ನಾಳೆ ಮತ ಎಣಿಕೆಗೆ ಸಕಲ ಸಿದ್ಧತೆ

Team Udayavani, May 22, 2019, 11:12 AM IST

Udayavani Kannada Newspaper

ವಿಜಯಪುರ: ಪರಿಶಿಷ್ಟ ಜಾತಿಗೆ ಮೀಸಲಾಗಿರುವ ವಿಜಯಪುರ ಲೋಕಸಭಾ ಕ್ಷೇತ್ರದ ಚುನಾವಣೆ ಮತ ಎಣಿಕೆ ಮೇ 23ರಂದು ನಗರದಲ್ಲಿರುವ ಸೈನಿಕ ಶಾಲೆಯಲ್ಲಿ ನಡೆಯಲಿದೆ. ಲೋಕಸಭೆ ವ್ಯಾಪ್ತಿಯ 8 ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿ ಮತಗಳನ್ನು ಎಣಿಕೆ ಮಾಡಲು ಮೂರು ಕೋಣೆಗಳಲ್ಲಿ ವಿಧಾನಸಭೆ ವಾರು ತಲಾ 14 ಟೇಬಲ್ ವ್ಯವಸ್ಥೆ ಮಾಡಲಾಗಿದೆ. ಮತ ಎಣಿಕೆಗೆ ಸಕಲ ಸಿದ್ಧತೆ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಎಂ.ಕನಗವಲ್ಲಿ ತಿಳಿಸಿದರು.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಲೋಕಸಭೆ ಚುನಾವಣೆಯ ವಿಜಯಪುರ ಕ್ಷೇತ್ರ ಮತ ಎಣಿಕೆಯ ಸಿದ್ಧತೆಗಳ ಕುರಿತು ಮಾಹಿತಿ ನೀಡಿದ ಅವರು, ಮೊದಲು ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿ ಚಲಾಯಿಸಿದ ಹಾಗೂ ಸೇವಾ ನಿರತ ಸಿಬ್ಬಂದಿ ಚಲಾಯಿಸಿ ಮತಪತ್ರಗಳ ಎಣಿಕೆ ನಡೆಯಲಿದೆ. ಈ ಮತಗಳ ಎಣಿಕೆಗೆ 4 ಟೇಬಲ್ ವ್ಯವಸ್ಥೆ ಮಾಡಲಾಗಿದೆ.

ಇದರ ಹೊರತಾಗಿ 8 ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಸುತ್ತುಗಳಲ್ಲಿ ಮತ ಎಣಿಕೆ ನಡೆಯಲಿದೆ. ಮುದ್ದೇಬಿಹಾಳ ಕ್ಷೇತ್ರ ವ್ಯಾಪ್ತಿಯಲ್ಲಿ 17 ಸುತ್ತು, ದೇವರಹಿಪ್ಪರಗಿ ಕ್ಷೇತ್ರ ವ್ಯಾಪ್ತಿಯಲ್ಲಿ 18 ಸುತ್ತು, ಬಸವನಬಾಗೇವಾಡಿ ಕ್ಷೇತ್ರ ವ್ಯಾಪ್ತಿಯಲ್ಲಿ 17, ಬಬಲೇಶ್ವರ ಕ್ಷೇತ್ರ ವ್ಯಾಪ್ತಿಯಲ್ಲಿ 18 ಸುತ್ತು, ವಿಜಯಪುರ ನಗರ ಕ್ಷೇತ್ರ ವ್ಯಾಪ್ತಿಯಲ್ಲಿ 19 ಸುತ್ತು, ನಾಗಠಾಣ ಕ್ಷೇತ್ರ ವ್ಯಾಪ್ತಿಯಲ್ಲಿ 22 ಸುತ್ತು, ಇಂಡಿ ಕ್ಷೇತ್ರ ವ್ಯಾಪ್ತಿಯಲ್ಲಿ 20 ಸುತ್ತು, ಸಿಂದಗಿ ಕ್ಷೇತ್ರ ವ್ಯಾಪ್ತಿಯಲ್ಲಿ 19 ಸುತ್ತುಗಳಲ್ಲಿ ಇವಿಎಂಗಳ ಮತ ಎಣಿಕೆ ನಡೆಯಲಿದೆ ಎಂದು ವಿವರಿಸಿದರು.

