ಜಲ ಸಂಗ್ರಹ ಯೋಗ್ಯ ಸ್ಥಳ ಗುರುತಿಸಿ


Team Udayavani, Sep 8, 2017, 3:09 PM IST

VIJ-1.jpg

ವಿಜಯಪುರ: ಭೀಕರ ಬರ ಹಾಗೂ ಅಂತರ್ಜಲ ಕುಸಿತದ ಕಾರಣ ಜಿಲ್ಲೆಯಲ್ಲಿ ಜಲಸಂಪನ್ಮೂಲ ಸದ್ಬಳಕೆಗಾಗಿ ಅಧಿಕಾರಿಗಳು ಸ್ಯಾಟ್‌ಲೆಟ್‌ ಮ್ಯಾಪಿಂಗ್‌ ಜಲ ಸಂಗ್ರಹ ಮಾಡುವ ಸೂಕ್ತ ಸ್ಥಳಗಳನ್ನು ಗುರುತಿಸಬೇಕು.
ಇದಕ್ಕಾಗಿ ಐದು ವರ್ಷದ ಕ್ರಿಯಾಯೋಜನೆ ರೂಪಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ| ಎಂ.ಬಿ.
ಪಾಟೀಲ ಸೂಚಿಸಿದರು.

ನಗರದ ಜಿಪಂ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಕೆಡಿಪಿ ತ್ರೆೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಈಗಾಗಲೇ ಬೃಹತ್‌ ನೀರಾವರಿ ಯೋಜನೆ ಅನುಷ್ಠಾನದ ಜತೆಗೆ ಸ್ಥಳೀಯ ಜಲಸಂಪನ್ಮೂಲ ಸದ್ಬಳಕೆಗೆ ಪ್ರಥಮ ಆದ್ಯತೆ ನೀಡಬೇಕಿದೆ. ಕೆರೆಗಳಿಗೆ ನೀರು ತುಂಬಿಸುವ ಜತೆಗೆ ಜಿಲ್ಲೆಯಲ್ಲಿ ಇದಕ್ಕಾಗಿ ನೈಸರ್ಗಿಕ ಜಲಸಂಪನ್ಮೂಲಗಳ ಸಂಗ್ರಹಕ್ಕಾಗಿ ವಿವಿಧ ಬಾಂದಾರ-ಚೆಕ್‌ ಡ್ಯಾಂ ಮತ್ತು ನೀರಿನ ಸಂಗ್ರಹ ಯೋಗ್ಯ ಸ್ಥಳ ಗುರುತಿಸಲು 5 ವರ್ಷಗಳ ಕ್ರಿಯಾ ಯೋಜನೆ ರೂಪಿಸಿ ಎಂದು ಸೂಚಿಸಿದರು.

ಈ ಕುರಿತಂತೆ ಜಿಲ್ಲೆಯ ಏಳೂ ವಿಧಾನಸಭಾ ಕ್ಷೇತ್ರವಾರು ಅನುದಾನ ದೊರಕಿಸಲು ಪ್ರಯತ್ನಿಸಲಾಗುವುದು. ಜಿಪಂ ಇಂಜಿನಿಯರಿಂಗ್‌ ವಿಭಾಗ, ಕೃಷಿ ಇಲಾಖೆ, ಜಿಲ್ಲಾಧಿಕಾರಿಗಳು ಮತ್ತು ಜಿಪಂ ಮುಖ್ಯ ಕಾರ್ಯನಿರ್ವಾಹಕ
ಅಧಿಕಾರಿಗಳ ಉಸ್ತುವಾರಿಯಲ್ಲಿ ಜಿಲ್ಲಾ ಯೋಜನಾ ವರದಿಯೊಂದನ್ನು ತಯಾರಿಸಿ ಈ ಕುರಿತು ಪ್ರಸ್ತಾವನೆ
ಸಹ ಸಲ್ಲಿಸುವಂತೆ ಸಲಹೆ ನೀಡಿದರು.

ನಗರದ ಭೂತನಾಳ ಕೆರೆ ಸಮಗ್ರ ಅಭಿವೃದ್ಧಿಗೆ 9 ಕೋಟಿ ರೂ. ವೆಚ್ಚದ ಯೋಜನೆಗೆ ನಗರಾಭಿವೃದ್ಧಿ ಪ್ರಾಧಿಕಾರದಿಂದ ಕಾಮಗಾರಿ ಕೈಗೆತ್ತಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಮನರೇಗಾಗ ಯೋಜನೆಯಲ್ಲಿ ಕೃಷಿ ಹೊಂಡ-ಚೆಕ್‌ ಡ್ಯಾಂ ನಿರ್ಮಾಣಕ್ಕೆ ಗಮನಹರಿಸುವ ಜತೆಗೆ ಬರುವ ಬೇಸಿಗೆಯಲ್ಲಿ ನೀರಿನ ಬೇಡಿಕೆಗೆ ಅನುಗುಣವಾಗಿ ಸಮರ್ಥವಾಗಿ ನಿಭಾಯಿಸಲು ಈಗಿನಿಂದಲೇ ಕೆರೆಗಳ ದುರಸ್ತಿ ಹಾಗೂ ಜಲ ಸಂಗ್ರಹಕ್ಕೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ವಿಜಯಪುರ ನಗರದ ಕುಡಿಯುವ ನೀರು ಸೌಲಭ್ಯಕ್ಕಾಗಿ ಕೊಲ್ಹಾರ, ಚಿಕ್ಕಗಲಗಲಿ ಜಾಕ್‌ವೆಲ್‌ ಮತ್ತು ನೀರು ಸಂಗ್ರಹಕ್ಕೆ ಕ್ರಮ ಕೈಗೊಳ್ಳಲಾಗಿದೆ. ಭೂತನಾಳ ಕೆರೆಯಿಂದ 12 ಎಂಎಲ್‌ಡಿ ಹಾಗೂ ವಿವಿಧ ಐತಿಹಾಸಿಕ ಬಾವಿಗಳಿಂದ 5 ಎಂಎಲ್‌ಡಿ ಸೇರಿ 17 ಎಂಎಲ್‌ಡಿ ನೀರು ಪಡೆಯಲಾಗುತ್ತಿದೆ.

