ಸಿಂದಗಿಯಲ್ಲಿ ಸಾವಯವ ಕೃಷಿ ಕ್ರಾಂತಿ ! ಸಂಸ್ಥೆಯ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ


Team Udayavani, Oct 1, 2020, 5:18 PM IST

ಸಿಂದಗಿಯಲ್ಲಿ ಸಾವಯವ ಕೃಷಿ ಕ್ರಾಂತಿ ! ಸಂಸ್ಥೆಯ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ

ಸಿಂದಗಿ: ಅತಿಯಾದ ರಸಗೊಬ್ಬರ, ಕೀಟನಾಶಕ ಮತ್ತು ನೀರು ಬಳಸುವ ಕೃಷಿಯಿಂದ ರೈತರು ಕೈ ಸುಟ್ಟಿಕೊಂಡಿದ್ದೇ ಹೆಚ್ಚು. ಇಂತಹ ಕೃಷಿಯಿಂದ ಉತ್ಪಾದನಾ ವೆಚ್ಚ ಹೆಚ್ಚಾಗುವ ಜೊತೆಗೆ ಭೂಮಿಯ ಸತ್ವವೂ ಸಾಯುತ್ತದೆ. ಆದರೆ ಸಾವಯವ ಕೃಷಿ ಕೈಗೊಂಡು ಹೆಚ್ಚಿನ ಆದಾಯ ಗಳಿಸುವ  ಜೊತೆಗೆ ಭೂಮಿಯ ಫಲವತ್ತತೆಯನ್ನೂ ಕಾಪಾಡಿಕೊಳ್ಳಲು ಸಾಧ್ಯ ಎಂಬುದನ್ನು ಇಲ್ಲಿನ ಯುವಕನೊಬ್ಬ ತೋರಿಸಿಕೊಟ್ಟಿದ್ದಾನೆ.

ರೈತರಿಗೆ ಸಾವಯವ ಕೃಷಿ ಬಗ್ಗೆ ಜಾಗೃತಿ ಮೂಡಿಸಬೇಕು. ವಿಷಮುಕ್ತ ಆಹಾರ ಉತ್ಪಾದಿಸಬೇಕು ಎಂಬ ಮಹತ್ತರ ಗುರಿ ಇಟ್ಟುಕೊಂಡ ತಾಲೂಕಿನ ಹರನಾಳ ಗ್ರಾಮದ ಬಿಎಸ್ಸಿ (ಕೃಷಿ) ಪದವಿ ಪಡೆದ ಯುವಕ ಮಹಾದೇವ ಶಿವಶಂಕ್ರಪ್ಪ ಅಂಬಲಿ 2006ರಲ್ಲಿ ಪರಮಾನಂದ ಗ್ರಾಮೀಣಾಭಿವೃದ್ಧಿ ಸಂಸ್ಥೆ ಸ್ಥಾಪಿಸುವ ಮೂಲಕ ಈ ಭಾಗದ ರೈತರಿಗೆ ಸಾವಯವ ಕೃಷಿ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ.

ಹಳ್ಳಿಯಲ್ಲಿ ಸ್ಥಾಪಿತವಾದ ಪರಮಾನಂದ ಗ್ರಾಮೀಣಾಭಿವೃದ್ಧಿ ಸಂಸ್ಥೆ ತನ್ನ 14 ವರ್ಷದ ಶ್ರಮದ ಫಲವಾಗಿ ಇಂದು ವಿಜಯಪುರ, ಬಾಗಲಕೋಟೆ, ಯಾದಗಿರಿ, ಕಲಬುರಗಿ ಹಾಗೂ ಬೀದರ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಕಾರ್ಯ ನಿರ್ವಹಿಸಿ ಸಾವಯವ ಕೃಷಿ ಕ್ರಾಂತಿ ಮಾಡುತ್ತಿದೆ. ಸಂಸ್ಥೆ ಈಗ ವಿಜಯಪುರ ಜಿಲ್ಲೆ ಸಾವಯವ ಕೃಷಿ ಪ್ರಾಂತಿಯ ಒಕ್ಕೂಟವಾಗಿ ಬೆಳೆದಿದೆ.

