ರೈತರ ಹೋರಾಟ ಬೆಂಬಲಿಸಿ ನಾಳೆ ಹೆದ್ದಾರಿ ತಡೆ

ದೆಹಲಿಯಲ್ಲಿ ಇಂಟರ್‌ನೆಟ್‌ ಸಂಪರ್ಕ ಕಡಿತ ಮಾಡಿದೆ. ಶೌಚಾಲಯಗಳನ್ನು ನಾಶ ಮಾಡಲಾಗುತ್ತಿದೆ.

Team Udayavani, Feb 5, 2021, 6:17 PM IST

ರೈತರ ಹೋರಾಟ ಬೆಂಬಲಿಸಿ ನಾಳೆ ಹೆದ್ದಾರಿ ತಡೆ

ವಿಜಯಪುರ: ರೈತರು ಹಾಗೂ ಜನಸಾಮಾನ್ಯರ ಬದುಕಿಗೆ ಮಾರಕವಾಗಿರುವ ಕಾನೂನು ರೂಪಿಸುತ್ತಿರುವ ಕೇಂದ್ರ ಸರ್ಕಾರದ ಜನವಿರೋ ಧಿ ಕರಾಳ ಕಾಯ್ದೆಗಳನ್ನು ಹಿಂತೆಗೆದುಕೊಳ್ಳುವಂತೆ ಫೆ. 6ರಂದು ನಗರದಲ್ಲಿ ಹೆದ್ದಾರಿ ತಡೆ ಹೋರಾಟ ಹಮ್ಮಿಕೊಳ್ಳುವುದಾಗಿ ಅಖೀಲ ಭಾರತ ರೈತ ಸಂಘರ್ಷ ಸಮಿತಿ ತಿಳಿಸಿದೆ. ಜಂಟಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಂಘಟನೆಯ ಭೀಮಸಿ ಕಲಾದಗಿ, ಭರತಕುಮಾರ, ಬಾಳು ಜೇವೂರ ಇವರು ಫೆ. 6ರಂದು ನಗರದ ಸಿಂದಗಿ ಬೈಪಾಸ್‌ನ ರಾಷ್ಟ್ರೀಯ ಹೆದ್ದಾರಿ ತಡೆ ಹೋರಾಟ ನಡೆಸಲಾಗುತ್ತದೆ ಎಂದರು.

ಜ. 26ರ ಗಣರಾಜ್ಯೋತ್ಸವ ಸಂದರ್ಭದಲ್ಲಿ ದೆಹಲಿಯಲ್ಲಿ ಕಿಸಾನ್‌ ಸಂಯುಕ್ತ ಸಮಿತಿ ಪರ್ಯಾಯವಾಗಿ ನಡೆಸಿದ ಜನಗಣ ಪರೇಡ್‌ನ‌ ಟ್ರಾಕ್ಟರ್‌ ರ್ಯಾಲಿ ಸಂಪೂರ್ಣವಾಗಿ ಶಾಂತಿ ರೀತಿಯಲ್ಲಿ ಯಶಸ್ವಿಯಾಗಿತ್ತು. ಸತತ ಎರಡು ತಿಂಗಳ ವರೆಗೆ ರೈತ ಹೋರಾಟದ ಕುರಿತು ಮೌನವಾಗಿಯೇ ಮಲಗಿದ್ದ ಎಲ್ಲಾ ಮಾಧ್ಯಮಗಳು ಕೆಂಪುಕೋಟೆ ಮೇಲೆ ಖಲಿಸ್ತಾನಿ ಧ್ವಜ ಹಾರಿಸಲಾಗಿದೆ, ಆತಂಕವಾದಿಗಳು ದೇಶದ ಸಮ್ಮಾನಕ್ಕೆ ಧಕ್ಕೆ ತಂದಿದ್ದಾರೆ ಎಂದೆಲ್ಲಾ ಆರೋಪದ ಸುದ್ದಿಗಳನ್ನು ನೀಡಲಾರಂಭಿಸಿದವು. ಆದರೆ ವಾಸ್ತವಾಗಿ ಈ ಕಿಡಿಗೇಡಿ ಕೃತ್ಯ ಎಸಗಿದವರು ಬಿಜೆಪಿ ಕಾರ್ಯಕರ್ತರೇ ಎಂಬುದು ಬಯಲಾಗುತ್ತಲೇ ಮಾಧ್ಯಮಗಳು ಮೌನವಾದವು ಎಂದು ಆರೋಪಿಸಿದರು.

