ನ್ಯಾಯ ದೊರೆಯದಿದ್ದರೆ ಸಾಮೂಹಿಕ ಆತ್ಮಹತ್ಯೆ-ಎಚ್ಚರಿಕೆ

ಕುಮ್ಮಕ್ಕಿನಿಂದ ಸುಳ್ಳು ವರದಿಯನ್ನು ತಹಶೀಲ್ದಾರ್‌ ಅವರಿಗೆ ನೀಡಿದ್ದಾರೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ

Team Udayavani, Apr 16, 2021, 6:48 PM IST

Athma

ತಾಳಿಕೋಟೆ: ತಾಲೂಕಿನ ಹಗರಗುಂಡ ಗ್ರಾಮ ವ್ಯಾಪ್ತಿಯಲ್ಲಿನ ಜಮೀನನ್ನು ಸರಕಾರ 1974ರಲ್ಲಿ ಜಾರಿ ಮಾಡಿದ ಉಳುವವನೆ ಭೂಮಿ ಒಡೆಯ ಕಾಯ್ದೆ ಪ್ರಕಾರವಾಗಿ ಉಳುವವರಿಗೆ ಭೂಮಿ ನೀಡದೇ ಅಧಿಕಾರಿಗಳು ಅಧಿಕಾರ ದುರುಪಯೋಗಪಡಿಸಿಕೊಂಡು ನೈಜ ಫಲಾನುಭವಿಗಳಿಗೆ ಅನ್ಯಾಯ ಮಾಡುತ್ತಿದ್ದು, ನ್ಯಾಯ ದೊರೆಯದಿದ್ದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ರೈತರು ತಹಶೀಲ್ದಾರ್‌ ಮೂಲಕ ಡಿಸಿಗೆ ಮನವಿ ಸಲ್ಲಿಸಿದ್ದಾರೆ.

ಪಟ್ಟಣದ ತಹಶೀಲ್ದಾರ್‌ ಕಚೇರಿಗೆ ಆಗಮಿಸಿದ ರೈತರಾದ ಶಿವಬಸಮ್ಮ ಭಂಟನೂರ, ಲಕ್ಷ್ಮೀಬಾಯಿ ದೇಸಾಯಿ, ಈರಮ್ಮ ಕೊಣ್ಣೂರ, ಶರಣಗೌಡ ಭಂಟನೂರ, ಸುರೇಶ ಪಾಟೀಲ, ಬಸವರಾಜ ಪಾಟೀಲ ಮತ್ತಿತರರು ತಹಶೀಲ್ದಾರ್‌ ಗೆ ಮನವಿ ಸಲ್ಲಿಸಿದರು. ಈ ಕುರಿತು ಸಲ್ಲಿಸಿದ ಮನವಿಯಲ್ಲಿ 1973 ರಿಂದ ಇಲ್ಲಿಯವರೆಗೂ ಹಗರಗುಂಡ ಗ್ರಾಮದ ಸ.ನಂ.100/2ರ ಜಮೀನನ್ನು ವಿರೂಪಾಕ್ಷಪ್ಪಗೌಡ ಸಂಗಪ್ಪ ಪಾಟೀಲ ಇವರ ಹೆಸರು ಸಾಗುವಳಿಯಲ್ಲಿ ದಾಖಲಿದ್ದು, ಇವರ
ಕುಟುಂಬಸ್ಥರೇ ವಹಿವಾಟು ಉಪಭೋಗ ಮಾಡಿಕೊಂಡು ಬರುತ್ತಿದ್ದಾರೆ. ಇದರಿಂದ ಆರು ಕುಟುಂಬಗಳು ಜಮೀನಿನಿಂದ ಉಪ ಜೀವನ ಸಾಗಿಸುತ್ತಿದ್ದಾರೆ. ಆದರೆ ಜಮೀನಿನ ಉತಾರನಲ್ಲಿ ಸರಕಾರ ಎಂದು ದಾಖಲಾಗಿದ್ದು, ಇದನ್ನು ಕಡಿಮೆಗೊಳಿಸುವಂತೆ ಸ್ಥಳೀಯ ತಹಶೀಲ್ದಾರ್‌ ಅವರಿಗೆ 17-07-2020ರಂದೇ ಅರ್ಜಿ ನೀಡಲಾಗಿದ್ದರೂ ಅಧಿಕಾರಿಗಳು ನಿರ್ಲಕ್ಷಿಸುತ್ತಿದ್ದಾರೆ ಎಂದು ಮನವಿಯಲ್ಲಿ ದೂರಲಾಗಿದೆ.

ಅಲ್ಲದೇ ನಮ್ಮ ಅರ್ಜಿ ಪ್ರಕಾರ ಸಂಬಂಧಿಸಿದ ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರು ಸ್ಥಾನಿಕ ಚವಕಾಸಿ ಮಾಡದೇ ಓರ್ವ ವ್ಯಕ್ತಿಯ ಕುಮ್ಮಕ್ಕಿನಿಂದ ಸುಳ್ಳು ವರದಿಯನ್ನು ತಹಶೀಲ್ದಾರ್‌ ಅವರಿಗೆ ನೀಡಿದ್ದಾರೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಕೂಡಲೇ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

ತಲೆ ತಲಾಂತರದಿಂದಲೂ ಪೂರ್ವಜರ ಹೆಸರಿನಲ್ಲಿರುವ ಜಮೀನಿನ ಉತಾರೆಯಲ್ಲಿರುವ ಸರಕಾರವನ್ನು ಕಡಿಮೆ ಮಾಡಿ ನಮ್ಮ ಹೆಸರಿಗೆ ಮಾಡದಿದ್ದರೆ 6 ಕುಟುಂಬದ ಸದಸ್ಯರು ಡಿಸಿ ಕಚೇರಿ ಎದುರಿಗೆ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ. ಇದಕ್ಕೆ ಬಸವಂತ್ರಾಯ ಸಿದ್ದನಗೌಡ ಭಂಟನೂರ ಹಾಗೂ ತಾಳಿಕೋಟೆ ತಾಲೂಕಿನ ತಹಶೀಲ್ದಾರ್‌ ಕಚೇರಿ ಸಿಬ್ಬಂದಿಯೇ ನೇರ ಹೊಣೆಗಾರರಾಗಿರುತ್ತಾರೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಭೂ ಕಂದಾಯ ಇಲಾಖೆಗೆ ಮನವಿ ಸಲ್ಲಿಸಲಾಗಿತ್ತು. ಮನವಿಗೆ ಸ್ಪಂದಿಸಿರುವ ಭೂ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿಗಳು ವಿಜಯಪುರ ಜಿಲ್ಲಾಧಿಕಾರಿಗಳಿಗೆ 03-03-2021 ರಂದೇ ಮನವಿಯ ಮೇಲೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. ಆದರೆ ಇಲ್ಲಿಯವರೆಗೂ ಯಾವ ಅಧಿ ಕಾರಿಯೂ ಇದರ ಬಗ್ಗೆ ಕಿವಿಗೊಡುತ್ತಿಲ್ಲ ಎಂದು ನೊಂದ ರೈತರು ಆರೋಪಿಸಿದ್ದಾರೆ. ಉಪ ತಹಶೀಲ್ದಾರ್‌ ಎ.ಎನ್‌.ಶರ್ಮಾ ರೈತರ ಮನವಿ ಸ್ವೀಕರಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.