ತಿಕೋಟಾ ತಾಲೂಕಲ್ಲಿ ಕಾಮಗಾರಿ ಪರಿಶೀಲನೆ


Team Udayavani, Jul 7, 2022, 3:45 PM IST

14work’

ವಿಜಯಪುರ: ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್‌ ಶಿಂಧೆ ಬುಧವಾರ ತಿಕೋಟಾ ತಾಲೂಕಿನಲ್ಲಿ ಪ್ರವಾಸ ಕೈಗೊಂಡು ತಾಲೂಕಿನ ಬಾಬಾನಗರ ಮತ್ತು ಬಿಜ್ಜರಗಿ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿದರು.

ಈ ವೇಳೆ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು. ಬಾಬಾನಗರ ಗ್ರಾಪಂ ವ್ಯಾಪ್ತಿಯಲ್ಲಿ, ಸಮಗ್ರ ಶಾಲಾ ಅಭಿವೃದ್ಧಿ ಕಾರ್ಯಕ್ರಮದಡಿ ಶಾಲೆಯೊಂದರ ಸುವ್ಯವಸ್ಥೆ ಕಂಡು ಸಿಇಒ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಹೈಟೆಕ್‌ ಶೌಚಾಲಯ, ರನ್ನಿಂಗ್‌ ಟ್ರ್ಯಾಫಿಕ್‌ ಅಡುಗೆ ಕೋಣೆ, ಭೋಜನಾಲಯ, ಶಾಲಾ ಕಾಂಪೌಂಡ್‌ ಮತ್ತು ಆಟದ ಮೈದಾನ ಕಾಮಗಾರಿ, ಅಮೃತ ಸರೋವರ ಕಾಮಗಾರಿ ವೀಕ್ಷಣೆ ನಡೆಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಇದೆ ವೇಳೆ ಸಿಇಒ ಅವರು ಅರಣ್ಯ ಇಲಾಖೆಯ ಸಸ್ಯ ಪಾಲನಾಲಯಕ್ಕೆ ಕೂಡ ಭೇಟಿ ನೀಡಿದರು. ವಿಶೇಷವಾಗಿ ಗ್ರಾಮ ಪಂಚಾಯಿತಿಗಳಿಗೆ ಪ್ರಥಮ ಆದ್ಯತೆಯಲ್ಲಿ ಸಸಿಗಳನ್ನು ವಿತರಿಸಬೇಕು ಎಂದು ಅರಣ್ಯ ಇಲಾಖೆ ಅಧಿ ಕಾರಿಗಳಿಗೆ ಸೂಚಿಸಿದರು.

ಕೆರೆ ಅಭಿವೃದ್ಧಿ ಕಾಮಗಾರಿ ಪರಿಶೀಲನೆ: ಬಳಿಕ ಬಿಜ್ಜರಗಿ ಗ್ರಾಪಂ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ಕೆರೆ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದರು. ಕಾಮಗಾರಿ ಸ್ಥಳದಲ್ಲಿ ಕೆಲಸ ನಿರ್ವಹಿಸುತ್ತಿದ್ದ 25ರಿಂದ 30 ಜನರೊಡನೆ ಸಮಾಲೋಚನೆ ನಡೆಸಿದರು. ವಿಶೇಷ ಚೇತನರೊಬ್ಬರು 100 ದಿನಗಳನ್ನು ಪೂರ್ಣಗೊಳಿಸಿದ ಬಗ್ಗೆ ಕೇಳಿ, ಅವರಿಗೆ ನರೇಗಾ ಯೋಜನೆಯಡಿ ಸಿಗುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. 100 ದಿನಗಳ ಪೂರ್ಣ ಕೆಲಸ ನಿರ್ವಹಿಸಿದ ನಂತರ ವಿಶೇಷ ತರಬೇತಿ ನೀಡುತ್ತಿದ್ದು, ಯೋಜನೆಯ ಉಪಯೋಗ ಪಡೆಯುವಂತೆ ಸಲಹೆ ನೀಡಿದರು.

ಗ್ರಾಪಂ ಕಟ್ಟಡ ಕಾಮಗಾರಿ ಸ್ಥಳಕ್ಕೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಸತಿ ನಿಲಯಕ್ಕೆ ಕೂಡ ಸಿಇಒ ಭೇಟಿ ನೀಡಿದರು. ವಸತಿ ನಿಲಯದಲ್ಲಿ ಮನರೇಗಾ ಯೋಜನೆಯಡಿ ಕೈಗೊಂಡ ಪೌಷ್ಟಿಕ ತೋಟ ನಿರ್ಮಿಸಿದ್ದನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಗ್ರಂಥಾಲಯಕ್ಕೂ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.

ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು. ಮನರೇಗಾ ಯೋಜನೆಯ ಸಂಪೂರ್ಣ ಸದ್ಬಳಕೆ ಮಾಡಿಕೊಂಡು ಮಾದರಿ ಗ್ರಾಮ ಮಾಡುವ ನಿಟ್ಟಿನಲ್ಲಿ ಎಲ್ಲ ಅ ಕಾರಿ ಮತ್ತು ಜನಪ್ರತಿನಿಧಿ ಗಳು ಮುಂದಾಗಬೇಕು. ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ಶುದ್ಧತೆ ಕಾಪಾಡಿಕೊಳ್ಳಲು ಮತ್ತು ನೀರಿನ ಸದ್ಬಳಕೆ ಮಾಡಿಕೊಳ್ಳಲು ತಿಳಿಸಿದರು.

ಬಿಜ್ಜರಗಿ ಗ್ರಾಮದ ಕೆರೆ ಅಭಿವೃದ್ಧಿ ಕಾಮಗಾರಿಯಲ್ಲಿ ವಿಕಲಚೇತನರಿಗು ಸಹ ಆದ್ಯತೆ ಮೇರೆಗೆ ಕೆಲಸ ನೀಡಿರುವುದು ನಿಜಕ್ಕೂ ಮೆಚ್ಚುವಂತಹ ಕಾರ್ಯ. ಇಂತಹ ಕೆಲಸ ಇತರೆ ಗ್ರಾಮ ಪಂಚಾಯಿತಿಗಳಿಗೆ ಮಾದರಿಯಾಗಲಿ ಎಂದು ಸಂತಸದಿಂದ ಶ್ಲಾಘಿ ಸಿದರು. ಶಾಲಾ ಮಕ್ಕಳಿಗೆ ಶಿಕ್ಷಣ ನೀಡುವ ವಿಷಯದಲ್ಲಿ ಯಾರೊಂದಿಗೂ ರಾಜಿ ಮಾಡಿಕೊಳ್ಳಬೇಡಿ ಎಂದ ಸಿಇಒ ಅವರು, ಶಾಲೆಯೊಂದರ ಗುಣಮಟ್ಟ ತಿಳಿಯುವುದು ಅದರ ಸುಂದರವಾದ ಕಟ್ಟಡದಿಂದಲ್ಲ, ಮಕ್ಕಳ ಶಿಕ್ಷಣದ ಫಲಿತಾಂಶದ ಆಧಾರದ ಮೇಲೆ ನಿರ್ಧರಿತವಾಗುತ್ತದೆ ಎಂದರು.

ಗ್ರಾಮೀಣ ಶಾಲಾ ಮಕ್ಕಳ ಶಿಕ್ಷಣ ಸಲುವಾಗಿ ವಸತಿ ನಿಲಯಗಳಲ್ಲಿ ಟ್ಯೂಷನ್‌ ಕ್ಲಾಸ್‌ ಆರಂಭಿಸಿ, ವಸತಿ ನಿಲಯದ ಮಕ್ಕಳ ಜೊತೆ ಇತರೆ ಮಕ್ಕಳಿಗೂ ಈ ಸೌಲಭ್ಯ ಕಲ್ಪಿಸುವಂತೆ ಸೂಚಿಸಿದರು.

ವಿದ್ಯಾರ್ಥಿನಿಗೆ ಸನ್ಮಾನ: ವಿಜಯಪುರದ ಸರ್ಕಾರಿ ಪಪೂ ಕಾಲೇಜಿನಲ್ಲಿ ಪಿಯೂ ದ್ವಿತೀಯ ವರ್ಷದ ಪರೀಕ್ಷೆಯಲ್ಲಿ ಶೇ.92.50 ಅಂಕ ಪಡೆದ ಬಾಬಾನಗರದ ಪೂಜಾ ಹಡಪದ ವಿದ್ಯಾರ್ಥಿನಿಯನ್ನು ಸನ್ಮಾನಿಸಿದರು.

ತಿಕೋಟಾ ತಾಪಂ ಇಒ ಎಚ್‌.ಡಿ. ರಾಜೇಶ, ಮನರೇಗಾ ಸಹಾಯಕ ನಿರ್ದೇಶಕ ಎಂ.ಬಿ.ಮನಗೂಳಿ, ಬಿಜ್ಜರಗಿ ಗ್ರಾಪಂ ಅಧ್ಯಕ್ಷ ಸುಭಾಷ್‌ಗೌಡ ಪಾಟೀಲ, ಬಾಬಾನಗರ ಪಿಡಿಒ ರೇಣುಕಾ ಸೋಲಾಪುರ, ಬಿಜ್ಜರಗಿ ಪಿಡಿಒ ಜೆ.ಎ.ದಶವಂತ, ತಾಂತ್ರಿಕ ಸಂಯೋಜಕರಾದ ಪ್ರಕಾಶ ಮಸಳಿ, ತಾಲೂಕು ಐಇಸಿ ಸಂಯೋಜಕ ಕಲ್ಲಪ್ಪ ನಂದರಗಿ ಇದ್ದರು.

ಟಾಪ್ ನ್ಯೂಸ್

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.