ಭಯಗ್ರಸ್ಥ ಕೇಂದ್ರ ಸರ್ಕಾರ ಸಾಮಾಜಿಕ ಜಾಲತಾಣದಲ್ಲಿ ಸತ್ಯ ವರದಿ ಮಾಡಿರುವ ಪತ್ರಕರ್ತರನ್ನು ಬಂಧಿಸುವ ಮೂಲಕ ಹೋರಾಟದ ಸತ್ಯವನ್ನು ಮರೆಮಾಚಲು ಹುನ್ನಾರ ನಡೆಸಿದೆ. ದೆಹಲಿಯಲ್ಲಿ ಇಂಟರ್‌ನೆಟ್‌ ಸಂಪರ್ಕ ಕಡಿತ ಮಾಡಿದೆ. ಶೌಚಾಲಯಗಳನ್ನು ನಾಶ ಮಾಡಲಾಗುತ್ತಿದೆ. ವಿದ್ಯುತ್‌ ಪೂರೈಕೆಯನ್ನು ನಿಲ್ಲಿಸುವ ಕೆಲಸಕ್ಕೆ ಮುಂದಾಗಿರುವ ಸರ್ಕಾರ ತನ್ನ ವೈಫಲ್ಯವನ್ನು ಒಪ್ಪಿಕೊಳ್ಳುತ್ತಲೇ ಸಾಗುತ್ತಿದೆ ಎಂದು ಟೀಕಿಸಿದರು.

ರೈತ ವಿರೋಧಿ ಕಾಯ್ದೆಗಳನ್ನು ರದ್ದುಗೊಳಿಸಬೇಕು. ಹೋರಾಟನಿರತ ರೈತರ ನಾಯಕರ ಮೇಲಿನ ಸುಳ್ಳು ಮೊಕದ್ದೆಮೆಗಳನ್ನು ರದ್ದುಗೊಳಿಸಬೇಕು. ಹೋರಾಟ ಸ್ಥಳದಲ್ಲಿ ಜಪು¤ ಮಾಡಿದ ವಾಹನಗಳನ್ನು ಬಿಡುಗಡೆ ಮಾಡಬೇಕು. ಬಂಧಿಸಿರುವ ಪತ್ರಕರ್ತರನ್ನು ಬೇಷರತ್ತಾಗಿ ಬಿಡುಗಡೆ ಮಾಡಬೇಕು. ನೀರು, ವಿದ್ಯುತ್‌, ಅಂತರ್ಜಾಲ, ಶೌಚಾಲಯಗಳ ಮೇಲಿನ ನಿರ್ಬಂಧ ತೆರವುಗೊಳಿಸಬೇಕು. ರಸ್ತೆಗೆ ಅಡ್ಡಲಾಗಿ ಕಟ್ಟಿರುವ ತಡೆಗೋಡೆ, ಕಂಟೇನರ್‌, ಕಬ್ಬಿಣದ ಮೊಳೆಗಳನ್ನು ತೆಗೆದುಹಾಕಿ ಸಂಚಾರವನ್ನು ಸುಗಮಗೊಳಿಸಬೇಕು ಎಂದು ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಅಖಿಲ ಭಾರತ ಕಿಸಾನ್‌ ಸಭಾದ ಪ್ರಕಾಶ್‌ಹಿಟ್ನಳ್ಳಿ, ಶಕ್ತಿಕುಮಾರ, ಸುಜಾತಾ ಸಿಂಧೆ, ಸುರೇಖಾ ರಜಪೂತ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.