ಉತ್ತಮ ಫಲಿತಾಂಶಕ್ಕೆ ಗುಣಮಟ್ಟದ ಶಿಕ್ಷಣ ನೀಡಲು ಪಾಟೀಲ ಸಲಹೆ


Team Udayavani, Jul 13, 2017, 12:07 PM IST

13-BJP-1.jpg

ವಿಜಯಪುರ: ವಿಜಯಪುರ ಜಿಲ್ಲೆ ಎಸ್ಸೆಸ್ಸೆಲ್ಸಿ ಹಾಗೂ ಪಿಯು ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಗಳಿಸಬೇಕಿದ್ದರೆ ಪ್ರಾಥಮಿಕ ಹಂತದಲ್ಲೇ ಅಗತ್ಯ ಸೌಕರ್ಯ ಸಹಿತ ಗುಣಮಟ್ಟದ ಶಿಕ್ಷಣ ಕೊಡಲು ಮುಂದಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ 
ಡಾ| ಎಂ.ಬಿ. ಪಾಟೀಲ ಸೂಚಿಸಿದರು.

ಜಿಲ್ಲಾಡಳಿತ, ಜಿಪಂ ಸಾರ್ವಜನಿಕ ಹಾಗೂ ಪಪೂ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಹಕ್ಕುಗಳ ರಕ್ಷಣಾ ಇಲಾಖೆ ಸಹಯೋಗದಲ್ಲಿ ನಗರದ ಕಂದಗಲ್‌ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಿದ್ದ 2017-18ನೇ ಸಾಲಿನ ಎಸ್ಸೆಸ್ಸೆಲ್ಸಿ. ಮತ್ತು ಪಿಯುಸಿ ಫಲಿತಾಂಶ ಸುಧಾರಣೆ, ಪ್ರೌಢಶಾಲೆ, ಪಪೂ ಕಾಲೇಜ್‌ಗಳಲ್ಲಿ ಡಿಜಿಟಲ್‌ ಕ್ಲಾಸ್‌ ರೂಂ ಅಳವಡಿಕೆ ಕುರಿತ ಸಭೆಯಲ್ಲಿ ಅವರು ಮಾತನಾಡಿದರು. ಜನ್ಮತಃ ಯಾವುದೇ ಮಗು ಬುದ್ಧಿವಂತ ಅಥವಾ ದಡ್ಡನೂ ಆಗಿರುವುದಿಲ್ಲ. ಅವರವರ ಪರಿಸರ, 
ಕೌಟುಂಬಿಕ ಸ್ಥಿತಿ, ಸಾಮಾಜಿಕ ವ್ಯವಸ್ಥೆ ಅವರ ಶಿಕ್ಷಣದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಹೀಗಾಗಿ ಒಂದನೇ ತರಗತಿಯಿಂದಲೇ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿದಲ್ಲಿ ಪ್ರತಿ ಮಗುವಿನ ಶೈಕ್ಷಣಿಕ ಭವಿಷ್ಯಕ್ಕೆ ಭದ್ರ ಬುನಾದಿ ಆಗಲಿದೆ. ಅದುವೇ ಜಿಲ್ಲೆಯ ಎಸ್ಸೆಸ್ಸೆಲ್ಸಿ-ಪಿಯು ಫಲಿತಾಂಶದಲ್ಲಿ ರಾಜ್ಯದಲ್ಲೇ ವಿಜಯಪುರ ಜಿಲ್ಲೆ ವಿಶೇಷ ಸ್ಥಾನ ಪಡೆಯಲು ಸಾಧ್ಯವಿದೆ ಎಂದರು.

ಜಿಲ್ಲೆಯು ಕಳೆದ ಮೂರು ವರ್ಷಗಳಿಗಿಂತ ಈ ವರ್ಷ ರ್‍ಯಾಂಕ್‌ ಪಟ್ಟಿಯಲ್ಲಿ 20ನೇ ಸ್ಥಾನ ಪಡೆದಿದೆ. ಆದರೆ ಟಾಪ್‌ 10ರಲ್ಲಿ ಸ್ಥಾನ ಪಡೆಯುವ ಅರ್ಹತೆ ತಂದುಕೊಳ್ಳಬೇಕು. ಇದಕ್ಕಾಗಿ ಶಿಕ್ಷಕರು ಶಿಕ್ಷಣಲ್ಲಿ ಆಧುನಿಕ ತಂತ್ರಜ್ಞಾನ, ಹೊಸ ತರಬೇತಿ ವಿಧಾನ ಅಳವಡಿಸಿಕೊಳ್ಳಬೇಕು. ನಿಯಮಿತವಾಗಿ ಯೂನಿಟ್‌ ಟೆಸ್ಟ್‌ ನಡೆಸಿ ಮಕ್ಕಳಿಗೆ ಪರೀಕ್ಷಾ ಭಯ ಹೋಗಲಾಡಿಸುವ ಜೊತೆಗೆ ಓದುವ  ಆಸಕ್ತಿ ಮೂಡಿಸಬೇಕು ಎಂದರು. ನಿಗದಿತ ಸಮಯಕ್ಕೆ ಸರಿಯಾಗಿ ಪಠ್ಯಕ್ರಮ ಮುಗಿಸಿ, ಅದಕ್ಕೆ ತಕ್ಕಂತೆ ಮಕ್ಕಳಿಗೆ ಪರೀಕ್ಷೆ ಆಯೋಜಿಸಬೇಕು. ನ್ಯೂನ್ಯತೆ ಕಂಡುಬಂದಲ್ಲಿ ಶಿಕ್ಷಣದಲ್ಲಿ ಹಿಂದೆ ಉಳಿಯುವ ಮಕ್ಕಳಿಗೆ ಒತ್ತು ನೀಡಲು ನೆರವಾಗುತ್ತದೆ ಎಂದರು.

