ಹೊರಗುತ್ತಿಗೆ ನೌಕರರ ವೇತನ ಬಿಡುಗಡೆ ಮಾಡಿ

Team Udayavani, Oct 30, 2020, 7:14 PM IST

ಹೊರಗುತ್ತಿಗೆ ನೌಕರರ ವೇತನ ಬಿಡುಗಡೆ ಮಾಡಿ

ವಿಜಯಪುರ: ಸರ್ಕಾರಿ ವಸತಿ ನಿಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರ ಬಾಕಿ ವೇತನ ಬಿಡುಗಡೆಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್‌ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಸಮಿತಿ ವತಿಯಿಂದ ಜಿಪಂ ಎದುರು ಧರಣಿ ಸತ್ಯಾಗ್ರಹ ನಡೆಯಿತು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಸಂಘಟನೆ ರಾಜ್ಯ ಉಪಾಧ್ಯಕ್ಷ ಭೀಮಶಿ ಕಲಾದಗಿ, ಜಿಲ್ಲೆಯ ಐದು ತಾಲೂಕಿನ ಹೊರ ಗುತ್ತಿಗೆ ಆಧಾರದ ಮೇಲೆ ದುಡಿಯುತ್ತಿರುವ “ಡಿ’ ಗ್ರೂಪ್‌ ನೌಕರರ ವೇತನ ಬಾಕಿ ಇದ್ದು, ಈ ಮೂರು ಇಲಾಖೆಯಲ್ಲಿ ಕೆಲವೊಂದು ಇಲಾಖೆಯಲ್ಲಿ ಮಾರ್ಚ್‌ ತಿಂಗಳಿಂದ ಇಲ್ಲಿಯವರೆಗೆ ಬಾಕಿ ವೇತನ ನೀಡಿಲ್ಲ. ಇದರಿಂದ ಈ ಎಲ್ಲ ನೌಕರರು ತಮ್ಮ ಕುಟುಂಬದ ನಿರ್ವಹಣೆ ಮಾಡುವುದು ಕಷ್ಟಕರವಾಗುತ್ತಿದೆ. ಅದೇ ರೀತಿ ನೌಕರರಿಗೆ ನ್ಯಾಯಯುತವಾಗಿ ಸಂದಬೇಕಾದ ಪಿಎಫ್‌ ಹಣವೂ ಸರಿಯಾಗಿ ಜಮಾವಣೆಯಾಗಿಲ್ಲ ಎಂದು ದೂರಿದರು. ಸಂಘದ ಜಿಲ್ಲಾದ್ಯಕ್ಷ ಹುಲಗಪ್ಪ ಚಲವಾದಿ

ಮಾತನಾಡಿ, ಬಾಕಿ ವೇತನ ಹಾಗೂ ವಿವಿಧ ಬೇಡಿಕೆ ಈಡೇರಿಸುವಂತೆ ಹಲವಾರು ಬಾರಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ಇದರಿಂದಾಗಿ ನಾವೆಲ್ಲರೂ ತೀವ್ರ ತೊಂದರೆ ಎದುರಿಸುತ್ತಿದ್ದೇವೆ. ಹೊರಗುತ್ತಿಗೆ ಪದ್ದತಿ ರದ್ದುಪಡಿಸಿ ಇಲಾಖೆಗಳಿಂದ ನೇರವಾಗಿ ವೇತನ ನೀಡುವ ವ್ಯವಸ್ಥೆಯಾದರೆ ಮಾತ್ರ ಹೊರಗುತ್ತಿಗೆ ನೌಕರರ ಸಮಸ್ಯೆ ದೂರವಾಗುತ್ತದೆ. ಈ

ನಿಟ್ಟಿನಲ್ಲಿ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಬೇಕು. ಅದೇ ತೆರನಾಗಿ ಎಲ್ಲ ಅಗತ್ಯ ವಸ್ತುಗಳ ದುಬಾರಿ ಆಗಿರುವುರಿಂದ ಹಾಸ್ಟೆಲ್‌ ಹೊರ ಗುತ್ತಿಗೆ ನೌಕರರ ಸಂಬಳ 25 ಸಾವಿರ ರೂ.ಕ್ಕೆ ನಿಗದಿಪಡಿಸಬೇಕು. ಮುಖ್ಯಮಂತ್ರಿಗಳು ಘೋಷಣೆ ಮಾಡಿದಂತೆ ಹೊರಗುತ್ತಿಗೆ ನೌಕರರಿಗೆ ಲಾಕ್‌ಡೌನ್‌ ಅವಧಿಯಲ್ಲಿ ಸಂಪೂರ್ಣ ವೇತನ ನೀಡಬೇಕು. 2020 ಮಾರ್ಚ್‌ ತಿಂಗಳಿಂದ ಇಲ್ಲಿಯವರೆಗೆ ಬಾಕಿ ಉಳಿದಿರುವ ವೇತನ ನೀಡಬೇಕು. ಯಾವುದೇ ಇಲಾಖೆಯಲ್ಲಿ ಕಾಯಂ ನೌಕರರು ನಿವೃತ್ತಿ ಹೊಂದಿದ ಸ್ಥಳಕ್ಕೆ ಈಗಿರುವ ಹೊರಗುತ್ತಿಗೆ ನೌಕರರನ್ನು ನೇಮಕಗೊಳಿಸಬೇಕು ಎಂದು ಬೇಡಿಕೆ ಮಂಡಿಸಿದರು.

