ಅನಾಥ ಮಕ್ಕ ಳ ಸಮೀಕ್ಷೆಗೆ ಜೊಲ್ಲೆ ಸೂಚನೆ

Team Udayavani, May 11, 2021, 10:28 AM IST

gfdfghgfd

ವಿಜಯಪುರ: ಕೋವಿಡ್‌ ಎರಡನೇ ಅಲೆ ಅತಿ ತೀವ್ರಗತಿಯಲ್ಲಿ ಹಬ್ಬುತ್ತಿರುವುದರಿಂದ ಈವರೆಗೆ ಕೋವಿಶಿಲ್ಡ್‌, ಕೊವ್ಯಾಕ್ಸಿನ್‌ ಮೊದಲ ಡೋಸ್‌ ಪಡೆದವರಿಗೆ ಎರಡನೇ ಡೋಸ್‌ ಅವಶ್ಯಕತೆಗಳ ಬಗ್ಗೆ ತಕ್ಷಣ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ತಹಶೀಲ್ದಾರ್‌ ಕಚೇರಿಯಲ್ಲಿ ಸೋಮವಾರ ಸಂಜೆ ಕೋವಿಡ್‌ ನಿಯಂತ್ರಣ ಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಮುಂದಿನ ದಿನಗಳಲ್ಲಿ ಕೋವಿಡ್‌ ಮೂರನೇ ಅಲೆಯ ಭಯವಿದ್ದು, ಕಾರಣ ಈ ಹಿಂದೆ ಕೋವಿಡ್‌ -19 ಮೊದಲ ಡೋಸ್‌ ಪಡೆದವರಿಗೆ ಕ್ಷೇತ್ರವಾರು ಆದ್ಯತೆ ಮೇಲೆ ಎರಡನೇ ಡೋಸ್‌ ನೀಡಬೇಕು. ಬೇಡಿಕೆಯ ಬಗ್ಗೆ ತಕ್ಷಣ ಪ್ರಸ್ತಾವನೆ ಸಲ್ಲಿಸುವಂತೆ ಸೂಚನೆ ನೀಡಿದರು. ಜಿಲ್ಲೆಯಲ್ಲಿ ಕೋವಿಡ್‌ ಆಸ್ಪತ್ರೆಗಳಲ್ಲಿ ದಾಖಲಾಗಿ ಮೃತಪಟ್ಟಿರುವ ಪಾಲಕರ ಮಕ್ಕಳನ್ನು ಗುರುತಿಸುವ ಕಾರ್ಯ ಮಾಡಬೇಕು. ತಾಯಿ ಹಾಗೂ ತಂದೆ ಕಳೆದುಕೊಂಡಿರುವ ಅಂತಹ ನಿರ್ಗತಿಕ ಮಕ್ಕಳ ಜೀವನಕ್ಕೆ ನೆರವಾಗಬೇಕು. ಅವರ ಪುನರ್ವಸತಿಗೆ ನೆರವಾಗಬೇಕು.

ಅದರಂತೆ ಅಂತಹ ಮಕ್ಕಳನ್ನು ತಕ್ಷಣ ಕೋವಿಡ್‌ ಕೇರ್‌ ಸೆಂಟರ್‌ಗಳಿಗೆ ದಾಖಲು ಮಾಡಿಕೊಂಡು ಮುಂದಿನ ಪ್ರಕ್ರಿಯೆಗಳನ್ನು ನಡೆಸುವಂತೆ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಪಾಲಕರನ್ನು ಕಳೆದುಕೊಂಡು ನಿರ್ಗತಿಕರಾಗಿರುವ ಮಕ್ಕಳ ಬಗ್ಗೆ ಮಾಹಿತಿ ಇದ್ದಲ್ಲಿ ಸಾರ್ವಜನಿಕರು ಕೂಡ ಟೋಲ್‌  ನಂಬರ್‌ 1098 ಹಾಗೂ 14499 ಕರೆ ಮಾಡಿ ಮಾಹಿತಿ ಒದಗಿಸಬಹುದಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ತಾಲೂಕಾಡಳಿತ ಮತ್ತು ಆರ್‌ಡಿಪಿಆರ್‌ ಇಲಾಖೆಗಳು ಸಮನ್ವಯತೆ ಸಾಧಿಸಿಕೊಂಡು ಇಂತಹ ನಿರ್ಗತಿಕ ಹೆಣ್ಣು ಮತ್ತು ಗಂಡು ಮಗುವಿಗೆ ಪ್ರತ್ಯೇಕವಾಗಿ ಕೇರ್‌ ಸೆಂಟರ್‌ ಆರಂಭಿಸಲು ಕ್ರಮ ಕೈಗೊಳ್ಳಲು ತಿಳಿಸಿದರು.

