Vijayapura; ರಾಜ್ಯದಲ್ಲಿ ಬರವಿದ್ಧಾಗಲೂ ಅಧಿಕಾರಕ್ಕಾಗಿ ಕಾಂಗ್ರೆಸ್ ಕಿತ್ತಾಟ: ನಳಿನ್ ಕಟೀಲ್

Team Udayavani, Nov 4, 2023, 3:12 PM IST

ನಳಿನ್ ಕಟೀಲ್

ವಿಜಯಪುರ: ಅಧಿಕಾರಕ್ಕಾಗಿ ಕಚ್ಚಾಟ ನಡೆಸಿರುವ ಕಾಂಗ್ರೆಸ್ ಸರ್ಕಾರ ಭೀಕರ ಬರದ ಸಂಕಷ್ಟದಲ್ಲಿರುವ ರೈತರ ಹಿತ ಕಾಯುವಲ್ಲಿ ವಿಫಲವಾಗಿದೆ. ಎರಡು ಬಾರಿ ಮುಖ್ಯಮಂತ್ರಿಯಾದರೂ ಸಿದ್ದರಾಮಯ್ಯ ಅವರಿಗೆ ಇನ್ನೂ ಆಡಳಿತ ನಡೆಸುವ ವಿಧಾನ ಗೊತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದರು.

ಶನಿವಾರ ಬಿಜೆಪಿ ಬರ ಅಧ್ಯಯನಕ್ಕಾಗಿ ತಮ್ಮ ನೇತೃತ್ವದಲ್ಲಿ ವಿಜಯಪುರ ಜಿಲ್ಲೆಯಲ್ಲಿ ರೈತರ ಜಮೀನಿಗೆ ಭೇಟಿ ನೀಡಿದ ಬಳಿಕ ತಿಕೋಟಾ ತಾಲೂಕಿನ ಜಾಲಗೇರಿ ಗ್ರಾಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ರೈತರು ಭೀಕರ ಬರದಿಂದ ಕಂಗೆಟ್ಟಿರುವ ಈ ಹಂತದಲ್ಲಿ ಕಾಂಗ್ರೆಸ್ ನಾಯಕರು ಅಧಿಕಾರಕ್ಕಾಗಿ ಕಿತ್ತಾಟ ನಡೆಸಿದ್ದು, ರಾಜ್ಯದ ಜನ ಆಕ್ರೋಶಗೊಳ್ಳುವಂತೆ ಮಾಡಿದೆ ಎಂದು ಟೀಕಾ ಪ್ರಹಾರ ನಡೆಸಿದರು.

ರಾಜ್ಯದ ಬರದಂಥ ಸಂಕಷ್ಟದ ಸಂದಭದಲ್ಲೂ ಸಿದ್ಧರಾಮಯ್ಯ ಅವರು ರಾಜಕೀಯ ಮಾಡಲು ಹೊರಟಿದ್ದಾರೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಸೃಷ್ಟಿಯಾದಾಗ ಕೇಂದ್ರದ ಪರಹಾರ ನಿಧಿ ಬಿಡುಗಡೆ ಆಗುವವರೆಗೆ ಕಾಯದೆ, ಎನ್‍ಡಿಆರ್‍ಎಫ್ ನಿಮಯ ಅಂತೆಲ್ಲ ಸಮಯ ವ್ಯರ್ಥ ಮಾಡದೆ ತುರ್ತಾಗಿ ಸಂತ್ರಸ್ಥರ ನೆರವಿಗೆ ಧಾವಿಸಿದ್ದರು. ಆದರೆ ಸಿದ್ಧರಾಮಯ್ಯ ಇನ್ನಾದರೂ ರಾಜಕಾರಣ ಮಾಡುವುದನ್ನು ನಿಲ್ಲಿಸಿ ಬರದ ಸಂಕಷ್ಟದಲ್ಲಿರುವ ರೈತರಿಗೆ ನೆರವು ನೀಡಲು ಮುಂದಾಗಬೇಕು ಎಂದು ಆಗ್ರಹಿಸಿದರು.

