Udayavni Special

ಪಕ್ಷೇತರ ಸದಸ್ಯೆಗೆ ಒಲಿದ ಅದೃಷ್ಟ

ಕಾಂಗ್ರೆಸ್‌ ಬೆಂಬಲದಿಂದ ಪಪಂ ಅಧ್ಯಕ್ಷೆಯಾಗಿ ನೀಲಮ್ಮ-ಉಪಾಧ್ಯಕ್ಷರಾಗಿ ಗೌಡರ ಅವಿರೋಧ ಆಯ್ಕೆ

Team Udayavani, Nov 7, 2020, 7:09 PM IST

vp-tdy-2

ನಿಡಗುಂದಿ: ಕೊನೆ ಕ್ಷಣದವರೆಗೂ ತೀವ್ರ ಕುತೂಹಲ ಕೆರಳಿಸಿದ್ದ ನಿಡಗುಂದಿ ಪಟ್ಟಣ ಪಂಚಾಯತ್‌ ಅಧ್ಯಕ್ಷೆಯಾಗಿ ಕಾಂಗ್ರೆಸ್‌ ಬೆಂಬಲಿತ ಪಕ್ಷೇತರ ಸದಸ್ಯೆ ನೀಲಮ್ಮ ದೊಡಮನಿ, ಉಪಾಧ್ಯಕ್ಷರಾಗಿ ಕಾಂಗ್ರೆಸ್‌ ಪಕ್ಷದ ಶಂಕರಲಿಂಗ ಗೌಡರ ಶುಕ್ರವಾರ ನಡೆದ ಚುನಾವಣೆಯಲ್ಲಿ ಅವಿರೋಧ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿದ್ದ ತಹಶೀಲ್ದಾರ್‌ ಶಿವಲಿಂಗಪ್ರಭು ವಾಲಿ ಆಯ್ಕೆಯನ್ನು ಘೋಷಿಸಿದರು. ಶಾಸಕ, ಸಂಸದರು ಸೇರಿ 18 ಜನ ಸದಸ್ಯರಲ್ಲಿ ಸಂಸದ ಹಾಗೂ ಕಾಂಗ್ರೆಸ್‌ ಪಕ್ಷದ ಸದಸ್ಯ ಚುನಾವಣಾ ಪ್ರಕ್ರಿಯೆಗೆ ಗೈರು ಹಾಜರಾದರು.

ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಪಕ್ಷೇತರ ಸದಸ್ಯೆ ನೀಲಮ್ಮ ದೊಡಮನಿ ಹಾಗೂ ಕಾಂಗ್ರೆಸ್‌ನ ಅನ್ನಪೂರ್ಣ ವಡವಡಗಿ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿಯಿಂದ ಶಿವಲೀಲಾ ಗೂಗಿಹಾಳ ಹಾಗೂ ಅನ್ನಪೂರ್ಣ ಉಳ್ಳಿ ನಾಮಪತ್ರ ಸಲ್ಲಿಸಿದ್ದರು.

ಮಧ್ಯಾಹ್ನ 1ಕ್ಕೆ ಬಂದ ಶಾಸಕ ಶಿವಾನಂದ ಪಾಟೀಲ ಕಾಂಗ್ರೆಸ್‌ ಪಕ್ಷದಿಂದ ನೀಲಮ್ಮ ದೊಡಮನಿ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಎಂದು ಘೋಷಿಸಿದರು. ಕಾಂಗ್ರೆಸ್‌ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದ ಅನ್ನಪೂರ್ಣ ವಡವಡಗಿ ನಾಮಪತ್ರ ಹಿಂದಕ್ಕೆ ಪಡೆದರು.

