ನೈಸರ್ಗಿಕ ಕೃಷಿಯಿಂದ ಬದುಕು ಹಸನು


Team Udayavani, Feb 23, 2018, 2:43 PM IST

vij-1.jpg

ತಾಳಿಕೋಟೆ: ಹಸುವಿನ ಸೆಗಣಿ ಮತ್ತು ಗೋಮೂತ್ರ ಬಳಿಸಿ ಮಾಡುವ ಕೃಷಿಯು ರೈತನ ಬದುಕಿನಲ್ಲಿ ಹೊಸ ಆಯಾಮ ಸೃಷ್ಟಿಸುವುದರೊಂದಿಗೆ ಆತನ ಬದುಕನ್ನು ಹಸನಾಗಿಸುತ್ತದೆ ಎಂದು ಭಾರತೀಯ ಜನತಾ ಪಕ್ಷದ ಕಿಸಾನ್‌ ಮೋರ್ಚಾದ ರಾಷ್ಟ್ರೀಯ ಉಪಾಧ್ಯಕ್ಷ ನರೇಶ ಸಿರೋಹಿ ಹೇಳಿದರು.

ಪಟ್ಟಣದ ಸಂಗಮೇಶ್ವರ ಸಭಾ ಭವನದಲ್ಲಿ ಮಲ್ಲನಗೌಡ ಬಿರಾದಾರ ಪ್ರಾಯೋಜಿತದ ಶೂನ್ಯ ಬಂಡವಾಳ ನೈಸರ್ಗಿಕ ಕೃಷಿ ಉಚಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಕೇವಲ ಒಂದು ಹಸುವಿನ ಗಂಜಲದಿಂದ ಬಳಕೆ ಮಾಡುವ ಕೃಷಿಯು ಸುಮಾರು ಮೂವತ್ತು ಎಕರೆಯಲ್ಲಿ ಫಲವತ್ತಾದ ಬೆಳೆಯನ್ನು ಬೆಳೆಯಬಹುದಾಗಿದೆ.

ಇದರಿಂದ ಜಮೀನಿನ ಮಣ್ಣಿನಲ್ಲಿ ಶಕ್ತಿ ಎಂಬುದು ಬರುತ್ತದೆ. ಇಂದಿನ ರಾಸಾಯನಿಕ ಗೊಬ್ಬರ ಬಳಕೆಯಿಂದ ಜಮೀನಿನಲ್ಲಿಯ ಮಣ್ಣಿನ ಸತ್ವ ಕಳೆದುಕೊಳ್ಳುವದರೊಂದಿಗೆ ಬರುವ ಫಸಲಿನಲ್ಲಿ ವರ್ಷದಿಂದ ವರ್ಷಕ್ಕೆ ಕುಸಿಯುತ್ತಾ ಸಾಗಿದೆ. ಉತ್ತಮ ಫಲವತ್ತತೆ ಬೆಳೆಯನ್ನು ಪಡೆಯಲು ನೈಸರ್ಗಿಕವಾದಂತ ಹಸುವಿನಿಂದ ಬರುವ ಗೊಬ್ಬರವನ್ನು ಬಳೆಕೆ ಮಾಡುವಂತಾಗಬೇಕೆಂದು ಹೇಳಿದರು.