ಮತ್ತೂಂದೆಡೆ ಐತಿಹಾಸಿಕ ಬಾವಿಗಳು ಶುದ್ಧ ಕುಡಿಯುವ ನೀರಿನ ಘಟಕಗಳ ವ್ಯವಸ್ಥೆ ಸಹ ಮಾಡಲಾಗುತ್ತಿದೆ. ಮಳೆಗಾಲ ಆರಂಭವಾಗಿದ್ದರೂ ಜಿಲ್ಲೆಯ ಹಲವೆಡೆ ಇನ್ನೂ ಕುಡಿಯುವ ನೀರಿನ ಕೊರತೆ ಇದೆ. ಹೀಗಾಗಿ ನೀರಿನ ಸಮಸ್ಯೆ ಸಂಪೂ‌ರಿಹಾರ ಕಾಣುವ ವರೆಗೆ ಟ್ಯಾಂಕರ್‌ ನೀರಿನ ಪೂ‌ಬೇಕು ಎಂದು ಸೂಚಿಸಿದರು.

ಕೃಷಿ ಇಲಾಖೆ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸಲು ಹನಿ ನೀರಾವರಿ, ಕೃಷಿ ಹೊಂಡ ನಿರ್ಮಾಣಕ್ಕೆ ಗುರಿ ಮೀರಿ ಸಾಧನೆ ಮಾಡಬೇಕು. ರಾಜ್ಯದಲ್ಲಿ 1.25 ಲಕ್ಷ ಕೃಷಿ ಹೊಂಡ ನಿರ್ಮಾಣದ ಗುರಿ ಹಾಕಿಕೊಂಡಿದ್ದು, ಜಿಲ್ಲೆಗೆ ಈಗಾಗಲೇ 5 ಸಾವಿರ ಕೃಷಿ ಹೊಂಡ ಮಂಜೂರಾಗಿವೆ. ಕೃಷಿ ಹೊಂಡಕ್ಕೆ ಅಗತ್ಯವಾದ ಪಾಲಿಥಿನ್‌ ಒದಗಿಸಿ ಯೋಜನೆ
ಪೂೂಳಿಸಿ ಎಂದು ಹೇಳಿದರು.

ಪ್ರಸಕ್ತ ಮುಂಗಾರಿನಲ್ಲಿ ನಿಗದಿತ ಪ್ರಮಾಣದ ಮಳೆಯಾಗದ ಕಾರಣ ಛಾಯಾಚಿತ್ರ ಸಹಿತ ಸಮಗ್ರ ಮಾಹಿತಿಯೊಂದಿಗೆ ವರದಿ ತಯಾರಿಸಬೇಕು. ಇದರಿಂದ ರೈತರಿಗೆ ಪರಿಹಾರಧನ ಒದಗಿಸಲು ವಾಸ್ತವ ವರದಿ ಸಲ್ಲಿಸಬೇಕು ಎಂದು
ಸೂಚಿಸಿದರು.

ಜಿಲ್ಲೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ವಿವಿಧ ಶಾಲಾ ಕಟ್ಟಡಗಳ ದುರಸ್ತಿಗೆ ಪ್ರಥಮಾದ್ಯತೆ ನೀಡಬೇಕು. ಪ್ರತಿ ಶಾಸಕರ ತಲಾ 25 ಲಕ್ಷ ರೂ. ಅನುದಾನದಲ್ಲಿ ಶಾಲೆಗಳ ದುರಸ್ತಿಗೆ ಕ್ರಮ ಕೈಗೊಳ್ಳಬೇಕು. ಆ ಮೂಲಕ ಯಾವುದೇ ಮಗು ಜೀವಹಾನಿ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಇಂತಹ ಶಾಲಾ ಕಟ್ಟಡಗಳ ದುರಸ್ತಿಗೆ ಅನುದಾನ ಲಭ್ಯವಾಗಿ ಸಂಪೂರ್ಣ ದುರಸ್ತಿ ಆಗುವ ವರೆಗೆ ಪರ್ಯಾಯ ಸ್ಥಳಗಳಲ್ಲಿ ಪಾಠ ಮಾಡಬೇಕು.

ಜಿಲ್ಲೆಯ ಶೈಕ್ಷಣಿಕ ಸಮಸ್ಯೆಗಳ ಕುರಿತು ಸಿ.ಎಂ. ಸಿದ್ಧರಾಮಯ್ಯ ಅವರ ಗಮನಕ್ಕೂ ತರಲಾಗಿದೆ. ಇದಕ್ಕಾಗಿ ಸಮಗ್ರ ವರದಿ ಸಹ ನೀಡಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ ತೋರದೇ ಸಮಗ್ರ ವರದಿ ಸಿದ್ಧಪಡಿಸಬೇಕು. ಬೇಜವಾಬ್ದಾರಿ ಕಂಡು ಬಂದಲ್ಲಿ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದರು.

ಜಿಪಂ ಅಧ್ಯಕ್ಷೆ ನೀಲಮ್ಮ ಮೇಟಿ, ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ, ಜಿಪಂ ಸಿಇಒ ಎಂ. ಸುಂದರೇಶಬಾಬು, ಎಸ್‌ಪಿ ಕುಲದೀಪ್‌ ಜೈನ್‌ ಇದ್ದರು. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.