ಇದನ್ನೂ ಓದಿ :ಶಾಲೆ- ಕಾಲೇಜು ಆರಂಭದ ಬಗ್ಗೆ ಶೀಘ್ರವೇ ಸ್ಪಷ್ಟ ಮಾಹಿತಿ ಎಂದ ಡಿಸಿಎಂ ಅಶ್ವತ್ಥನಾರಾಯಣ

ಪರಮಾನಂದ ಗ್ರಾಮೀಣಾಭಿವೃದ್ಧಿ ಸಂಸ್ಥೆ ಪ್ರಾರಂಭದ ದಿನದಲ್ಲಿ ತಾಲೂಕಿನಲ್ಲಿ 250 ಎಕರೆ ಕೃಷಿ ಭೂಮಿಯನ್ನು ಸಾವಯವ ಕೃಷಿಗೆ ಅಳವಡಿಸಿತು. ಇಂದು ಸಾವಿರಾರು ಹೆಕ್ಟೇರ್‌ ಭೂಮಿ ಸಾವಯವ ಕೃಷಿ ಭೂಮಿಯಾಗಿ ಪರಿವರ್ತನೆಯಾಗಿದೆ. ರಾಜ್ಯ ಹಾಗೂ ಕೇಂದ್ರ ಸರಕಾರಗಳಿಂದ ಸಾಕಷ್ಟು ಪ್ರಶಸ್ತಿ ಪಡೆದು ಸಾಧನೆಯತ್ತ ಹೆಜ್ಜೆಯಿಡುತ್ತಿದೆ. ಯುವಕ ಮಹಾದೇವ ಅಂಬಲಿ ಸರಕಾರದ ವಿವಿಧ ಯೋಜನೆಗಳನ್ನು ಸಂಸ್ಥೆ ಮೂಲಕ ಸಾವಿರಾರು ರೈತರಿಗೆ ಎರೆಹುಳು ಗೊಬ್ಬರ ಘಟಕ, ಜೀವಸಾರ ಘಟಕ, ಜೀವಾಂಮೃತ ಘಟಕ ನಿರ್ಮಿಸಿಕೊಟ್ಟಿದ್ದಾರೆ.

ಲಾಕ್‌ಡೌನ್‌ ವೇಳೆ ಸಾವಯವ ಕೃಷಿಯಲ್ಲಿ ಬೆಳೆದ ಹಣ್ಣು ಮತ್ತು ತರಕಾರಿ ಮನೆ ಮನೆಗೆ ತಲುಪಿಸುವ ಕಾರ್ಯ ಮಾಡಿದ್ದಾರೆ. ಸಿರಿಧಾನ್ಯ ಕೃಷಿಯನ್ನು ಉತ್ತೇಜಿಸುವ ಸಲುವಾಗಿ ಪಟ್ಟಣದ ಕೈಗಾರಿಕಾ ಪ್ರದೇಶದಲ್ಲಿ ವಿಜಯಪುರ ಜಿಲ್ಲೆ ಸಾವಯವ ಕೃಷಿ ಪ್ರಾಂತಿಯ ಒಕ್ಕೂಟ ಅಡಿಯಲ್ಲಿ ಮರುಳಾರಾಧ್ಯ ಶಿವಾಚಾರ್ಯರ ಸಿರಿಧಾನ್ಯ ಸಂಸ್ಕರಣಾ ಘಟಕ ಸ್ಥಾಪಿಸಲಾಗಿದೆ.

– ರಮೇಶ ಪೂಜಾರ

ಟಾಪ್ ನ್ಯೂಸ್

2-DKSHI

Subramanya: ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

Lok Sabha Speaker: ಲೋಕಸಭಾ ಸ್ಪೀಕರ್ ಚುನಾವಣೆಗೆ ಓಂ ಬಿರ್ಲಾ, ಕೆ. ಸುರೇಶ್ ನಾಮಪತ್ರ ಸಲ್ಲಿಕೆ

Speaker Election: ಲೋಕಸಭಾ ಸ್ಪೀಕರ್ ಚುನಾವಣೆಗೆ ಓಂ ಬಿರ್ಲಾ, ಕೆ.ಸುರೇಶ್ ನಾಮಪತ್ರ ಸಲ್ಲಿಕೆ

9

ಡಿಸೆಂಬರ್‌ 20, 21 ಹಾಗೂ 22 ರಂದು ಮಂಡ್ಯ ಸಾಹಿತ್ಯ ಸಮ್ಮೇಳನ

DCM ಕೂಗು ಸರ್ಕಾರ ಪತನವಾಗುವರೆಗೂ ಮುಂದುವರೆಯುತ್ತೆ: ಸಿಟಿ ರವಿ ಭವಿಷ್ಯ

DCM ಕೂಗು ಸರ್ಕಾರ ಪತನವಾಗುವರೆಗೂ ಮುಂದುವರೆಯುತ್ತೆ: ಸಿಟಿ ರವಿ ಭವಿಷ್ಯ

8

Bollywood: ಮದ್ವೆ ದಿನವೇ ಕುಡಿದು ಟೈಟ್‌ ಆದ ಸೋನಾಕ್ಷಿ ಗಂಡ; ಎಣ್ಣೆ ಪಾರ್ಟಿ ಎಂದ ನೆಟ್ಟಿಗರು

AFGvsBAN: ಪಂದ್ಯದ ವೇಳೆ ಕುಸಿದು ಬಿದ್ದ ಗುಲ್ಬದಿನ್; ಆಸ್ಕರ್‌ ಕೊಡಿ ಎಂದ ನೆಟ್ಟಿಗರು.!