ಭಾಜಪ ಕಿಸಾನ್‌ ಮೋರ್ಚಾ ರಾಷ್ಟ್ರೀಯ ಉಪಾಧ್ಯಕ್ಷ ಶಂಕರಗೌಡ ಪಾಟೀಲ ಮಾತನಾಡಿ, ಭೂಮಿಯಲ್ಲಿ ಬೆಳೆಯುವ ಬೆಳೆಗೆ ನೈಸರ್ಗಿಕ ವಸ್ತುಗಳನ್ನು ಬಳೆಸುವದನ್ನು ನಿಲ್ಲಿಸಿ ರಾಸಾಯನಿಕ ಗೊಬ್ಬರ, ಕ್ರಿಮಿ ನಾಶಕಗಳನ್ನು ಬಳಸುತ್ತಿರುವುದರಿಂದ ಫಸಲು ಕಡಿಮೆ ಬರಲು ಕಾರಣವಾಗಿದೆ. ನೈಸರ್ಗಿಕವಾಗಿ ರೈತರಿಗೆ ಸಿಗುವ ಬದುಕು ಇನ್ನಾವದರಲ್ಲಿಯೂ ಸಿಗಲು ಸಾಧ್ಯವಿಲ್ಲ. ಕೇವಲ ಒಂದು ಹಸುವಿನಿಂದ ಶೂನ್ಯ ಬಂಡವಾಳದಲ್ಲಿ 30 ಎಕರೆ ಭೂಮಿಯಲ್ಲಿ ಬೆಳೆಯಬಹುದಾದ ಫಸಲು ಸಾವಿರಾರು ರೂ. ಖರ್ಚು ಮಾಡಿ ರಾಸಾಯನಿಕ ವಸ್ತುಗಳ ಬಳಕೆಯಿಂದ 70 ಎಕರೆಯಲ್ಲಿ ಬೆಳೆಯುವಂತಾಗಿದೆ. ಇದನ್ನು ರೈತರು ಅರ್ಥೈಸಿಕೊಂಡು ನೈಸರ್ಗಿಕ ಕೃಷಿಯ ಕಡೆಗೆ ಮುಖಮಾಡಬೇಕೆಂದು ತಿಳಿ ಹೇಳಿದರು.

ಬಿಜೆಪಿ ಮುಖಂಡರಾದ ಮಲ್ಲನಗೌಡ ಬಿರಾದಾರ, ಕಾಶಿಬಾಯಿ ರಾಂಪೂರ, ಡಾ| ಸಂತೋಷಕುಮಾರ ಬಿರಾದಾರ, ಶಿವಾನಂದ ಬಿರಾದಾರ, ಬಸವರಾಜ ದಿಂಡೂರ, ಶಿವಶಂಕ್ರಗೌಡ ಅವರು ಮಾತನಾಡಿದರು. ನಂತರ ಪಾಲ್ಗೊಂಡ ರೈತಾಪಿ ವರ್ಗದವರಿಗೆ ಶೂನ್ಯ ಬಂಡವಾಳ ನೈಸರ್ಗಿಕ ಕೃಷಿ ಕುರಿತು ಕಾರ್ಯಾಗಾರ ನಡೆಯಿತು.

ಈ ಸಮಯದಲ್ಲಿ ಜಿಪಂ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಎಂ.ಎಸ್‌.ಪಾಟೀಲ (ನಾಲತವಾಡ), ಪ್ರಭು ಕಡಿ, ನಿಂಗಪ್ಪಗೌಡ ಬಪ್ಪರಗಿ, ಮಲಕೇಂದ್ರಾಯಗೌಡ ಪಾಟೀಲ, ಮಲ್ಲಿಕಾರ್ಜುನ ಶೆಟ್ಟರ, ಎಸ್‌.ಎಸ್‌. ಪಾಟೀಲ, ದ್ಯಾಮನಗೌಡ ಪಾಟೀಲ, ಸಂಗು ಕೊಪ್ಪದ, ಶಾಂತಗೌಡ ಪಾಟೀಲ, ಸಿದ್ದನಗೌಡ ಪಾಟೀಲ, ಡಾ| ಬಿ.ಎಸ್‌.ಬಿರಾದಾರ, ದಾನಪ್ಪಗೌಡ ಬಿರಾದಾರ, ಶಂಕ್ರಗೌಡ ಬಿರಾದಾರ, ಸಿದ್ದನಗೌಡ ಪಾಟೀಲ ಇದ್ದರು. ಮಲ್ಲನಗೌಡ ಬಿರಾದಾರ ಸ್ವಾಗತಿಸಿ, ವಂದಿಸಿದರು

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.