ಲಕ್ಷ್ಮಣ ಹಂದ್ರಾಳ, ರಮೇಶ ಆಸಂಗಿ, ಪ್ರದೀಪ ದಳವಾಯಿ, ರಾಜೇಶ ದೇಶಪಾಂಡೆ, ಆನಂದ ಹಾದಿಮನಿ, ಪವಾಡೆಪ್ಪ ಚಲವಾದಿ, ಕಾಶೀಮ ಆಲದಾಳ, ಲಕ್ಷ್ಮಣ ಮಸಳಿ, ಯಮನಪ್ಪ ಬಜಂತ್ರಿ, ಮಲ್ಲಿಕಾರ್ಜುನ ಚಲವಾದಿ, ಶಿವಾನಂದ ಮೇಲಿನಕೇರಿ, ದಾನಮ್ಮ ಹೂಗಾರ, ನೂರಜಾನ ಎಲಗಾರ, ಗೌರಕ್ಕ ಬೀಳೂರ, ಶಾಂತಾ ಕ್ವಾಟಿ, ಬೋರಮ್ಮ ಎಲ್‌.ಜಿ., ಬೇಬಿ ಹೊಸಮನಿ, ಲಕ್ಷಿ ¾à ಮಂಗಸೂಳಿ ಪಾಲ್ಗೊಂಡಿದ್ದರು.

 ಧರಣಿ ಸ್ಥಳಕ್ಕೆ ಜಿಪಂ ಅಧ್ಯಕ್ಷೆ-ಸಿಇಒ ಭೇಟಿ : ಧರಣಿ ಸ್ಥಳಕ್ಕೆ ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಸುಜಾತಾ ಕಳ್ಳಿಮನಿ ಭೇಟಿ ನೀಡಿ ಮನವಿ ಸ್ವೀಕರಿಸಿ ಅಹವಾಲು ಆಲಿಸಿದರು. ಹೊರಗುತ್ತಿಗೆ ನೌಕರರ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಭರವಸೆ ನೀಡಿದರು. ಸಿಇಒ ಗೋವಿಂದ ರೆಡ್ಡಿಯೂ ಮನವಿ ಸ್ವೀಕರಿಸಿ, ಹೊರಗುತ್ತಿಗೆ ನೌಕರರ ಸಮಸ್ಯೆ ಬಗೆಹರಿಸಲು ಉನ್ನತ ಮಟ್ಟದ ಸಭೆ ಕರೆದು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಭರವಸೆ ನೀಡಿದರು.

ಟಾಪ್ ನ್ಯೂಸ್

ವಿಶ್ವ ಚಾಂಪಿಯನ್‌ಶಿಪ್‌: ಮೊದಲ ಬಾರಿ ಸೈನಾ ನೆಹ್ವಾಲ್‌ ಗೈರು

ವಿಶ್ವ ಚಾಂಪಿಯನ್‌ಶಿಪ್‌: ಮೊದಲ ಬಾರಿ ಸೈನಾ ನೆಹ್ವಾಲ್‌ ಗೈರು

ಜೂನಿಯರ್‌ ವಿಶ್ವಕಪ್‌ ಹಾಕಿ: ಭಾರತ ಸೆಮಿಫೈನಲ್‌ಗೆ ಲಗ್ಗೆ

ಜೂನಿಯರ್‌ ವಿಶ್ವಕಪ್‌ ಹಾಕಿ: ಭಾರತ ಸೆಮಿಫೈನಲ್‌ಗೆ ಲಗ್ಗೆ

ನವೆಂಬರ್‌ ಜಿಎಸ್‌ಟಿ ಸಂಗ್ರಹ 1.31 ಲಕ್ಷ ಕೋ.ರೂ.

ನವೆಂಬರ್‌ ಜಿಎಸ್‌ಟಿ ಸಂಗ್ರಹ 1.31 ಲಕ್ಷ ಕೋ.ರೂ.

