಯ-ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಎಲ್ಲ ಮೋರ್ಚಾಗಳ ಪದಾ ಧಿಕಾರಿಗಳು, ಭಾಗಿಯಾಗಲಿದ್ದಾರೆ ಎಂದರು.
ಈ ವೇಳೆ ಜಿಪಂ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಬಿಜೆಪಿ ಜಿಲ್ಲಾ ಉಪಾದ್ಯಕ್ಷ ಸಂಗನಗೌಡ ಚಿಕ್ಕೊಂಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಜೋಗೂರ,ಅಶೋಕ ಅಲಾಪುರ, ಜಿಲ್ಲಾ ಕಾರ್ಯದರ್ಶಿ ಕಾಶಿಬಾಯಿ ರಾಂಪುರ, ಸರಸ್ವತಿ ಫಿರಾಪುರ, ಶಿವಪ್ರಸಾದ ಹೂಗಾರ, ಜಿಲ್ಲಾ ಕಾರ್ಯದರ್ಶಿ ಬಿ.ಎಚ್. ಬಿರಾದಾರ, ಬಸವರಾಜ ಬೈಚಬಾಳ, ರಾಜಶೇಖರ ಪೂಜಾರಿ, ಬಸವನ ಬಾಗೇವಾಡಿ ಮಂಡಲ ಅಧ್ಯಕ್ಷ ಶಂಕರಗೌಡಪಾಟೀಲ, ದೇವರ ಹಿಪ್ಪರಗಿ ಮಂಡಲ ಅಧ್ಯಕ್ಷ ಭೀಮನಗೌಡ ಸಿದ್ದರಡ್ಡಿ, ಸಿಂದಗಿ ಅಧ್ಯಕ್ಷ ಈರಣ್ಣ ರಾವೂರ, ಮುದ್ದೇಬಿಹಾಳ ಮಂಡಲ ಅಧ್ಯಕ್ಷ ಪರಶುರಾಮ ಪವಾರ, ಮಂಡಲ ಪ್ರಧಾನ ಕಾರ್ಯದರ್ಶಿ ಮಂಜುನಾಥ ಶೆಟ್ಟಿ, ಈಶ್ವರ ಹೂಗಾರ, ಸಿದ್ದು ಹೆಬ್ಟಾಳ, ಕಾಶಿನಾಥ ಅರಳಿಚಂಡಿ ಇದ್ದರು.
ಬಿಜೆಪಿಯಲ್ಲಿ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯಷ್ಟೇ ಗ್ರಾಪಂ ಚುನಾವಣೆಗೆ ಪ್ರಾಮುಖ್ಯತೆ ನೀಡಲಾಗುತ್ತದೆ. ದೇಶದಲ್ಲಿ ನರೇಂದ್ರ ಮೋದಿ, ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ಇರುವುದರಿಂದ ಗ್ರಾಪಂ ಬಲವರ್ಧನೆಗೆ ಸಾಕಷ್ಟು ಅನುದಾನ ನೀಡಲಾಗುತ್ತಿದೆ. ಪ್ರತಿ ಗ್ರಾಪಂಗೆ 50 ರಿಂದ 70 ಲಕ್ಷ ರೂ. 14ನೇ ಮತ್ತು 15ನೇ ಹಣಕಾಸು ಯೋಜನೆಯಡಿ ಅನುದಾನ ನೀಡುತ್ತ ಬಂದಿದ್ದಾರೆ. ಗ್ರೇಡ್ 1 ಪಂಚಾಯ್ತಿಗಳಿಗೆ 1 ಕೋಟಿವರೆಗೆ ಅನುದಾನ ನೀಡುತ್ತ ಬರಲಾಗಿದೆ. -ಆರ್.ಎಸ್. ಪಾಟೀಲ, ಬಿಜೆಪಿ ಜಿಲ್ಲಾಧ್ಯಕ್ಷ
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿ ಕೃಷ್ಣ ಮಠಕ್ಕೆ ಬಾಳೆ ಎಲೆಯನ್ನು ನೀಡುವ ಯುವಕ
ತೊಗರಿ ರಾಶಿಗೆ ಬೆಂಕಿ ಹಚ್ಚಿ, ಪಂಪ್ ಸೆಟ್ ವಿದ್ಯುತ್ ಸಂಪರ್ಕ ಕಡಿತ ಮಾಡಿದ ದುಷ್ಕರ್ಮಿಗಳು!
ಸಮುದ್ರದಲ್ಲಿ ಪದ್ಮಾಸನ ಭಂಗಿ: ಕಾಲಿಗೆ ಸರಪಳಿ ಬಿಗಿದು ಈಜಿ ದಾಖಲೆ ಬರೆದ ಗಂಗಾಧರ್ ಜಿ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಚಾಲಕನ ಅವಾಂತರ: ನೂರಾರು ಮಂದಿಯ ಪ್ರಾಣ ಉಳಿಸಿದ ಕಾಪು ಎಸ್ಐ
ಅಹಿತಕರ ಬೆಳವಣಿಗೆಗಳು ಕಂಡುಬಂದರೆ ವಾಟ್ಸಾಪ್ ಮೂಲಕ ಮಾಹಿತಿ ಹಂಚಿಕೊಳ್ಳಿ; Compol ಶಶಿಕುಮಾರ್
ಹೊಸ ಸೇರ್ಪಡೆ
ಪದ್ಮ ಪ್ರಶಸ್ತಿ ಪ್ರಕಟ : ಬಿ.ಎಂ.ಹೆಗ್ಡೆ, ಎಸ್.ಪಿಗೆ ಪದ್ಮವಿಭೂಷಣ, ಕಂಬಾರರಿಗೆ ಪದ್ಮಭೂಷಣ
ಯಾವ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸಿ, ಯಶಸ್ಸು ಸಾಧಿಸಬೇಕು: ಡಿಸಿಎಂ ಅಶ್ವಥ್ನಾರಾಯಣ
ಹುಣಸೋಡು ಸ್ಫೋಟ ಪ್ರಕರಣ :ಕ್ರಷರ್ ಮಾಲೀಕ ಸೇರಿ ನಾಲ್ವರನ್ನು ಬಂಧಿಸಿದ ಪೊಲೀಸರು
ಮೇಲುಕೋಟೆ ವಜ್ರಾಂಗಿ ಆಭರಣ ಅವ್ಯವಹಾರ ಪ್ರಕರಣ: ಅರ್ಚಕ ನರಸರಾಜಭಟ್ ನೇಮಕಕ್ಕೆ ಹೈಕೋರ್ಟ್ ತಡೆ
145 ದಿನಗಳ ಬಳಿಕ ಪರಪ್ಪನ ಅಗ್ರಹಾರ ಜೈಲಿನಿಂದ ನಟಿ ರಾಗಿಣಿ ಬಿಡುಗಡೆ