ಢವಳಗಿ ಹೆಸ್ಕಾ ಸ್ಟೇಶನ್‌ ಗೆ ಮುತ್ತಿಗೆ

Team Udayavani, Mar 26, 2021, 7:29 PM IST

nbnnvbn

ಮುದ್ದೇಬಿಹಾಳ : ಸಮರ್ಪಕ ತ್ರಿಫೇಸ್‌ ವಿದ್ಯುತ್‌ ನೀಡುವಂತೆ ಆಗ್ರಹಿಸಿ ಮಡಿಕೇಶ್ವರ, ಪಡೇಕನೂರ ಗ್ರಾಮಸ್ಥರು ಗುರುವಾರ ಢವಳಗಿಯಲ್ಲಿರುವ ಹೆಸ್ಕಾಂ 33 ಕೆ.ವಿ ವಿದ್ಯುತ್‌ ಸ್ಟೇಶನ್‌ಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ಈ ವೇಳೆ ಕಚೇರಿಯಲ್ಲಿದ್ದ ಹೆಸ್ಕಾಂ ಅ ಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಗ್ರಾಮಸ್ಥರು ವಿದ್ಯುತ್‌ ಸಮಸ್ಯೆ ಬಗೆಹರಿಸುವವರೆಗೂ ಸ್ಥಳದಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದು ಸ್ಟೇಶನ್‌ ಕಾಂಪೌಂಡ್‌ ಹೊರಗೆ ಧರಣಿ ಕುಳಿತರು. ಸ್ಥಳಕ್ಕೆ ದೌಡಾಯಿಸಿದ ಮುದ್ದೇಬಿಹಾಳ ಸಿಪಿಐ ಆನಂದ ವಾಘ್ಮೋಡೆ, ಪಿಎಸೈ ಎಂ.ಬಿ. ಬಿರಾದಾರ ನೇತೃತ್ವದ ಡಿಆರ್‌ ಪೊಲೀಸರು ರೈತರು, ಗ್ರಾಮಸ್ಥರನ್ನು ನಿಭಾಯಿಸುವಲ್ಲಿ ಹೈರಾಣಾದರು. ಢವಳಗಿ ಸ್ಟೇಶನ್‌ ವ್ಯಾಪ್ತಿಯ ರೈತರಿಗೆ ಬೆಳೆಗಳಿಗೆ ನೀರುಣಿಸಲು ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಸತತ 4 ಗಂಟೆ ಗುಣಮಟ್ಟದ ವಿದ್ಯುತ್‌ ಕೊಡಲು ಸರ್ಕಾರ ವ್ಯವಸ್ಥೆ ಮಾಡಿದೆ. ಆದರೆ ಢವಳಗಿ ಹೋಬಳಿಯಲ್ಲಿ ಇದು ಸಮರ್ಪಕವಾಗಿ ಜಾರಿಯಾಗಿಲ್ಲ. ಇದರಿಂದಾಗಿ ಹೋಬಳಿ ವ್ಯಾಪ್ತಿಯ ಬಹುತೇಕ ರೈತರು ಬೆಳೆಗಳಿಗೆ ನೀರುಣಿಸುವುದು ಸಾಧ್ಯವಾಗುತ್ತಿಲ್ಲ. ಹೀಗಾಗಿ ಬೆಳೆಗಳು ಒಣಗುತ್ತಿವೆ. ಈ ಬಗ್ಗೆ ವಾರದ ಹಿಂದೆ ಮನವಿ ಸಲ್ಲಿಸಿ ಸಮಸ್ಯೆ ಬಗೆಹರಿಸುವಂತೆ ಕೋರಿದ್ದರೂ ಸ್ಪಂದನೆ ದೊರೆತಿಲ್ಲ ಎಂದು ಪ್ರತಿಭಟನಾನಿರತ ರೈತರ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ದಿನಕ್ಕೆ 4 ಗಂಟೆ ಬದಲಿಗೆ ಮೂರುವರೆ ಗಂಟೆ ವಿದ್ಯುತ್‌ ಕೊಟ್ಟರೂ ಮೇಲಿಂದ ಮೇಲೆ ಸಾಕಷ್ಟು ಬಾರಿ ಅನಿಯಮಿತತನ ಇರುತ್ತದೆ. ಮೋಟರ್‌ ಚಾಲು ಮಾಡಿ ನೀರು ಹರಿಸಬೇಕೆನ್ನುವಷ್ಟರಲ್ಲಿ ವಿದ್ಯುತ್‌ ಕಡಿತಗೊಂಡಿರುತ್ತದೆ. ಇದರಿಂದಾಗಿ ಬೆಳೆಗಳಿಗೆ ನೀರು ಹಾಯಿಸುವುದು ಇರಲಿ, ಮೋಟಾರ್‌ ಉಳಿಸಿಕೊಳ್ಳುವುದೇ ಸಾಹಸದ ಕೆಲಸವಾಗುತ್ತಿದೆ ಎಂದು ದೂರಿದರು.