ಕೇಂದ್ರ ಸರ್ಕಾರ ಕೂಡ ತನ್ನ ಅಧಿಕಾರಿಗಳ ತಂಡವನ್ನು ಕಳಿಸಿ ಅಧ್ಯಯನ ನಡೆಸಿದೆ. ಆದರೆ ರಾಜ್ಯ ಸರ್ಕಾರ ಕರ್ನಾಟಕದಲ್ಲಿ ಭಿಕರ ಬರದಿಂದಾಗಿ ಆಗಿರುವ ಒಟ್ಟು ನಷ್ಟದ ಕುರಿತು ವಿವರವನ್ನೇ ಈವರೆಗೆ ಕೇಂದ್ರಕ್ಕೆ ನೀಡಿಲ್ಲ. ಆದರೂ ಕೇಂದ್ರದ ವಿರುದ್ಧ ನೆರವು ನೀಡಿಲ್ಲ ಎಂದು ಆರೋಪಿಸುವ ಮೂಲಕ ರಾಜಕೀಯ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ವಿಜಯಪುರ ಜಿಲ್ಲೆಯನ್ನೇ ಅವಲೋಕಿಸಿದರೆ ರಾಜ್ಯದ ಪ್ರಭಾವಿ ಸಚಿವರಾಗಿರುವ ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿನಿಧಿಸುವ ಬಬಲೇಶ್ವರ ಕ್ಷೇತ್ರ ವ್ಯಾಪ್ತಿಯ ತಿಕೋಟ ತಾಲೂಕನ್ನೇ ಬರ ಪೀಡಿತ ಘೋಷಿತ ತಾಲೂಕ ಪಟ್ಟಿಯಲ್ಲಿ ರಾಜ್ಯ ಸರ್ಕಾರ ಪ್ರಕಟಿಸಿರಲಿಲ್ಲ. ತಮ್ಮದೇ ಕ್ಷೇತ್ರವನ್ನು ಬರ ಪೀಡಿತ ಎಂದು ಘೋಷಿಸುವಲ್ಲೂ ಜಿಲ್ಲೆಯ ಸಚಿವರಿಗೆ ಸಾಧ್ಯವಾಗಿರಲಿಲ್ಲ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ವಿರುದ್ಧ ಟೀಕಾ ಪ್ರಹಾರ ನಡೆಸಿದರು.

ಇದನ್ನೂ ಓದಿ:World Cup 2023; ಭಾರತ ವಿರುದ್ಧ ಹೀನಾಯ ಸೋಲು; ತಂಡದಿಂದ ವಿವರಣೆ ಕೇಳಿದ ಲಂಕಾ ಮಂಡಳಿ

ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ಇದ್ದರೂ ಪಂಪ್‍ಸೆಟ್ ಆಧಾರಿತ ರೈತರು ಬೆಳೆ ಬೆಳೆಯಲು ಈ ಸರ್ಕಾರ ಸೂಕ್ತ ಹಾಗೂ ಸಮರ್ಪಕ ವಿದ್ಯುತ್ ನೀಡುತ್ತಿಲ್ಲ. ಅಲ್ಪಸರ್ವಲ್ಪ ಬೆಳೆ ಬೆಳೆದುಕೊಂಡಿರುವ ತಮ್ಮ ಬೆಳೇ ಉಳಿಸಿ ಎಂದು ಪಂಪ್‍ಸೆಟ್ ಇರುವ ರೈತರು ಗೋಗರೆದರೂ ಅವರ ಬೇಡಿಕೆಗೆ ಸ್ಪಂದಿಸುವ ಸೌಜನ್ಯ ತೋರದ ಈ ಸರ್ಕಾರ ಆಡಳಿತ ನಡೆಸುವಲ್ಲಿ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ಬರ ಪರಿಸ್ಥಿತಿ ಅಧ್ಯಯನ ನಡೆಸಿದ ಬಳಿಕ ಬಿಜೆಪಿ ತಂಡಗಳು ಬರ ಪರಿಸ್ಥಿತಿ ಕುರಿತು ಕೋರ ಸಮಿತಿ ಸಭೆಯಲ್ಲಿ ಚರ್ಚಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ವಾಸ್ತವಿಕ ವರದಿ ನೀಡಲಿದೆ. ಅಲ್ಲದೇ ತುರ್ತಾಗಿ ರೈತರ ನೆರವಿಗೆ ಧಾವಿಸುವಂತೆ ಆಗ್ರಹಿಸುತ್ತದೆ ಎಂದರು.

