ಬರ ಕಾಮಗಾರಿ ನಿರ್ವಹಣೆಗೆ ಸೂಚನೆ
Team Udayavani, Jul 5, 2017, 1:37 PM IST
ವಿಜಯಪುರ: ಬರ ನಿರ್ವಹಣೆ ಮತ್ತು ನೀರಿನ ಕೊರತೆ ಎದುರಿಸಲು ಸಂಬಂಧಪಟ್ಟ ಇಲಾಖೆಯಲ್ಲಿರುವ
ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಜಾರಿಗೊಳಿಸಬೇಕು. ನಿಖರ ಮಾಹಿತಿ ಸಂಗ್ರಹಿಸಿ ಮುಂದಿನ ಯೋಜನೆಗಳ
ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ ಸೂಚನೆ ನೀಡಿದರು.
ಮಂಗಳವಾರ ಜಿಲ್ಲಾ ಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಬರ ಹಾಗೂ ನೀರಿನ ಕೊರತೆ ಎದುರಿಸುತ್ತಿರುವ
ಜಿಲ್ಲೆಯಲ್ಲಿ ಕೇಂದ್ರದ ಸರ್ಕಾರದ ಮಾರ್ಗಸೂಚಿಯಂತೆ ಜಿಲ್ಲಾ ಕ್ರಿಯಾಯೋಜನೆ ರಚಿಸುವ ಜಿಲ್ಲಾಮಟ್ಟದ ತಾಂತ್ರಿಕ
ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಂಗಾರು ಬಿತ್ತನೆ ಆರಂಭವಾಗಿರುವುದರಿಂದ
ಯಾವ ಬೆಳೆಗೆ ಎಷ್ಟು ನೀರಿನ ಅಗತ್ಯವಿದೆ ಎಂಬುವುದು ಅರಿತುಕೊಳ್ಳಬೇಕು. ಕೊಳವೆ ಬಾವಿ, ಕಾಲುವೆ ಸೇರಿದಂತೆ
ಮುಂತಾದ ನೀರಿನ ಮೂಲಗಳ ಮೂಲಕ ಬೆಳೆಗಳಿಗೆ ಅಗತ್ಯಾನುಸಾರ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು.
ಬ್ಲಾಕ್ ಮಟ್ಟದಲ್ಲಿ ಮಾಹಿತಿ ಸಂಗ್ರಹಿಸಿ ಮುಂದಿನ ಸಭೆಯಲ್ಲಿ ಪರಿಶೀಲನೆ ನಡೆಸಿ ಮುಂದಿನ ಯೋಜನೆ
ರೂಪಿಸಲಾಗುವುದು ಎಂದು ಹೇಳಿದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕ ಸಭೆಗೆ ಮಾಹಿತಿ ನೀಡಿ, ರಾಜ್ಯದ 16 ಬರಪೀಡಿತ ಜಿಲ್ಲೆಗಳಲ್ಲಿ ವಿಜಯಪುರ ಜಿಲ್ಲೆಯೂ ಸೇರಿದೆ. ಕೃಷಿಯ ಸ್ಥಿರತೆ, ಅಂತರ್ಜಲ ಅಭಿವೃದ್ಧಿ, ಕಾಲುವೆ ನಿರ್ಮಾಣ, ಕೃಷಿ ಹೊಂಡ, ಸಣ್ಣ ನೀರಾವರಿ, ನೀರಿನ ಪೋಲು ತಡೆಗಟ್ಟುವಿಕೆ, ಮುಂತಾದ ಕ್ರಿಯಾಯೋಜನೆ ರೂಪಿಸಲು ಜಿಲ್ಲಾ ಧಿಕಾರಿ ಅಧ್ಯಕ್ಷತೆಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ಸಭೆಯಲ್ಲಿ ಜಿಪಂ ಸಿಇಒ ಎಂ.ಸುಂದರೇಶಬಾಬು, ಅಪರ ಜಿಲ್ಲಾಧಿಕಾರಿ ಎಚ್.ಬಿ. ಬೂದೆಪ್ಪ ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
“ತಾಂಡವ’ ತಂಡಕ್ಕೆ ಮಧ್ಯಂತರ ರಕ್ಷಣೆ ನೀಡಲು ಸುಪ್ರೀಂ ಕೋರ್ಟ್ ನಕಾರ
ಜೆಡಿಎಸ್ ನ ಹೊರಟ್ಟಿಗೆ ಸಭಾಪತಿ ಸ್ಥಾನ : ಬಿಜೆಪಿಯ ಪ್ರಾಣೇಶ್ ಉಪ ಸಭಾಪತಿ
ಬೇಬಿಬೆಟ್ಟದ ಸುತ್ತ ಮಾರ್ಚ್ 24ರವರೆಗೆ ಎಲ್ಲ ರೀತಿಯ ಗಣಿಗಾರಿಕೆ ನಿಷೇಧ
ರಾಜ್ಯದ ಎಲ್ಲ ಅಂಗಡಿಗಳ ನಾಮಫಲಕ ಕನ್ನಡದಲ್ಲೇ ಇರಬೇಕು : ನಾಗಾಭರಣ
ರಾಜ್ಯದ ಒಂದಿಂಚು ಜಾಗವನ್ನೂ ಬಿಡೆವು, ನಮ್ಮನ್ನು ಕೆಣಕಿದರೆ ಪರಿಣಾಮ ನೆಟ್ಟಗಿರಲ್ಲ :ನಾರಾಯಣಗೌಡ