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌100 ರೂ. ಏರಿಕೆ

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌100 ರೂ. ಏರಿಕೆ

ಕತ್ರಿನಾ-ವಿಕ್ಕಿ ಮದುವೆ ಆಹ್ವಾನಿತರಿಗೆ ಇದೆಯಂತೆ ಟಫ್ ರೂಲ್ಸ್‌

ಕತ್ರಿನಾ-ವಿಕ್ಕಿ ಮದುವೆ ಆಹ್ವಾನಿತರಿಗೆ ಇದೆಯಂತೆ ಟಫ್ ರೂಲ್ಸ್‌

ವೃದ್ಧರೇ ಅಂತರಾಷ್ಟ್ರೀಯ ಪ್ರಯಾಣ ಮುಂದೂಡಿ : ವಿಶ್ವ ಆರೋಗ್ಯ ಸಂಸ್ಥೆಯಿಂದಲೇ ಎಚ್ಚರಿಕೆ

ವೃದ್ಧರೇ ಅಂತರಾಷ್ಟ್ರೀಯ ಪ್ರಯಾಣ ಮುಂದೂಡಿ : ವಿಶ್ವ ಆರೋಗ್ಯ ಸಂಸ್ಥೆಯಿಂದಲೇ ಎಚ್ಚರಿಕೆ

ಬಿಹಾರದ ದೇಗುಲಗಳಿಗೆ ಶೇ. 4 ತೆರಿಗೆ! ರಾಜ್ಯ ಸರ್ಕಾರದ ನಿರ್ಧಾರ

ಬಿಹಾರದ ದೇಗುಲಗಳಿಗೆ ಶೇ. 4 ತೆರಿಗೆ! ರಾಜ್ಯ ಸರ್ಕಾರದ ನಿರ್ಧಾರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-g

‘ಗೇಮ್ ಓವರ್’, ‘ಗೇಮ್ ಸ್ಟಾರ್ಟ್’ ಮದುವೆಯಲ್ಲಿ ಗಮನ ಸೆಳೆದ ಬರಹ !!

24teachers

ಶಿಕ್ಷಕರ ವರ್ಗಾವಣೆ ಸಮಸ್ಯೆ-ಪ್ರತಿಭಟನೆ

23indian

ಸಂವಿಧಾನ ನಮಗೆಲ್ಲ ದಾರಿದೀಪ

22constitution

ವಿಶ್ವದಲ್ಲೇ ನಮ್ಮ ಸಂವಿಧಾನ ಶ್ರೇಷ್ಠ

21protest

ಸರ್ಕಾರದ ವಿರುದ್ದ ವಿದ್ಯಾರ್ಥಿಗಳ ತೀವ್ರ ಆಕ್ರೋಶ

MUST WATCH

udayavani youtube

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

udayavani youtube

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

udayavani youtube

ತುಂಗಭದ್ರಾ ನದಿಯಿಂದ ಹಳ್ಳಗಳಿಗೆ ಬಂದ ಮೊಸಳೆ! ಜನರಲ್ಲಿ ಆತಂಕ

udayavani youtube

ದಾಂಡೇಲಿ :ತಹಶೀಲ್ದಾರ್ ಕಚೇರಿ ಆವರಣದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ

udayavani youtube

ಮನೆ ಮಂದಿ ಬರುವಿಕೆಗಾಗಿ ದಾಂಡೇಲಿಯ ಬಸ್ ನಿಲ್ದಾಣದಲ್ಲಿ ಕಾಯುತ್ತಿರುವ ವಯೋವೃದ್ದೆ

ಹೊಸ ಸೇರ್ಪಡೆ

ವಿಶ್ವ ಚಾಂಪಿಯನ್‌ಶಿಪ್‌: ಮೊದಲ ಬಾರಿ ಸೈನಾ ನೆಹ್ವಾಲ್‌ ಗೈರು

ವಿಶ್ವ ಚಾಂಪಿಯನ್‌ಶಿಪ್‌: ಮೊದಲ ಬಾರಿ ಸೈನಾ ನೆಹ್ವಾಲ್‌ ಗೈರು

ಜೂನಿಯರ್‌ ವಿಶ್ವಕಪ್‌ ಹಾಕಿ: ಭಾರತ ಸೆಮಿಫೈನಲ್‌ಗೆ ಲಗ್ಗೆ

ಜೂನಿಯರ್‌ ವಿಶ್ವಕಪ್‌ ಹಾಕಿ: ಭಾರತ ಸೆಮಿಫೈನಲ್‌ಗೆ ಲಗ್ಗೆ

ನವೆಂಬರ್‌ ಜಿಎಸ್‌ಟಿ ಸಂಗ್ರಹ 1.31 ಲಕ್ಷ ಕೋ.ರೂ.

ನವೆಂಬರ್‌ ಜಿಎಸ್‌ಟಿ ಸಂಗ್ರಹ 1.31 ಲಕ್ಷ ಕೋ.ರೂ.

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌100 ರೂ. ಏರಿಕೆ

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌100 ರೂ. ಏರಿಕೆ

ಕತ್ರಿನಾ-ವಿಕ್ಕಿ ಮದುವೆ ಆಹ್ವಾನಿತರಿಗೆ ಇದೆಯಂತೆ ಟಫ್ ರೂಲ್ಸ್‌

ಕತ್ರಿನಾ-ವಿಕ್ಕಿ ಮದುವೆ ಆಹ್ವಾನಿತರಿಗೆ ಇದೆಯಂತೆ ಟಫ್ ರೂಲ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.