ಈ ಹಂತದಲ್ಲಿ ರೈತರು ಸರ್ಕಾರಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಹರಿಹಾಯ್ದರು, ಬರ ಬಿದ್ದಿರುವ ಈಗ ಈರುಳ್ಳಿ, ಟೊಮ್ಯಾಟೋ ಬೆಲೆ ಏರಿಸಿದ್ದಾರೆ. ಹೋಟೆಲ್‍ಗಳಲ್ಲಿ ದರ ಏರಿಕೆ ಮಾಡಿದರೂ ರೈತರ ಬೆಳೆಗಳಿಗೆ ಬೆಲೆ ಇಲ್ಲವಾಗಿದೆ. ಕನಿಷ್ಟ ಉತ್ತಮ ವಿದ್ಯುತ್ ನೀಡುತ್ತಿಲ್ಲ ಎಂದು ಅಶ್ಲೀಲ ಶಬ್ಧಗಳಿಂದಲೇ ನಿಂದಿಸಿ ಆಕ್ರೋಶ ಹೊರ ಹಾಕಿದಾಗ, ಬಾಗಲಕೋಟೆ ಸಂಸದ ಪಿ.ಸಿ.ಗದ್ದಿಗೌಡರ ರೈತನ ಹೆಗಲು ನೇವರಿಸಿ ಸಮಾಧಾನಿಸಿದರು.

ಇದೇ ವೇಳೆ ಸ್ಥಳದಲ್ಲಿದ್ದ ಮಹಿಳೆಯರು ಉಚಿತ ಬಸ್ ಎಂದು ನಿತ್ಯ ಕೆಲಸ ಬಿಟ್ಟು ಊರೂರಿಗೆ ತಿರುಗಲು ಆಗುತ್ತಾ? ಮಾನ ಇರುವ ಯಾರೂ ಸರ್ಕಾರಿ ಬಸ್‍ನಲ್ಲಿ ಪ್ರಯಾಣಿಸಲು ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದರು.

ಅವಳಿ ಜಿಲ್ಲೆಗಳ ಸಂಸದರಾದ ರಮೇಶ ಜಿಗಜಿಣಗಿ, ಪಿ.ಸಿ.ಗದ್ದಿಗೌಡರ, ಶಾಸಕ ಸಿದ್ದು ಸವದಿ, ಮಾಜಿ ಸಚಿವ ಮುರುಗೇಶ ನಿರಾಣಿ,ಬೆಸ್.ಕೆ.ಬೆಳ್ಳುಬ್ಬಿ, ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ, ಮಾಜಿ ಶಾಸಕರಾದ ರಮೇಶ ಭೂಸನೂರು, ಸೋಮನಗೌಡ ಸಾಸನೂರು, ಪಕ್ಷದ ಮುಖಂಡರಾದ ವಿಜುಗೌಡ ಪಾಟೀಲ, ಸಂಜಯ ಪಾಟೀಲ ಕನಮಡಿ, ಉಮೇಶ ಕಾರಜೋಳ, ಸುರೇಶ ಬಿರಾದಾರ, ಬಸವರಾಜ ಬಿರಾದಾರ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.