ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ-ರೈಲು ಸಂಚಾರದಲ್ಲಿ ವ್ಯತ್ಯಯ
Team Udayavani, Dec 11, 2020, 10:50 PM IST
ವಿಜಯಪುರ: ನಗರದ ರೈಲು ನಿಲ್ದಾಣ ಪ್ರದೇಶದ ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ ಹೊಡೆದ ಕಾರಣ ಹಳಿಗಳ ಮೇಲೆ ವಿದ್ಯುತ್ ಕಂಬ ಬಿದ್ದು ರೈಲು ಸಂಚಾರದಲ್ಲಿ ವ್ಯತ್ಯಯವಾದ ಘಟನೆ ಜರುಗಿದೆ.
ಲಾರಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ವಿದ್ಯುತ್ ಕಂಬಕ್ಕೆ ಸಂಪರ್ಕ ಕಲ್ಪಿಸಿರದ ಕಾರಣ ಸಂಭವನೀಯ ಅಪಾಯ ತಪ್ಪಿದೆ.
ಸತತ 3 ಗಂಟೆ ಕಾರ್ಯಾಚರಣೆ ಬಳಿಕ ಮುರಿದು ಬಿದ್ದಿದ್ದ ವಿದ್ಯುತ್ ಕಂಬವನ್ನು ತೆರವುಗೊಳಿಸಿದ ಬಳಿಕ ರೈಲು ಸಂಚಾರ ಪುನರಾರಂಭಗೊಂಡಿದೆ ಎಂದು ನೈರುತ್ಯ ರೈಲ್ವೆ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಾಣೇಶ್ ತಿಳಿಸಿದರು.
ಘಟನೆಯಿಂದ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ಬಾಗಲಕೋಟೆ ಮೈಸೂರು, ಸೋಲಾಪುರ ಮೈಸೂರು, ಗದಗ ಮುಂಬೈ ಭಾಗಕ್ಕೆ ತೆರಳುವ ರೈಲು ಸಂಚಾರ ಸುಮಾರು 3 ಗಂಟೆ ವಿಳಂಬವಾಗಿದೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444