ವಿಜಯಪುರ ಸುತ್ತ ಗುಡುಗುಸಿಡಿಲು ಸಹಿತ ಆಲಿಕಲ್ಲು ಮಳೆ

Team Udayavani, Apr 1, 2019, 4:37 PM IST

ವಿಜಯಪುರ: ನಗರ ಸುತ್ತ ಮುತ್ತ ಹಲವು ಕಡೆಗಳಲ್ಲಿ ರವಿವಾರ ಬಿರುಗಾಳಿ, ಗುಡುಗು, ಸಿಡಿಲು ಸಹಿತ ಭಾರಿ ಪ್ರಮಾಣದಲ್ಲಿ ಆಲಿಕಲ್ಲು ಮಳೆ ಸುರಿಯಿತು. ಸಂಜೆ 6 ಗಂಟೆ ಸುಮಾರಿಗೆ ಆರಂಭಗೊಂಡ ಮಳೆ ಗಂಟೆಗಟ್ಟಲೆ ಸುರಿಯಲು ಆರಂಭಿಸಿತು.
ವಿಜಯಪುರ ನಗರ, ರಂಭಾಪುರ, ಐನಾಪುರ ತಾಂಡಾ, ಕಗ್ಗೊàಡ, ಶಿವಣಗಿ, ಕೌಲಗಿ ಸೇರಿದಂತೆ ಹಲವು ಕಡೆಗಳಲ್ಲಿ ಬಿರುಗಾಳಿ ಸಹಿತ ಮಳೆ ಸುರಿಯುತ್ತಿದೆ. ಬಿರುಗಾಳಿ ಸಹಿತ ಮಳೆ ಸುರಿಯುತ್ತಿರುವ ಕಾರಣ ವಿಜಯಪುರ ನಗರ ಸೇರಿದಂತೆ ಬಹುತೇಕ ಗ್ರಾಮಗಳಲ್ಲಿ ವಿದ್ಯುತ್‌ ಸಂಪರ್ಕ ಕಡಿತವಾಗಿದೆ. ಮಳೆ ಪರಿಣಾಮ ಯಾವುದೇ ಹಾನಿಯಾಗಿಲ್ಲ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.
ಜಿಲ್ಲೆಯ ಮುದ್ದೇಬಿಹಾಳ, ಬಸವಬಾಗೇವಾಡಿ, ದೇವರಹಿಪ್ಪರಗಿ, ಇಂಡಿ, ಚಡಚಣ, ಕೊಲ್ಹಾರ ತಾಲೂಕು ಸೇರಿದಂತೆ ಇತರೆ ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇದ್ದು ಹಲವು ಕಡೆಗಳಲ್ಲಿ ತುಂತುರು ಮಳೆ ಸುರಿದಿದೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