ಕಿಡಿಗೇಡಿಗಳಿಂದ ಫ್ಲೆಕ್ಸ್‌ ವಿರೂಪಕ್ಕೆ ಆಕ್ರೋಶ

Team Udayavani, Mar 20, 2018, 3:48 PM IST

vij-3.jpg

ಮುದ್ದೇಬಿಹಾಳ: ಯುಗಾದಿ ಶುಭಾಶಯ ಮತ್ತು ಮಾ. 28ರಂದು ಪಟ್ಟಣದಲ್ಲಿ ವಿರಾಟ್‌ ಹಿಂದೂ ಸಮಾಜೋತ್ಸವ ಬೃಹತ್‌ ಶೋಭಾಯಾತ್ರೆ ನಡೆಸುವ ಮಾಹಿತಿ ಹೊಂದಿದ್ದ ಫ್ಲೆಕ್ಸ್‌ ಅನ್ನು ಕೆಲ ಕಿಡಿಗೇಡಿಗಳು ಬ್ಲೇಡ್‌ನಿಂದ ಕೊಯ್ದು ವಿರೂಪಗೊಳಿಸಿದ ಘಟನೆ ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದ್ದು ಹಿಂದೂ ಸಂಘಟನೆಗಳ ಕಾರ್ಯಕರ್ತರ ತೀವ್ರ ಆಕ್ರೋಶಕ್ಕೆ ಕಾರಣವಾಯಿತು.

ಫ್ಲೆಕ್ಸ್‌ ವಿರೂಪಗೊಳಿಸಿದ ಕಿಡಿಗೇಡಿಗಳ ಕ್ರಮ ಖಂಡಿಸಿ, ಅಂಥವರನ್ನು ಪತ್ತೆ ಮಾಡಿ ಬಂಧಿಸಬೇಕು ಎಂದು ಆಗ್ರಹಿಸಿ ಹಿಂದೂ ಪರ ಸಂಘಟನೆ, ಬಿಜೆಪಿ, ಆರೆಸ್ಸೆಸ್‌ ಕಾರ್ಯಕರ್ತರು ಪೊಲೀಸ್‌ ಠಾಣೆವರೆಗೂ ಕಾಲ್ನಡಿಗೆ ಮೂಲಕ ತೆರಳಿ ಪ್ರತಿಭಟನೆ ನಡೆಸಿ ತನಿಖೆಗೆ ಒತ್ತಾಯಿಸಿದ ಮನವಿಯನ್ನು ಪೊಲೀಸ್‌ ಅಧಿಕಾರಿಗಳಿಗೆ ಸಲ್ಲಿಸಿದರು.

ಇಲ್ಲಿನ ಮುಖ್ಯ ಬಜಾರ್‌ನಲ್ಲಿರುವ ಪುರಸಭೆ ವಾಣಿಜ್ಯ ಸಂಕೀರ್ಣ ಕಟ್ಟಡದ ಮೇಲೆ ಬಿಜೆಪಿ ಹಿರಿಯ ಮುಖಂಡ ಹೇಮರಡ್ಡಿ ಮೇಟಿ ಜನತೆಗೆ ಯುಗಾದಿ ಹಬ್ಬದ ಶುಭ ಕೋರುವ ಮತ್ತು ಮಾ. 28ರಂದು ಹಿಂದೂ ವಿರಾಟ್‌ ಸಮಾವೇಶ ಮತ್ತು ಶೋಭಾಯಾತ್ರೆ ನಡೆಸುವ ಮಾಹಿತಿ ಇದ್ದ ಶುಭಕೋರುವ ಫ್ಲೆಕ್ಸ್‌ನ್ನು 2-3 ದಿನಗಳ ಹಿಂದೆ ಅಳವಡಿಸಲಾಗಿತ್ತು. 

ಸೋಮವಾರ ಬೆಳಗ್ಗೆ ನೋಡಿದಾಗ ಫ್ಲೆಕ್ಸ್‌ನಲ್ಲಿದ್ದ ಸಾದ್ವಿ ಸರಸ್ವತಿ ಅವರ ಪೂರ್ತಿ ಮುಖ, ಹೇಮರಡ್ಡಿ ಮೇಟಿ, ಬಿಜೆಪಿ ಮುಖಂಡ ಶಾಂತಗೌಡ ಬಿರಾದಾರ ಅವರ ಕಣ್ಣು ಕತ್ತರಿಸಿದ್ದಲ್ಲದೆ ಫ್ಲೆಕ್ಸ್‌ನಲ್ಲಿದ್ದ ಹಿಂದೂ ಸಂಘಟನೆ ಪ್ರಮುಖರಾದ ರಾಜೇಂದ್ರಗೌಡ ರಾಯಗೊಂಡ, ಚೇತನ್‌ ಮೋಟಗಿ, ಶೇಖರ ಢವಳಗಿ ಅವರ ಮುಖದ ಭಾಗಕ್ಕೆ, ಫ್ಲೆಕ್ಸ್‌ನ ಅಲ್ಲಲ್ಲಿ ಬ್ಲೇಡಿ ನಿಂದ ಹರಿದು ವಿರೂಪಗೊಳಿದ್ದು ಕಂಡು ಬಂದಿತ್ತು.