ಕೆಲ ತಿಂಗಳ ಹಿಂದೆ 350-400ವರೆಗೆ ಓಲ್ಟೆàಜ್‌ ವಿದ್ಯುತ್‌ ಪೂರೈಕೆಯಾಗುತ್ತಿತ್ತು. ಇದೀಗ ಅದು ಕೇವಲ 160-200 ಓಲ್ಟೇಜ್‌ಗೆ ಇಳಿದಿದೆ. ಇದರಿಂದ ಪಂಪ್‌ಸೆಟ್‌ಗಳು ಚಾಲೂ ಆಗುತ್ತಿಲ್ಲ. ಢವಳಗಿಯಲ್ಲೇ 33 ಕೆ.ವಿ ಸ್ಟೇಶನ್‌ ಇದ್ದರೂ ಯಾವೊಬ್ಬ ಅಧಿಕಾರಿ ಸಮಸ್ಯೆ ಬಗೆಹರಿಸಲು ಮುಂದೆ ಬರುತ್ತಿಲ್ಲ. ಸಮಸ್ಯೆ ಇದೆ ಬನ್ನಿ ಎಂದು ಕರೆದಾಗ ಮಾತ್ರ ಕರೆದವರ ಹೊಲಕ್ಕೆ ಬಂದು ನೋಡುತ್ತಾರೆಯೇ ಹೊರತು ಸಾಮೂಹಿಕವಾಗಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜೆಇ, ಹೆಲ್ಪರ್‌ ವರ್ಗಾಯಿಸಲು ಪಟ್ಟು: ಗ್ರಾಮಸ್ಥರೊಂದಿಗೆ ಅನುಚಿತವಾಗಿ ನಡೆದುಕೊಳ್ಳುತ್ತಿರುವ ಢವಳಗಿ ಸ್ಟೇಶನ್‌ ಜೆಇ ಶ್ರೀದೇವಿ ಹೊನ್ನಾಕಟ್ಟಿ, ಸ್ಟೇಶನ್‌ ಹೆಲ್ಪರ್‌ ಸಂಗಮೇಶ ಹಡಪದ ಅವರನ್ನು 24 ಗಂಟೆಯೊಳಗೆ ಬೇರೆಡೆ ವರ್ಗಾಯಿಸಬೇಕೆಂದು ಪ್ರತಿಭಟನಾಕಾರರು ಪಟ್ಟು ಹಿಡಿದರು. ವಿದ್ಯುತ್‌ ಸಮಸ್ಯೆ ಬಗೆಹರಿಸಿ ಎಂದು ಕೇಳಲು ಹೋದವರೊಂದಿಗೆ ಅನುಚಿತವಾಗಿ ನಡೆದುಕೊಂಡು, ಅಸಭ್ಯ ಭಾಷೆ ಬಳಸಿ ಮಾತನಾಡುವ ಇವರ ಬಗ್ಗೆ ಸಹಿಸಲು ಸಾಧ್ಯವಿಲ್ಲವೆಂದು ದೂರಿದರು.

ಈ ಕುರಿತು ತಾಳಿಕೋಟೆ ಹೆಸ್ಕಾಂ ಎಇಇ ತುಕಾರಾಮ ರಾಠೊಡ ಅವರಿಗೆ ಲಿಖೀತ ಮನವಿಯನ್ನೂ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಜುಗೌಡ ಪಾಟೀಲ, ವಿಜಯಕುಮಾರ ದೇಸಾಯಿ, ರಾಮನಗೌಡ ಬಿರಾದಾರ, ಬಸವರಾಜ ಸಿಂಹಾಸನ, ಪ್ರಭು ಬಿರಾದಾರ, ಪ್ರಭು ಹೂಗಾರ, ತಮ್ಮಣ್ಣ ಬೇಲಾಳ, ಮಾಂತು ಹಡಪದ, ಚನ್ನಪ್ಪಗೌಡ ಬಿರಾದಾರ, ಶಾಂತು ವಡವಡಗಿ, ಅಪ್ಪು ಕೊಣ್ಣೂರ, ರಾಜು ಚಿಗರಿ, ಮುತ್ತು ಬಿರಾದಾರ ಸೇರಿದಂತೆ ಮಡಿಕೇಶ್ವರ, ಪಡೇಕನೂರ ಭಾಗದ ನೂರಾರು ರೈತರು, ಗ್ರಾಮಸ್ಥರು ಇದ್ದರು.

ಟಾಪ್ ನ್ಯೂಸ್

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.