ಅರ್ಹರಿಗೆ ಸಾಲ ನೀಡಲು ಬ್ಯಾಂಕ್‌ಗೆ ಸೂಚನೆ

Team Udayavani, Sep 27, 2020, 4:57 PM IST

vp-tdy-2

ವಿಜಯಪುರ: ವಿಶೇಷ ಘಟಕ ಹಾಗೂ ಗಿರಿಜನ ಉಪ ಯೋಜನೆಯಡಿ ಅಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಸರ್ಕಾರ ರೂಪಿಸಿರುವ ವಿವಿಧ ಯೋಜನೆಗಳ ಸಾಲ-ಸಹಾಯಧನ ಸೌಲಭ್ಯ ಸಕಾಲಕ್ಕೆ ದೊರಕಿಸುವಂತೆ ನೋಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಬ್ಯಾಂಕ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಈ ಸೂಚನೆ ನೀಡಿದ ಅವರು, ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಸರ್ಕಾರ ರೂಪಸಿರುವ ಸಾಲ ಮತ್ತು ಸಹಾಯಧನ ಯೋಜನೆಗಳ ಸೌಲಭ್ಯ ಸಕಾಲಕ್ಕೆ ದೊರಕಿಸಿ ಕೊಡಲು ಮುಂದಾಗಬೇಕು. ಸಾಲ ನೀಡಲು ಮುಂಗಡ ಠೇವಣಿ ಹಣ ಪಡೆಯದಂತೆ ಬ್ಯಾಂಕ್‌ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪರಿಶಿಷ್ಟ ಜಾತಿ ಹಾಗೂ ಪಂಗಡದ ಎಂ.ಟೆಕ್‌, ಎಂಬಿಬಿಎಸ್‌ ಹಾಗೂ ವಿವಿಧ ಕೋರ್ಸ್‌ ಮಾಡಿದ ವಿದ್ಯಾರ್ಥಿಗಳಿಗೆ ಸಹಾಯಧನ ಹಾಗೂ ಪದವಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ವಿತರಣೆಯ ಕ್ರಿಯಾಯೋಜನೆ ತಯಾರಿಸುವಂತೆ ಸಂಬಂಧಿ ಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದ ಅವರು, ಹೆಚ್ಚಿನ ಅಂಕಗಳ ಆಧಾರದ ಮೇಲೆ ಅರ್ಹರನ್ನು ಆಯ್ಕೆ ಮಾಡುವಂತೆ ಸೂಚಿಸಿದರು.

ಕೋವಿಡ್‌-19 ಲಾಕ್‌ಡೌನ್‌ ಹಿನ್ನೆಲೆಯಲ್ಲಿ ತೀವ್ರ ಸಂಕಷ್ಟ ಎದುರಿಸುತ್ತಿರುವ ಪರಿಶಿಷ್ಟ ಜಾತಿಯ ಚಲವಾದಿ, ಸಿಂಗೆ ಜನಾಂಗಗಳಿಗೂ ಸರ್ಕಾರದಿಂದ ಸಹಾಯಧನ ಸೌಲಭ್ಯ ನೀಡುವಂತೆ ಸಮಿತಿ ಸದಸ್ಯ ಅಡಿವೆಪ್ಪ ಸಾಲಗಲ್‌ ಮನವಿ ಮಾಡಿದ್ದರಿಂದ ಈ ಕುರಿತು ಫಲಾನುಭವಿಗಳನ್ನು ಗುರುತಿಸಿ ಪಟ್ಟಿ ಸಿದ್ಧಪಡಿಸುವಂತೆ ಸೂಚಿಸಿದರು.

ದೌರ್ಜನ್ಯ ಪ್ರಕರಣದಲ್ಲಿ ನೊಂದ ಸಂತ್ರಸ್ತರಿಗೆ ಸಕಾಲಕ್ಕೆ ಪರಿಹಾರ ದೊರೆಯಬೇಕು. ಪರಿಹಾರ ನೀಡುತ್ತಿರುವುದು ಸೇರಿದಂತೆ ಪ್ರಗತಿ ಹಂತದ ಬಗ್ಗೆ ಕಾಲ ಕಾಲಕ್ಕೆ ಮಾಹಿತಿ ಸಹ ತಪ್ಪದೆ ಸಲ್ಲಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಪ್ರತಿಯೊಂದು ದೌರ್ಜನ್ಯ ಪ್ರಕರಣಗಳ ಹಂತಗಳ ಕುರಿತು ಮಾಹಿತಿ ನೀಡುವಂತೆ ಸಮಾಜ ಕಲ್ಯಾಣ ಅಧಿಕಾರಿಗಳಿಗೆ ಸೂಚಿಸಿದರು.

ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ಕಲ್ಪಿಸುವ ಜೊತೆಗೆ ನಿರಂತರ ಹಾಗೂ ಸಕಾಲಕ್ಕೆ ವಿದ್ಯುತ್‌ ಸಂಪರ್ಕ ಕಲ್ಪಿಸಬೇಕು. ತೊರವಿ ಗ್ರಾಮದ ಅಂಗನವಾಡಿ ಕಟ್ಟಡಕ್ಕೆ ಸಂಬಂ ಧಿಸಿದಂತೆ ಅನುದಾನ ಪ್ರಸ್ತಾವನೆ ಸಲ್ಲಿಸಬೇಕು. ನಗರದ ಡಾ| ಬಿ.ಆರ್‌. ಅಂಬೇಡ್ಕರ್‌ ವೃತ್ತ ಪುನರ್‌ ನವೀಕರಣಕ್ಕೆ ಕೈಗೊಳ್ಳುವುದಾಗಿ ಜಿಲ್ಲಾ ಧಿಕಾರಿ ಸುನೀಲಕುಮಾರ ಭರವಸೆ ನೀಡಿದರು. ಅತಾಲಟ್ಟಿ ಗ್ರಾಮದಲ್ಲಿ ವಿದ್ಯುತ್‌ ಸಮಸ್ಯೆ ನೀಗಿಸಬೇಕು. ಕೆಸರಟ್ಟಿ ಗ್ರಾಮದಲ್ಲಿನ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಬೇಕು. ತೊರವಿ ಗ್ರಾಮದ ಅಂಗನವಾಡಿ ಕಟ್ಟಡವನ್ನು ನಿರ್ಮಿಸಲು ಸೂಕ್ತ ನಿವೇಶನ ಇದ್ದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು. ಮುಸಕಿನಾಳ ಗ್ರಾಮದಲ್ಲಿ ಖಾಲಿಯಿರುವ ಅಂಗನವಾಡಿ ಸಹಾಯಕಿ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.

ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸ್‌ ಇಲಾಖೆಗೆ ಎಲ್ಲ ರೀತಿಯ ಸಹಕಾರ ನೀಡಿದ್ದಕ್ಕೆ ಎಸ್ಪಿ ಅನುಪಮ್‌ ಅಗರವಾಲ ಸಮಿತಿ ಸದಸ್ಯರಿಗೆ ಹಾಗೂ ಸಮುದಾಯದ ಜನರಿಗೆ ಅಭಿನಂದನೆ ಸಲ್ಲಿಸಿದರು.

ಜಿಪಂ ಸಿಇಒ ಗೋವಿಂದರೆಡ್ಡಿ, ಸುರೇಶ ಮಣ್ಣೂರ, ಅರವಿಂದ ಸಾಲವಾಡಗಿ, ಶಿವಾನಂದ ಪಟ್ಟೇದ, ರಾಜಶೇಖರ ಕೂಚಬಾಳ, ವಿನಾಯಕ ಗುಣಸಾಗರ, ಪರಶುರಾಮ ಮಾದರ, ಮುತ್ತಣ್ಣ ಸಾಸನೂರ, ಬಸವರಾಜ ಪೂಜಾರಿ, ಮನೋಹರ ಕಾಂಬಳೆ, ಗಣಪತಿ ಬಾಣಿಕೋಲ ಇವರು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ರಾಮನಗೌಡ ಸ್ವಾಗತಿಸಿದರು.

ಟಾಪ್ ನ್ಯೂಸ್

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

6-vijayapura

Vijayapura: ಸ್ಟೇಷನ್ ಬೇಲ್ ನೀಡಲು ಲಂಚ: ಇಬ್ಬರು ಕಾನ್‌ ಸ್ಟೇಬಲ್‌ ಲೋಕಾಯುಕ್ತ ಬಲೆಗೆ

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.