ವಿಷಯ ಎಲ್ಲೆಡೆ ಹರಡಿದ್ದರಿಂದ ಸಾವಿರಾರು ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಿ ಕಿಡಿಗೇಡಿಗಳ ವಿರುದ್ಧಧಿಕ್ಕಾರ ಕೂಗ ತೊಡಗಿದರು. ಸ್ಥಳಕ್ಕೆ ಆಗಮಿಸಿದ ಪೊಲೀಸರ ಮನವೊಲಿಸುವ ಯತ್ನ ಫಲಿಸಲಿಲ್ಲ. ಈ ವೇಳೆ ಸಿಪಿಐ ರವಿಕುಮಾರ ಕಪ್ಪತ್ತನ್ನವರ್‌, ಪಿಎಸೈ ಜಿ.ಎಸ್‌. ಪಾಟೀಲ ನೀವು ಫ್ಲೆಕ್ಸ್‌ ಅಳವಡಿಸಲು ಪುರಸಭೆಯ ಅನುಮತಿಯನ್ನೇ ಪಡೆದುಕೊಂಡಿಲ್ಲ ಎಂದು ತಕರಾರು ಮಾಡಿದ್ದು ಎಲ್ಲರ ಅಸಹನೆಗೆ ಕಾರಣವಾಯಿತು. ಮಾತಿನ ಚಕಮಕಿ ಶುರುವಾದಾಗ ಪೊಲೀಸರು ಕಾರ್ಯಕರ್ತರನ್ನು ಚದುರಿಸಲು
ಮುಂದಾದರು.

ಇದರಿಂದ ಆಕ್ರೋಶಗೊಂಡ ಮುಖಂಡರಾದ ಪರಶುರಾಮ ಪವಾರ, ಜಗನ್ನಾಥ ಗೌಳಿ, ರಾಜೇಂದ್ರ ರಾಯಗೊಂಡ, ಮಾಣಿಕಚಂದ ದಂಡಾವತಿ, ಸಂಜೀವ ಬಾಗೇವಾಡಿ, ರಾಜಶೇಖರ ಹೊಳಿ, ಪುನೀತ ಹಿಪ್ಪರಗಿ, ರಾಜು ಮ್ಯಾಗೇರಿ, ಸಂತೋಷ ರಾಠೊಡ, ರಾಘವೇಂದ್ರ ಪತ್ತಾರ, ಶಿವಬಸು ಸಜ್ಜನ, ಮಹಾಂತೇಶ ಮೇಟಿ, ಸಂತೋಷ ಹೂಗಾರ ಮತ್ತಿತರರು ಕಿಡಿಗೇಡಿಗಳ ವಿರುದ್ಧಧಿಕ್ಕಾರ ಕೂಗಿದರು. ಈ ವೇಳೆ ಪೊಲೀಸರು, ಹಿಂದೂ ಮುಖಂಡರ ನಡುವೆ ಮಾತಿನ ಚಕಮಕಿ ನಡೆಯಿತು.

ಕೊನೆಗೆ ಹಿಂದೂ ಕಾರ್ಯಕರ್ತರ ಮನವೊಲಿಸಿ ಫ್ಲೆಕ್ಸ್‌ ಕೆಳಗಿಳಿಸುವಲ್ಲಿ ಯಶಸ್ವಿಯಾದ ಪೊಲೀಸರು ಎಲ್ಲರನ್ನೂ ಠಾಣೆಗೆ ಬರಹೇಳಿದ್ದರಿಂದ ಎಲ್ಲರೂ ಘಟನೆಗೆ ಕಾರಣ ಎನ್ನಲಾದ ಒಂದು ಕೋಮಿನ ವಿರುದ್ಧಧಿಕ್ಕಾರ ಕೂಗುತ್ತ ಕೂಗುತ್ತ ಠಾಣೆಗೆ ತೆರಳಿ ಕಿಡಿಗೇಡಿಗಳನ್ನು ಶೀಘ್ರ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.