ಹೊನವಾಡ ಶಿಕಣ ಸಂಸ್ಥೆ ಅಧ್ಯಕ್ಷಕನ ಅನುಚಿತ ವರ್ತನೆ

Team Udayavani, Jan 2, 2022, 5:01 PM IST

19school

ವಿಜಯಪುರ: ಹೊನವಾಡ ಶಾಲೆ ಸಂಸ್ಥೆಯ ಅಧ್ಯಕ್ಷನ ಅನುಚಿತ ವರ್ತನೆ ಖಂಡಿಸಿ ಹಾಗೂ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಗೆ ಆಗ್ರಹಿಸಿ ವಿದ್ಯಾರ್ಥಿಗಳು ವಿಜಯಪುರ-ಅಥಣಿ ಹೆದ್ದಾರಿ ಸಂಚಾರ ತಡೆದು ವಿದ್ಯಾರ್ಥಿಗಳು ಶನಿವಾರ ಪ್ರತಿಭಟನೆ ನಡೆಸಿದರು.

ತಿಕೋಟಾ ತಾಲೂಕಿನ ಹೊನವಾಡ ಗ್ರಾಮದ ಖಾಸಗಿ ಶಿಕ್ಷಣ ಸಂಸ್ಥೆ ಬಸವಂತರಾಯ ಪದವಿ ಪೂರ್ವ ಅನುದಾನಿತ ಕಾಲೇಜಿನ ಅಧ್ಯಕ್ಷ ನಳಿನಿಕಾಂತ ಸಾವಂತ ವಿರುದ್ಧ ಮಕ್ಕಳು ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲದೇ ಸಂಸ್ಥೆಯ ಅಧ್ಯಕ್ಷರ ವಿರುದ್ಧ ಘೋಷಣೆ ಕೂಗಿ, ಕೂಡಲೇ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸಿದರು.

ಶಾಲೆಯಲ್ಲಿ ಸರಿಯಾಗಿ ಊಟದ ವ್ಯವಸ್ಥೆ ಮಾಡುತ್ತಿಲ್ಲ. ಶಿಕ್ಷಕರಿಗೆ ಹಾಗೂ ಮಕ್ಕಳಿಗೆ ಅವ್ಯಾಚ್ಯ ಶಬ್ದಗಳಿಂದ ನಿಂದನೆ ಮಾಡುತ್ತಾರೆ. ಹೀಗಾಗಿ ಕೂಡಲೇ ಸಾವಂತ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಪಟ್ಟು ಹಿಡಿದು ವಿಜಯಪುರ-ಅಥಣಿ ರಾಜ್ಯ ಹೆದ್ದಾರಿ ಬಂದ್‌ ಮಾಡಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ರಸ್ತೆ ಮೇಲೆ ಕಲ್ಲು-ಕಟ್ಟಿಗೆ ಹಾಕಿ ಹೆದ್ದಾರಿ ಸಂಚಾರ ಬಂದ್‌ ಮಾಡಿದ್ದರಿಂದ ಈ ಮಾರ್ಗದ ಸಂಚಾರದಲ್ಲಿ ಸಂಚಾರಕ್ಕೆ ಸಮಸ್ಯೆಯಾಗಿ ಪ್ರಯಾಣಿಕರು ಪರದಾಡುವಂತೆ ಮಾಡಿತ್ತು. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಆಗಮಿಸಿದ ತಿಕೋಟ ಎಸೈ ಅನಿತಾ ರಾಠೊಡ, ಪ್ರತಿಭಟನಾ ನಿರತ ಮಕ್ಕಳ ಮನವೊಲಿಸಿ, ಪ್ರತಿಭಟನೆ ಹಿಂಪಡೆಯುವಂತೆ ಮಾಡಿದರು.

ಬಳಿಕ ರಸ್ತೆ ಸಂಚಾರ ಸುಗಮಗೊಳಿಸಿದರು. ರಸ್ತೆ ಸಂಚಾರ ಸ್ಥಗಿತ ಹೋರಾಟ ಹಿಂಪಡೆದರೂ ಪ್ರತಿಭಟನೆ ಮುಂದುವರಿ ಸಿದ ಮಕ್ಕಳು, ಸಂಸ್ಥೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಹೋರಾಟ ಮುಂದುವರಿಸಿದರು.

ಪ್ರೌಢ ಶಾಲಾ ಮಕ್ಕಳಿಗೆ ಮತ್ತು ಸಹ ಶಿಕ್ಷಕರಿಗೆ ಅವಾಚ್ಯ ಪದಗಳಿಂದ ನಿಂದನೆ ಮಾಡುತ್ತಾರೆ. ಬಿಸಿ ಊಟದ ಸಮರ್ಪಕ ಪೂರೈಕೆ ಇಲ್ಲ, ಇದ್ದಾಗ ಶುಚಿತ್ವ ಹಾಗೂ ಸ್ವಾದಿಷ್ಟ ಆಹಾರ ನೀಡುತ್ತಿಲ್ಲ. ಕುಡಿಯಲು ಶುದ್ಧ ನೀರಿನ ವ್ಯವಸ್ಥೆ ಇಲ್ಲ. ಸಮಸ್ಯೆ ನಿವೇದಿಸಿ, ಸೌಲಭ್ಯಕ್ಕೆ ಮನವಿ ಮಾಡಿದರೆ ವಿದ್ಯಾರ್ಥಿಗಳನ್ನೇ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ ಎಂದು ಆರೋಪಿಸಿದರು.

ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕೆ ಸಾವಂತ ಕೂಡಲೇ ರಾಜೀನಾಮೆ ನೀಡುವಂತೆ ಪಟ್ಟು ಬಿಡದ ವಿದ್ಯಾರ್ಥಿಗಳ ಬೇಡಿಕೆಗೆ ಗ್ರಾಮಸ್ಥರು ಬಂಬಲಕ್ಕೆ ನಿಂತರು. ಇದರಿಂದ ಸ್ಥಳದಲ್ಲಿ ಕೆಲಕಲಾ ಪರಿಸ್ಥಿತಿ ವಿಕೋಪಕ್ಕೆ ಏರಿತು. ಕೂಡಲೇ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಪ್ರತಿಭಟನಾ ನಿರತ ಮಕ್ಕಳ ಮನವೊಲಿಸಲು ಪ್ರಯತ್ನ ನಡೆಸಿದರು.

ವಿಜಯಪುರ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎಸ್‌. ಹತ್ತಳ್ಳಿ, ಕ್ಷೇತ್ರ ಸಮನ್ವಯಾಧಿಕಾರಿ ಎಸ್‌.ಡಿ. ಮೊಸಲಗಿ, ತಾಪಂ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಸಂಜೀವ ಹುಲ್ಲೋಳ್ಳಿ, ಶಿಕ್ಷಣ ಸಂಯೋಜಕರು, ಪಿಡಿಒ ಬಿ.ಪಿ. ಉಪ್ಪಲದ್ದಿನ್ನಿ, ಪೊಲೀಸ್‌ ಇಲಾಖೆಯವರು ಸೇರಿ ಪರಿಸ್ಥಿತಿ ನಿಭಾಯಿಸಲು ಹೆಣಗುವಂತಾಯಿತು.

ಟಾಪ್ ನ್ಯೂಸ್

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.