ಬಿಜೆಪಿಯಲ್ಲಿ ಗೊಂದಲ: ಕಳೆದ ಬಾರಿ ಅಧ್ಯಕ್ಷ ಚುನಾವಣೆಗೆ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದ ಶಂಕರ ರೇವಡಿ ಬಿಜೆಪಿ ಬೆಂಬಲಿಸಬಹುದೆಂಬ ನಿರೀಕ್ಷೆ ಇಟ್ಟು ಕೊಂಡಿತ್ತು. ಆದರೆ ಅವರು ಚುನಾವಣಾ ಪ್ರಕ್ರಿಯೆಯಿಂದಲೇ ದೂರ ಉಳಿದು ಯಾರ ಸಂಪರ್ಕಕ್ಕೂ ಸಿಗದೇ ಇದ್ದದ್ದು ಬಿಜೆಪಿಗೆ ತೀವ್ರ ಹಿನ್ನಡೆಯಾಯಿತು. ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಮತ ಚಲಾಯಿಸಲು ನಿಡಗುಂದಿಗೆ ಆಗಮಿಸಿದ್ದ ಸಂಸದ ರಮೇಶ ಜಿಗಜಿಣಗಿ ಬಿಜೆಪಿ ಅಭ್ಯರ್ಥಿ ಸೋಲುವ ಹಿನ್ನಲೆಯಲ್ಲಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲಿಲ್ಲ. ರಾಷ್ಟ್ರೀಯ ಪಕ್ಷವಾಗಿ ಸೋಲಲಿ, ಗೆಲ್ಲಲಿ ಸ್ಪ ರ್ಧಿಸುತ್ತೇವೆ ಎಂದು ಮಾಜಿ ಸಚಿವ ಎಸ್‌ ಕೆ. ಬೆಳ್ಳುಬ್ಬಿ ಘೋಷಿಸಿದ್ದರು. ಅನ್ನಪೂರ್ಣ ಉಳ್ಳಿ ಬಿಜೆಪಿ ಅಭ್ಯರ್ಥಿ ಎಂದು ಘೋಷಿಸಿದ್ದರು. ಆ ಪ್ರಕಾರ ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ್ದ ಶಿವಲೀಲಾ ಗೂಗಿಹಾಳ ನಾಮಪತ್ರ ಹಿಂದಕ್ಕೆ ಪಡೆದರು.

ಚುನಾವಣಾ ಪ್ರಕ್ರಿಯೆ ಆರಂಭಗೊಳ್ಳುವ ಮೊದಲು ಬಿಜೆಪಿಯಿಂದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಅನ್ನಪೂರ್ಣ ಉಳ್ಳಿ ಕೂಡಾ ಸೋಲುವ ಭೀತಿಯಿಂದ ನಾಮಪತ್ರ ಹಿಂದಕ್ಕೆ ಪಡೆದು ಅಚ್ಚರಿ ಮೂಡಿಸಿದರು. ಇದು ನೀಲಮ್ಮ ದೊಡಮನಿ ಅವಿರೋಧ ಆಯ್ಕೆಗೆ ದಾರಿಯಾಯಿತು. ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ ಪಕ್ಷದ ಶಂಕರಲಿಂಗ ಗೌಡರ ಒಬ್ಬರೇ ನಾಮಪತ್ರ ಸಲ್ಲಿಸಿದ್ದು ಅವರು ಅವಿರೋಧ ಆಯ್ಕೆಯಾದರು. ಉಪಾಧ್ಯಕ್ಷ ಸ್ಥಾನಕ್ಕೂ ಬಿಜೆಪಿ ಸ್ಪರ್ಧಿಸದಿರುವುದು ಹಲವು ಬಿಜೆಪಿ ಕಾರ್ಯಕರ್ತರ

ಆಕ್ರೋಶಕ್ಕೂ ಕಾರಣವಾಯಿತು. ಒಟ್ಟಾರೆ ಬಿಜೆಪಿಯಲ್ಲಿ ಗೊಂದಲದ ವಾತಾವರಣ ನಿರ್ಮಾಣಕ್ಕೆ ಕಾರಣವಾಯಿತು. ಪಕ್ಷ ಸೂಚಿಸಿದ್ದರೂ ಅಧ್ಯಕ್ಷ ಸ್ಥಾನಕ್ಕೆ ಸ್ಪ ರ್ಧಿಸದ ಅನ್ನಪೂರ್ಣ ಉಳ್ಳಿ ಮೇಲೆ ಪಕ್ಷ ವಿರೋಧಿ ಚಟುವಟಿಕೆಯ ಕ್ರಮ ಕೈಗೊಳ್ಳುವಂತೆ ಹಲವು ಬಿಜೆಪಿ ಕಾರ್ಯಕರ್ತರು ಮಂಡಳಅಧ್ಯಕ್ಷರಿಗೆ ಒತ್ತಾಯಿಸಿದ ಘಟನೆಯೂ ನಡೆಯಿತು. ವಿಜಯೋತ್ಸವ: ಆಯ್ಕೆಯಾದ ನೀಲಮ್ಮ ದೊಡಮನಿ ಹಾಗೂ ಶಂಕರಲಿಂಗ ಗೌಡರ ಅವರ ವಿಜಯೋತ್ಸವ ಜರುಗಿತು. ಕಾಂಗ್ರೆಸ್‌ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದರೂ ಪರಿಶಿಷ್ಟ ಜಾತಿಗೆ ಸೇರಿದ ನನ್ನನ್ನು ಕಾಂಗ್ರೆಸ್‌ ಪಕ್ಷ ಪಪಂ ಅಧ್ಯಕ್ಷರನ್ನಾಗಿ ಮಾಡಿತು. ಶಾಸಕ ಶಿವಾನಂದ ಪಾಟೀಲ ಹಾಗೂ ಪಪಂ ಸದಸ್ಯರಿಗೆ ಧನ್ಯವಾದ ಅರ್ಪಿಸುತ್ತೇನೆ. ಲಭ್ಯವಿರುವ ಆರು ತಿಂಗಳ ಅವಧಿ ಯಲ್ಲಿ ಪಟ್ಟಣದಸರ್ವಾಂಗೀಣ ಅಭಿವೃದ್ಧಿ ಗೆ ಶ್ರಮಿಸುತ್ತೇನೆ. –ನೀಲಮ್ಮ ದೊಡಮನಿ, ಪಪಂ ನೂತನ ಅಧ್ಯಕ್ಷೆ