ಆಯುಷ್‌ ಆಸ್ಪತ್ರೆ ಕೊರೊನೇತರ: ನಗರದ ಆಯುಷ್‌ ಆಸ್ಪತ್ರೆಯನ್ನು ಕೋವಿಡೇತರ ಆಸ್ಪತ್ರೆಯಾಗಿ ಪರಿವರ್ತಿಸುವ ಬಗ್ಗೆ ಚಿಂತನೆ ಇದ್ದು ಅಲ್ಲಿ ಬೆಡ್‌ ಗಳ, ಸಿಬ್ಬಂದಿಗಳ ಮತ್ತು ಮೂಲಸೌಕರ್ಯಗಳ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಹೇಳಿದ ಅವರು, ವಿಜಯಪುರ ನಗರದಲ್ಲಿ ನಿರ್ಮಾಣಗೊಂಡಿರುವ ಸರಕಾರಿ ಸೂಪರ್‌ ಸ್ಪೇಷಾಲಿಟಿ ಆಸ್ಪತ್ರೆಯ ಪ್ರಥಮ ಹಂತದ ಕಾಮಗಾರಿಗಳು ಪೂರ್ಣಗೊಂಡಿದ್ದು ಈ ಆಸ್ಪತ್ರೆಯನ್ನು ಕೋವಿಡ್‌ ಆಸ್ಪತ್ರೆಯಾಗಿ ಪರಿವರ್ತಿಸುವ ಬಗ್ಗೆ ವೈದ್ಯಕೀಯ ಸಚಿವರ ಗಮನಕ್ಕೂ ಸಹ ತರುವುದಾಗಿ ಹೇಳಿದರು.

ಮೂರು ಆಕ್ಸಿಜನ್‌ ಪ್ಲಾಂಟ್‌ ಮಂಜೂರು: ನಗರದಲ್ಲಿ ಈಗಾಗಲೇ ಎರಡು ವಸತಿ ನಿಲಯಗಳನ್ನು ಕೋವಿಡ್‌ ಕೇರ್‌ ಕೇಂದ್ರವಾಗಿ ಪರಿವರ್ತಿಸಲಾಗಿದೆ. ರೋಗಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ನೋಡಿಕೊಳ್ಳುವಂತೆ ತಿಳಿಸಿದ ಅವರು, ವಿಜಯಪುರ, ಮುದ್ದೇಬಿಹಾಳ ಹಾಗೂ ಬಸವನಬಾಗೇವಾಡಿಗಳಿಗೆ ಆಕ್ಸಿಜನ್‌ ಪ್ಲಾಂಟ್‌ ಮಂಜೂರಾಗಿದ್ದು ಇದರಿಂದ ಅತ್ಯುತ್ತಮ ತಾಂತ್ರಿಕತೆಯ ಆಕ್ಸಿಜನ್‌ ಸೌಲಭ್ಯ ದೊರೆಯಲಿದೆ.

ಇದರಿಂದ ಮುಂಬರುವ ಒಂದು ತಿಂಗಳಲ್ಲಿ ಪ್ಲಾಟ್‌ನಿಂದ ಆಕ್ಸಿಜನ್‌ ಸೌಲಭ್ಯ ದೊರೆಯುವ ಆಶಾಭಾವನೆ ವ್ಯಕ್ತಪಡಿಸಿದ ಅವರು, ಜಿಲ್ಲೆಯ ಜನರೊಂದಿಗೆ ಮತ್ತು ಅವರ ಸಂಕಷ್ಟದ ಸ್ಥಿತಿಯಲ್ಲಿ ನಾವು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸದಾ ಇರಲಿದ್ದು, ಯಾವುದೇ ಪರಿಸ್ಥಿತಿಯಲ್ಲೂ ಆತ್ಮಸ್ಥೈರ್ಯ ಕಳೆದುಕೊಳ್ಳದಂತೆ ಸಭೆಯ ಮೂಲಕ ಜನತೆಯಲ್ಲಿ ಮನವಿ ಮಾಡಿದರು. ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾತನಾಡಿ, ನಗರದಲ್ಲಿ ಲಸಿಕೆ ನೀಡುವ ಕಾರ್ಯಕ್ರಮದಲ್ಲಿ ಶೇಕಡಾವಾರು ಇನ್ನಷ್ಟು ಪ್ರಗತಿ ಸಾಧಿಸಬೇಕು.

ನಗರದಲ್ಲಿ ಕೊರೊನಾ ಸೋಂಕಿತರು ಹೆಚ್ಚಿರುವ ಹಿನ್ನೆಲೆಯಲ್ಲಿ ಪ್ರಥಮ ಡೋಸ್‌ ನೀಡಿದವರಿಗೆ ಎರಡನೇ ಡೋಸ್‌ನ್ನು ಆದ್ಯತೆ ಮೇಲೆ ನೀಡಬೇಕು. ಅವಶ್ಯಕತೆ ಮತ್ತು ಲಸಿಕೆ ಬೇಡಿಕೆಯ ಬಗ್ಗೆ ತಕ್ಷಣ ಸಚಿವರ ಗಮನಕ್ಕೆ ತರಬೇಕು. ಪ್ರತಿ ದಿನ ಲಸಿಕೆಗಳ ಮತ್ತು ರೆಮ್‌ಡೆಸಿವಿಯರ್‌ ಬಗ್ಗೆ ಮಾಹಿತಿ ನೀಡಲು ಸಲಹೆ ನೀಡಿದರು. ವಿಧಾನ ಪರಿಷತ್‌ ಸದಸ್ಯ ಅರುಣ ಶಹಾಪುರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೋಳಸಂಗಿ, ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪುರ, ಜಿಪಂ ಸಿಇಒ ಗೋವಿಂದರೆಡ್ಡಿ, ಅಪರ ಜಿಲ್ಲಾಧಿಕಾರಿ ರಮೇಶ ಕಳಸದ, ಡಿಎಚ್‌ಒ ಮಹೇಂದ್ರ ಕಾಪ್ಸೆ, ಉಪ ವಿಭಾಗಾಧಿಕಾರಿ ಬಲರಾಮ ಲಮಾಣಿ ಇದ್ದರು.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.