ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಿ

Team Udayavani, Apr 15, 2022, 12:17 PM IST

10facility

ಮುದ್ದೇಬಿಹಾಳ: ಕೇಂದ್ರ ಸರ್ಕಾರದ ಕಿಸಾನ್‌ ಸಮ್ಮಾನ್‌ ಮಾದರಿಯಲ್ಲಿ ಸಮಾಜದ ಕಟ್ಟ ಕಡೆ ಸ್ಥಾನದಲ್ಲಿರುವ ದಲಿತ ಮಹಿಳೆಯರ ಅಭಿವೃದ್ಧಿಗೆ ಸಮ್ಮಾನ್‌ ಯೋಜನೆ ಜಾರಿಗೊಳಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇನೆ. ಈ ರೀತಿ ಪ್ರಸ್ತಾವನೆಯನ್ನು ಸರ್ಕಾರದ ಎದುರು ಇಟ್ಟಿರುವ ಮೊದಲ ಶಾಸಕ ನಾನಾಗಿದ್ದೇನೆ ಎಂದು ಶಾಸಕ, ಕರ್ನಾಟಕ ಆಹಾರ ನಿಗಮದ ಅಧ್ಯಕ್ಷ ಎ.ಎಸ್‌. ಪಾಟೀಲ ನಡಹಳ್ಳಿ ಹೇಳಿದರು.

ಇಲ್ಲಿನ ಅಂಬೇಡ್ಕರ್‌ ವೃತ್ತದಲ್ಲಿ ತಾಲೂಕಾಡಳಿತ, ಸಮಾಜ ಕಲ್ಯಾಣ ಇಲಾಖೆ, ಪುರಸಭೆ ಮತ್ತು ವಿವಿಧ ದಲಿತ, ಸಂಘಟನೆಗಳ ನೇತೃತ್ವದಲ್ಲಿ ಏರ್ಪಡಿಸಿದ್ದ ಭಾರತ ರತ್ನ ಡಾ| ಬಿ.ಆರ್‌. ಅಂಬೇಡ್ಕರ್‌ ಅವರ 131ನೇ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.

ಏ. 11ರಂದು ಉದಯವಾಣಿಯ ಮುಖಪುಟದಲ್ಲಿ ದಲಿತ ಮಹಿಳೆಯರ ಅಭಿವೃದ್ಧಿಗೆ ಸಮ್ಮಾನ್‌ ಶಿರೋನಾಮೆಯಡಿ ಪ್ರಕಟಗೊಂಡಿದ್ದ ವಿಶೇಷ ವರದಿ ಪ್ರಸ್ತಾಪಿಸಿ ಮಾತನಾಡಿದ ಅವರು, ಎಸ್ಸಿ, ಎಸ್ಟಿ ಮಹಿಳೆಯರು ಮದುವೆಯಾದ ಮೇಲೆ ಗುಳೆ, ವಲಸೆ ಹೋಗುವುದನ್ನು ತಡೆಯಬೇಕಿದೆ. ಇವರನ್ನು ಮೇಲೆತ್ತುವ ಸಂಕಲ್ಪವನ್ನು ನಮ್ಮ ಬಿಜೆಪಿ ಸರ್ಕಾರ ಮಾಡಿದೆ. 18 ವರ್ಷ ವಯಸ್ಸಿಗೆ ಬರುವ ಎಲ್ಲ ಎಸ್ಸಿ, ಎಸ್ಟಿ ಮಹಿಳೆಯರಿಗೆ ಮಾಸಿಕ ಸಾವಿರ ರೂ ಮಾಸಾಶನ ಕೊಡುವುದು ಸಮ್ಮಾನ್‌ ಯೋಜನೆಯ ಮುಖ್ಯ ಅಂಶವಾಗಿದೆ ಎಂದರು.

