ಸಾರಾಯಿ ಅಂಗಡಿ ಬಂದ್‌ ಮಾಡಿಸಿ

Team Udayavani, Jul 10, 2021, 7:13 PM IST

kjhghjhgghjhgghjhg

ದೇವರಹಿಪ್ಪರಗಿ: ಬಡ ಕುಟುಂಬಗಳಿಗೆ ಕಂಟಕವಾಗಿರುವ ಗ್ರಾಮದ ಸರ್ಕಾರಿ ಸಾರಾಯಿ ಅಂಗಡಿಯ ಪರವಾನಗಿ ರದ್ದು ಪಡಿಸಿ ಶಾಶ್ವತವಾಗಿ ಮುಚ್ಚುವಂತೆ ಆಗ್ರಹಿಸಿ ಮಹಿಳೆಯರು ಗ್ರಾಮ ಪಂಚಾಯತ್‌ಗೆ ಬೀಗ ಜಡಿದು ಪ್ರತಿಭಟಿಸಿದರು.

ತಾಲೂಕಿನ ಮುಳಸಾವಳಗಿ ಗ್ರಾಪಂ ಆವರಣಕ್ಕೆ ಶುಕ್ರವಾರ ಆಗಮಿಸಿದ್ದ ಗ್ರಾಮದ ನೂರಾರು ಮಹಿಳೆಯರು ಸರ್ಕಾರಿ ಸಾರಾಯಿ ಅಂಗಡಿಯಿಂದ ತಮ್ಮ ಕುಟುಂಬದ ಸುಃಖ, ಶಾಂತಿ ಮಾಯವಾಗಿದ್ದು, ಸಾರಾಯಿ ಅಂಗಡಿ ಪರವಾನಗಿ ರದ್ದುಪಡಿಸಲು ಆಗ್ರಹಿಸಿದರು. ಈ ವೇಳೆ ಬಸಮ್ಮ ನಾಯೊRàಡಿ ಹಾಗೂ ಶಾಂತಾಬಾಯಿ ಸಾಲೋಡಗಿ ಮಾತನಾಡಿ, ಗ್ರಾಮದಲ್ಲಿ ಕಳೆದ ಎರಡು ವರ್ಷದ ಹಿಂದೆ ಯಾವುದೇ ಸಾರಾಯಿ ಅಂಗಡಿ ಇರಲಿಲ್ಲ. ಆಗ ಗ್ರಾಮ ಶಾಂತಮಯವಾಗಿತ್ತು. ಯಾವಾಗ ಸರ್ಕಾರದ ಸಾರಾಯಿ ಅಂಗಡಿ ಆರಂಭಗೊಂಡಿತೋ ಅಂದಿನಿಂದ ಗ್ರಾಮದಲ್ಲಿ ನೆಮ್ಮದಿ ಮಾಯವಾಗಿದೆ.

ಪ್ರತಿ ಕುಟುಂಬದಲ್ಲಿ ಕುಡಿತಕ್ಕೆ ಒಳಗಾಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಕಳೆದ ವರ್ಷ ಯುವಕನೊಬ್ಬ ಕುಡಿದು ಅಂಗಡಿ ಮುಂದೆಯೇ ಮೃತಪಟ್ಟ ಘಟನೆ ಜರುಗಿದೆ. ಹೀಗಿರುವಾಗ ಗ್ರಾಮಕ್ಕೆ ಸರಾಯಿ ಅಂಗಡಿ ಬೇಕೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೋವಿಡ್‌ ಲಾಕ್‌ಡೌನ್‌ ಹಾಗೂ ಹಬ್ಬದ ದಿನಗಳಲ್ಲಿ ಹೆಚ್ಚಿನ ಬೆಲೆಗೆ ಸಾರಾಯಿ ಮಾರಾಟಕ್ಕೆ ಮುಂದಾಗುತ್ತಾರೆ. ಬಡ ಕುಟುಂಬಗಳ ಗಂಡಸರು ತಾವು ದುಡಿದ ಹಣವನ್ನೆಲ್ಲ ಕುಡಿತಕ್ಕೆ ಖರ್ಚು ಮಾಡಿದ್ದು, ಮಕ್ಕಳು ಸೇರಿದಂತೆ ಕುಟುಂಬಸ್ಥರು ಹಸಿವೆಯಲ್ಲಿ ಕಾಲ ಕಳೆಯುವಂತಾಗಿದೆ.

ಹೀಗಾದರೇ ಬಾಳುವೆ ಮಾಡುವುದಾದರೂ ಹೇಗೆ? ನಾವು ಹೆಣ್ಣುಮಕ್ಕಳು ದುಡಿದದ್ದನ್ನು ಸಹ ಗಂಡಸರು ಕಸಿದುಕೊಂಡು ಕುಡಿಯಲು ಖರ್ಚು ಮಾಡುತ್ತಿದ್ದು, ಕೂಡಲೇ ನಮ್ಮ ಬಡಕುಟುಂಬಗಳಿಗೆ ಕಂಟಕವಾದ ಸರ್ಕಾರಿ ಸಾರಾಯಿ ಅಂಗಡಿ ಪರವಾನಗಿ ರದ್ದು ಮಾಡಿ ಗ್ರಾಮದಿಂದ ತೆರುವುಗೊಳಿಸಬೇಕು ಎಂದು ಆಗ್ರಹಿಸಿದರು. ಒಂದು ವೇಳೆ ಯಾವುದೇ ಕ್ರಮ ಕೈಗೊಳ್ಳದಿದ್ದಲ್ಲಿ ಉಗ್ರಹೋರಾಟ ನಡೆಸುವುದಾಗಿ ಎಚ್ಚರಿಸಿದರು.

ನಂತರ ಪಿಡಿಒ ಮಹೇಶ ಬಗಲಿ ಅವರಿಗೆ ಮನವಿ ಸಲ್ಲಿಸಿದರು. ಬೋರಮ್ಮ ರೂಗಿ, ಮಹಾದೇವಿ ತಳವಾರ, ಗೀತಾ ನಾಯೊRàಡಿ, ಸತ್ಯಮ್ಮ ಬೂದಿಹಾಳ, ಯಮನವ್ವ ತಳವಾರ, ಚನ್ನಮ್ಮ ಬೂದಿಹಾಳ, ಸರಸ್ವತಿ ನಾಟೀಕಾರ, ಶೋಭಾ ನಾಟೀಕಾರ, ಸಾಬವ್ವ ಗಬ್ಬೂರ, ಜಯಶ್ರೀ ಸಿಂದಗಿ, ಕಮಲಾಬಾಯಿ ತಳವಾರ, ಜ್ಯೋತಿ ನಾಯೊಡಿ, ಯಲ್ಲಮ್ಮ ರಬಿನಾಳ, ಬಾಳವ್ವ ನಾಗಠಾಣ, ಭಾಗವ್ವ ಕಲಬುರ್ಗಿ, ಸವಿತಾ ಖ್ಯಾಡಗಿ, ಸುನಂದಾ ಬಾಗೇವಾಡಿ ಸೇರಿದಂತೆ ನೂರಕ್ಕೂ ಹೆಚ್ಚು ಮಹಿಳೆಯರು ಇದ್ದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.