AFGvsBAN: ಪಂದ್ಯದ ವೇಳೆ ಕುಸಿದು ಬಿದ್ದ ಗುಲ್ಬದಿನ್; ಆಸ್ಕರ್‌ ಕೊಡಿ ಎಂದ ನೆಟ್ಟಿಗರು.!

Udupi: ಜೈಲಿನಲ್ಲೇ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನಿಸಿದ ಗರುಡ ಗ್ಯಾಂಗ್ ವಾರ್ ಆರೋಪಿಗಳು

Udupi: ಜೈಲಿನಲ್ಲೇ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನಿಸಿದ ಗರುಡ ಗ್ಯಾಂಗ್ ವಾರ್ ಆರೋಪಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

BJP ಹೈಕಮಾಂಡ್ ಗೆ ದೊಡ್ಡವರ ಪಕ್ಷ ವಿರೋಧಿ ಚಟುವಟಿಕೆ ಮಾಹಿತಿ: ಯತ್ನಾಳ್

1-Yat

B.S.Y.; ವೀರಶೈವ ಮಹಾಸಭಾ ಮೂರು ಕುಟುಂಬಗಳ ಆಸ್ತಿಯಂತಾಗಿದೆ: ಯತ್ನಾಳ್ ಕಿಡಿ

1-babay

Vijayapura: ವಿದ್ಯಾರ್ಥಿನಿಯರ ರೂಮ್ ಎದುರು ನವಜಾತ ಶಿಶುವಿನ ಶವ ಪತ್ತೆ

Renukaswamy Case: ನಟ ದರ್ಶನ್ ರಕ್ಷಣೆಗೆ ನಾನು ನಿಂತಿಲ್ಲ: ಜಮೀರ್ ಅಹಮದ್

Renukaswamy Case: ನಟ ದರ್ಶನ್ ರಕ್ಷಣೆಗೆ ನಾನು ನಿಂತಿಲ್ಲ: ಜಮೀರ್ ಅಹಮದ್

ಸಿದ್ದರಾಮಯ್ಯ ರಾಜೀನಾಮೆ ನೀಡಿ ಚುನಾವಣೆ ಎದುರಿಸಲಿ: ಯತ್ನಾಳ್

Vijayapura; ಸಿದ್ದರಾಮಯ್ಯ ರಾಜೀನಾಮೆ ನೀಡಿ ಚುನಾವಣೆ ಎದುರಿಸಲಿ: ಯತ್ನಾಳ್

MUST WATCH

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

ಹೊಸ ಸೇರ್ಪಡೆ

ಮುಂಡ್ಕೂರು: ರಸ್ತೆಯಲ್ಲಿ ಬೃಹತ್‌ ಹೊಂಡ- ವಾಹನ ಸಂಚಾರಕ್ಕೆ ಕಿರಿಕಿರಿ

ಮುಂಡ್ಕೂರು: ರಸ್ತೆಯಲ್ಲಿ ಬೃಹತ್‌ ಹೊಂಡ- ವಾಹನ ಸಂಚಾರಕ್ಕೆ ಕಿರಿಕಿರಿ

ಬೈಂದೂರು: ಬಹುಕೋಟಿ ಬಸ್‌ ನಿಲ್ದಾಣ ಜಾನುವಾರು ತಂಗುದಾಣ!

ಬೈಂದೂರು: ಬಹುಕೋಟಿ ಬಸ್‌ ನಿಲ್ದಾಣ ಜಾನುವಾರು ತಂಗುದಾಣ!

Udayavani Campaign: ಕಾರ್ಕಳ-ಮೊದಲು 70, ಈಗ 20!

Udayavani Campaign: ಕಾರ್ಕಳ-ಮೊದಲು 70, ಈಗ 20!

12

Sandalwood: ಒಂದು ಆತ್ಮ ಮೂರು ಜನ್ಮ

2-DKSHI

Subramanya: ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.