ಖಾಸಗಿ ಶಾಲೆಗಳು ನೂರಕ್ಕೆ ನೂರರಷ್ಟು ಫಲಿತಾಂಶ ಪಡೆಯುವ ಮಾದರಿಯಲ್ಲೇ ಸರ್ಕಾರಿ ಶಾಲೆಗಳಲ್ಲೂ ಶೈಕ್ಷಣಿಕ ಸೌಲಭ್ಯಗಳನ್ನು ಅಳವಡಿಸಿಕೊಂಡು ವಿಷಯ ಪರಿಣಿತರನ್ನು ಕರೆಸಿ ವಿಶೇಷ ಉಪನ್ಯಾಸ ಕೊಡಿಸಬೇಕು. ಅಗತ್ಯವಿದ್ದರೆ ಶಿಕ್ಷಕರಿಗೆ ವಿಶ್ವವಿದ್ಯಾಲಯಗಳ ವಿಷಯ ಪರಿಣಿತ ಪ್ರಾಧ್ಯಾಪಕರಿಂದ ತರಬೇತಿ ಕೊಡಿಸಿ ಶಿಕ್ಷಕರ ಮೌಲ್ಯಮಾಪನ ಮಾಡಿಸಬೇಕು. ಗ್ರಾಮೀಣ ಮಕ್ಕಳು ಶಾಲೆಗೆ ತೊರೆಯದಂತೆ ಪಾಲಕರ ಮನವೊಲಿಸುವ, ಮಕ್ಕಳನ್ನು ಮರಳಿ ಶಾಲೆಗೆ ಕರೆತಂದು, ಸರ್ಕಾರಿ ಶಾಲೆಗಳ ಮಕ್ಕಳು ಖಾಸಗಿ ಶಾಲೆಗಳ ಮಕ್ಕಳಿಗಿಂತ ಕಡಿಮೆ ಇಲ್ಲ ಎಂಬಂತೆ ಆತ್ಮವಿಶ್ವಾಸ ಮೂಡಿಸಬೇಕು  ಎಂದು ಸಲಹೆ ನೀಡಿದರು.ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆ ಡಾ| ಕೃಪಾ ಆಳ್ವಾ ಮಾತನಾಡಿ, ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸದಿದ್ದರೆ ಮಕ್ಕಳಿಗೆ ಮಾಡುವ ವಂಚನೆ. ಪ್ರತಿ ಮಗುವಿಗೂ ಶಿಕ್ಷಣ ಪಡೆಯುವ ಹಕ್ಕುಗಳನ್ನು ರಕ್ಷಿಸುವ ಜೊತೆಗೆ ಬಾಲಕಾರ್ಮಿಕ ಪದ್ಧತಿ, ಬಾಲ್ಯ ವಿವಾಹದಂಥ ಸಮಸ್ಯೆಗಳಿಂದ ಮುಕ್ತಗೊಳಿಸುವ ಕೆಲಸ ಮಾಡಬೇಕು ಎಂದರು. 

ಶಿಕ್ಷಣ ಇಲಾಖೆ ನಮ್ಮ ಆಯೊಗದ ಜೊತೆ ಕೈ ಜೋಡಿಸಿದರೆ ವಿದ್ಯಾವಂತ ಮಕ್ಕಳಿಂದ ಸದೃಢ ಸಮಾಜ ನಿರ್ಮಿಸಬಹುದು. ಶಿಕ್ಷಣ ವಂಚಿತ ಮಕ್ಕಳ ಮೇಲೆ ಹೆಚ್ಚು ದೌರ್ಜನ್ಯ ನಡೆಯಲಿದ್ದು, ಪ್ರಶ್ನಿಸುವ  ತಿಳಿವಳಿಕೆ, ಧೈರ್ಯವೂ ಇರುವುದಿಲ್ಲ. ಶಿಕ್ಷಣ ಮಾತ್ರ ಮಕ್ಕಳಿಗೆ ಆತ್ಮವಿಶ್ವಾಸ ತುಂಬುತ್ತದೆ ಎಂದರು.

ಟಾಪ್ ನ್ಯೂಸ್

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.