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

0000

ಕಣ್ಣಿಲ್ಲದವನಲ್ಲಿ ಸಾಧಿಸುವ ಕನಸಿತ್ತು : ಕೋಟಿ ಕೋಟಿ ಲಾಭ ಗಳಿಸುವ ಸಂಸ್ಥೆಯ ಸಿಇಓ ಶ್ರೀಕಾಂತ್

“ದೆಹಲಿ ಚಲೋ’ ವೇಳೆ ರೈತರು-ಪೊಲೀಸರ ನಡುವೆ ಘರ್ಷಣೆ; ಹರ್ಯಾಣದಲ್ಲಿ ಹೈಡ್ರಾಮಾ

“ದೆಹಲಿ ಚಲೋ’ ವೇಳೆ ರೈತರು-ಪೊಲೀಸರ ನಡುವೆ ಘರ್ಷಣೆ; ಹರ್ಯಾಣದಲ್ಲಿ ಹೈಡ್ರಾಮಾ

mamata-banerjee

ಬಿಜೆಪಿ ಹೊರಗಿನವರ ಪಕ್ಷ; ಬಿಜೆಪಿಯನ್ನು ಬಂಗಾಳದಲ್ಲಿ ಬೇರೂರಲು ಬಿಡುವುದಿಲ್ಲ ಮಮತಾ ಬ್ಯಾನರ್ಜಿ

ರೌಡಿಶೀಟರ್ ಸುಮಂತ್ ಕೊಲೆ ಪ್ರಕರಣ ಬೇಧಿಸಿದ ಪೊಲೀಸರು

ರೌಡಿಶೀಟರ್ ಸುಮಂತ್ ಕೊಲೆ ಪ್ರಕರಣ ಬೇಧಿಸಿದ ಪೊಲೀಸರು

02

ಯೋಗೀಶ್ ಗೌಡ ಹತ್ಯೆ ಪ್ರಕರಣ : ಮತ್ತೆ ವಿನಯ್ ಜಾಮೀನು ಅರ್ಜಿ ಸಲ್ಲಿಕೆ

“ಜಾತಿ ಗಣತಿ” ವರದಿಗೆ ತಾರ್ಕಿಕ ಅಂತ್ಯ: ಜಯಪ್ರಕಾಶ್‌ ಹೆಗ್ಡೆ ವಿಶ್ವಾಸ

“ಜಾತಿ ಗಣತಿ” ವರದಿಗೆ ತಾರ್ಕಿಕ ಅಂತ್ಯ: ಜಯಪ್ರಕಾಶ್‌ ಹೆಗ್ಡೆ ವಿಶ್ವಾಸ

ನೀಲಿ ಬಣ್ಣದ ಹೊಳೆಯುವ ಅಲೆಗಳಿಗೆ ಸಾಕ್ಷಿಯಾಗುತ್ತಿರುವ ಮಹಾರಾಷ್ಟ್ರದ ಕಡಲ ತೀರಗಳು

ನೀಲಿ ಬಣ್ಣದ ಹೊಳೆಯುವ ಅಲೆಗಳಿಗೆ ಸಾಕ್ಷಿಯಾಗುತ್ತಿರುವ ಮಹಾರಾಷ್ಟ್ರದ ಕಡಲ ತೀರಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿಂದಗಿ ಅಭಿವೃದ್ಧಿ ನನ್ನ ಕೆಲಸ: ಶಾಸಕ ಮನಗೂಳಿ