ಮುಂಬರುವ ದಿನಗಳಲ್ಲಿ ಪ್ರತಿಯೊಂದು ದಲಿತ ಕೇರಿಗೆ ಪ್ರವಾಸ ಮಾಡಿ ಅವರ ಮನೆಯ ವಾಸ್ತವ ಚಿತ್ರಣ, ಬೇಕು ಬೇಡಗಳ ಪಟ್ಟಿ ಮಾಡುತ್ತೇನೆ. ಅವರಿಗೆ ನ್ಯಾಯ ಕೊಡಿಸಲು ಅವರ ಧ್ವನಿಯಾಗಿ ವಿಧಾನಸಭೆಯ ಒಳಗಡೆ, ಹೊರಗಡೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಮುಖಂಡ ಡಿ.ಬಿ. ಮುದೂರ ಸಮಾಜದ ಪರವಾಗಿ ಪ್ರಸ್ತಾಪಿಸಿದ ಮೂರೂ ಬೇಡಿಕೆಗಳನ್ನು ಮುಂದಿನ ವರ್ಷದ ಅಂಬೇಡ್ಕರ್‌ ಜಯಂತಿ ಯೊಳಗೆ ಈಡೇರಿಸುತ್ತೇನೆ. ವಿಪಕ್ಷದವರು ಇತಿಹಾಸ ಮರೆಮಾಚುತ್ತಿದ್ದಾರೆ. ದಲಿತರನ್ನು ದಾರಿ ತಪ್ಪಿಸುವುವರಿಂದ ಎಚ್ಚರಾಗಿರಿ ಎಂದರು.

ಕಸಾಪ ಅಧ್ಯಕ್ಷ ಎಂ.ಎಚ್‌. ಹಾಲಣ್ಣವರ್‌, ಮುಖಂಡ ಡಿ.ಬಿ. ಮುದೂರ, ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್‌ ಬಿ.ಎಸ್‌. ಕಡಕಭಾವಿ ಮಾತನಾಡಿದರು. ಪುರಸಭೆ ಅಧ್ಯಕ್ಷೆ ಪ್ರತಿಭಾ ಅಂಗಡಗೇರಿ, ಉಪಾಧ್ಯಕ್ಷೆ ಶಾಜಾದಬಿ ಹುಣಚಗಿ, ಸ್ಥಾಯಿ ಸಮಿತಿ ಅಧ್ಯಕ್ಷ ಶಿವು ಶಿವಪುರ, ಪುರಸಭೆ ಸದಸ್ಯರು, ಗಣ್ಯರಾದ ಸೋಮನಗೌಡ ಬಿರಾದಾರ, ಅಯ್ಯೂಬ ಮನಿಯಾರ, ಎಸ್‌.ಬಿ. ಚಲವಾದಿ, ಹರೀಶ ನಾಟೀಕಾರ, ಚನ್ನಪ್ಪ ವಿಜಯಕರ್‌, ಪ್ರಕಾಶ ಚಲವಾದಿ, ಸಮಾಜ ಕಲ್ಯಾಣಾಧಿಕಾರಿ ಉಮೇಶ ಲಮಾಣಿ ಸೇರಿ ಎಲ್ಲ ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಸೇರಿ ಹಲವರು ವೇದಿಕೆಯಲ್ಲಿದ್ದರು. ಅಂತರ್ಜಾತಿ ವಿವಾಹವಾದ ದಂಪತಿಗಳಿಗೆ ಪ್ರೋತ್ಸಾಹಧನ ವಿತರಿಸಲಾಯಿತು.

ಟಿ.ಡಿ. ಲಮಾಣಿ ಕಾರ್ಯಕ್ರಮ ನಿರ್ವಹಿಸಿದರು. ಇದಕ್ಕೂ ಮುನ್ನ ನೇತಾಜಿ ನಗರದಿಂದ ಅಂಬೇಡ್ಕರ್‌ ವೃತ್ತದವರೆಗೆ ಅಂಬೇಡ್ಕರ್‌ ಅವರ ಭಾವಚಿತ್ರದ ಅದ್ದೂರಿ ಮೆರವಣಿಗೆ ನಡೆಸಲಾಯಿತು. ಇದಲ್ಲದೆ ತಹಶೀಲ್ದಾರ್‌ ಕಚೇರಿಯಲ್ಲಿ ತಾಲೂಕಾಡಳಿತ ವತಿಯಿಂದ, ವಿವಿಧ ಸರ್ಕಾರಿ ಕಚೇರಿಗಳಲ್ಲಿ ಆಯಾ ಮುಖ್ಯಸ್ಥರಿಂದ ಭಾವಚಿತ್ರ ಪೂಜಿಸಿ ಜಯಂತಿ ಆಚರಿಸಲಾಯಿತು. ಜಯಂತಿ ಹಿನ್ನೆಲೆ ಅಂಬೇಡ್ಕರ್‌ ವೃತ್ತ ಮತ್ತು ಮುಖ್ಯ ರಸ್ತೆಯ ಎರಡೂ ಬದಿ ಅಲಂಕಾರಿಕ ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿತ್ತು.

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.