ಸಿಂದಗಿ ಅಭಿವೃದ್ಧಿ ನನ್ನ ಕೆಲಸ: ಶಾಸಕ ಮನಗೂಳಿ

30ರಂದು ಗ್ರಾಮ ಸ್ವರಾಜ್ಯ ಸಮಾವೇಶ

30ರಂದು ಗ್ರಾಮ ಸ್ವರಾಜ್ಯ ಸಮಾವೇಶ

ಭೈರಗೊಂಡ ಹತ್ಯಾ ಯತ್ನ ಪ್ರಕರಣ : ಪೊಲೀಸರಿಂದ ಮತ್ತಿಬ್ಬರ ಬಂಧನ

ಭೈರಗೊಂಡ ಹತ್ಯಾ ಯತ್ನ ಪ್ರಕರಣ : ಪೊಲೀಸರಿಂದ ಮತ್ತಿಬ್ಬರ ಬಂಧನ

ವಿಜಯಪುರ: ಕಬ್ಬಿನ‌ ಗದ್ದೆಯಲ್ಲಿ 2 ಚಿರತೆ ಮರಿಗಳು ಪತ್ತೆ

ವಿಜಯಪುರ: ಕಬ್ಬಿನ‌ ಗದ್ದೆಯಲ್ಲಿ ಚಿರತೆ ಮರಿಗಳು ಪತ್ತೆ

ಬ್ಯಾಂಕ್‌ ಏಳ್ಗೆಗೆ ಗ್ರಾಹಕರ ಸಹಕಾರ ಅಗತ್ಯ: ಯತ್ನಾಳ

MUST WATCH

udayavani youtube

ಮಂಗಳೂರು ವಿಮಾನನಿಲ್ದಾಣಕ್ಕೆ ಮಧ್ವಶಂಕರ ಹೆಸರು: ಪುತ್ತಿಗೆ ಶ್ರೀ ಒಲವು

udayavani youtube

ಶತಮಾನಗಳಿಂದಲೂ ನಡೆಯುತ್ತಿರುವ ತುಳುವರ ಭೂಮಿಪೂಜೆ ಗದ್ದೆಕೋರಿ ಈಗಲೂ ಇಲ್ಲಿ ಜೀವಂತ

udayavani youtube

ಮಂಗಳೂರು: ಉಪ್ಪುನೀರು ತಡೆ ಅಣೆಕಟ್ಟು ಕಾಮಗಾರಿ ವೀಕ್ಷಿಸಿದ ಸಚಿವ ಮಾಧುಸ್ವಾಮಿ

udayavani youtube

ಕರಾವಳಿಯಲ್ಲೂ ಪರಿಚಯವಾಯಿತು ಜಪಾನಿನ ಕೊಕೆಡಾಮ ಕಲೆ

udayavani youtube

ಕೊರೊನಾ ಪರಿಣಾಮ ಅಧ್ಯಯನಕ್ಕಾಗಿ ರೋಡ್ ಆಶ್ರಮ್ ಅಭಿಯಾನ

ಹೊಸ ಸೇರ್ಪಡೆ

ಹಣದ ವಿಚಾರಕ್ಕೆ ಮಹಿಳೆಯನ್ನು ಕೊಲೆಗೈದಿದ್ದಾತನಿಗೆ ಜೀವಾವಧಿ ಶಿಕ್ಷೆ

ಹಣದ ವಿಚಾರಕ್ಕೆ ಮಹಿಳೆಯನ್ನು ಕೊಲೆಗೈದಿದ್ದಾತನಿಗೆ ಜೀವಾವಧಿ ಶಿಕ್ಷೆ

IGP

ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ IGP ವಿುಲ್ ಕುಮಾರ್

0000

ಕಣ್ಣಿಲ್ಲದವನಲ್ಲಿ ಸಾಧಿಸುವ ಕನಸಿತ್ತು : ಕೋಟಿ ಕೋಟಿ ಲಾಭ ಗಳಿಸುವ ಸಂಸ್ಥೆಯ ಸಿಇಓ ಶ್ರೀಕಾಂತ್

ಹುಣಸೂರು: ಆಟೋ, ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಸವಾರ ಸಾವು

ಹುಣಸೂರು: ಆಟೋ, ಬೈಕ್ ಮುಖಾಮುಖಿ ಡಿಕ್ಕಿ; ಸವಾರ ಸಾವು

ಮoಡ್ಯ: ಸಿಎಂಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾದ ಮಹಿಳಾ ಸಂಘಟಕರು

ಮoಡ್ಯ: ಸಿಎಂಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾದ ಮಹಿಳಾ ಸಂಘಟಕರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.