ಮೇ 23ರಂದು ಬೆಳಗ್ಗೆ 7ಕ್ಕೆ ಭದ್ರತಾ ಕೋಣೆಗಳಿಂದ ಮತಯಂತ್ರಗಳನ್ನು ತೆರೆಯಲಿದ್ದು, ಬೆಳಗ್ಗೆ 8ಕ್ಕೆ ಮತ ಎಣಿಕೆ ಕಾರ್ಯ ಆರಂಭಗೊಳ್ಳಲಿದೆ. ಚುನಾವಣಾ ಆಯೋಗದ ನಿರ್ದೇಶನದಂತೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಏಜೆಂಟರ ಎದುರು 5 ಮತಗಟ್ಟೆಗಳ ವಿವಿ ಪ್ಯಾಟ್‌ಗಳ ಚೀಟಿ ಎಣಿಕೆ ಮಾಡಿ ಮತದಾನ ಮಾಡಿರುವ ಮತಯಂತ್ರದ ಸಂಖ್ಯೆಗೆ ತಾಳೆ ಮಾಡಲಾಗುತ್ತದೆ ಎಂದು ವಿವರಿಸಿದರು.

ಮತ ಎಣಿಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಪ್ರತಿ ವಿಧಾನಸಭಾ ಕ್ಷೇತ್ರವಾರು 18 ಜನ ಮತ ಎಣಿಕೆ ಮೇಲ್ವಿಚಾರಕ, 18 ಜನ ಮತ ಎಣಿಕೆ ಸಹಾಯಕ ಹಾಗೂ 18 ಜನ ಮೈಕ್ರೋ ಆಬ್ಸ್ರ್ವರ್‌ ನೇಮಕ ಮಾಡಲಾಗಿದ್ದು, ಒಟ್ಟಾರೆಯಾಗಿ 144 ಮತಎಣಿಕೆ ಮೇಲ್ವಿಚಾರಕ, 144 ಮತ ಎಣಿಕೆ ಸಹಾಯಕ ಹಾಗೂ 144 ಮೈಕ್ರೋ ಆಬ್ಸ್ರ್ವರ್‌ ನಿಯೋಜಿಸಲಾಗಿದೆ ಎಂದರು.

32 ಜನ ಟ್ಯಾಬುಲೇಷನ್‌ ಸಿಬ್ಬಂದಿ, 40 ಜನ ಸೀಲಿಂಗ್‌ ಸಿಬ್ಬಂದಿ, ಇವಿಎಂಗಳನ್ನು ಟೇಬಲ್ಗಳಿಗೆ ಸಾಗಿಸಲು 128 ಸಿಬ್ಬಂದಿ ಹಾಗೂ 24 ಜನ ಹಾಜರಾತಿ ಪಡೆಯುವ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ವಿವರಿಸಿದರು. ಪೋಸ್ಟಲ್ ಬ್ಯಾಲೆಟ್ ಎಣಿಕೆಗಾಗಿ ಪ್ರತ್ಯೇಕವಾಗಿ 20 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದರು.

ಮತಎಣಿಕೆ ಕೇಂದ್ರದಲ್ಲಿ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ ಸೇರಿದಂತೆ ಚುನಾವಣಾ ಏಜೆಂಟರಾದಿಯಾಗಿ ಯಾರೊಬ್ಬರು ಮೊಬೈಲ್ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಮತ ಎಣಿಕೆಗೆ ನೇಮಕಗೊಂಡಿರುವ ಪಾಸ್‌ ಹೊಂದಿದ ಏಜೆಂಟರಿಗೆ ಸೈನಿಕ ಶಾಲೆಯ ಎರಡನೇ ಗೇಟ್ನಿಂದ ಪ್ರವೇಶ ಕಲ್ಪಿಸಲಾಗುತ್ತದೆ. ಮೊದಲನೇ ಗೇಟ್ ಮೂಲಕ ಅಭ್ಯರ್ಥಿಗಳು, ಚುನಾವಣಾ ಮತ ಎಣಿಕೆ ಕರ್ತವ್ಯಕ್ಕೆ ನಿಯೋಜಿತ ಸಿಬ್ಬಂದಿ, ಎಣಿಕೆ ಕೇಂದ್ರಕ್ಕೆ ಪ್ರವೇಶಿಸುವ ಅಧಿಕೃತ ಪತ್ರ ಹೊಂದಿರುವ ಪತ್ರಕರ್ತರನ್ನು ಮಾತ್ರ ಮತ ಎಣಿಕೆ ಕೇಂದ್ರಕ್ಕೆ ಪ್ರವೇಶ ನೀಡಲಾಗುತ್ತಿದೆ.

ಮತ ಎಣಿಕೆ ಪ್ರಕ್ರಿಯೆ ಹಿನ್ನೆಲೆಯಲ್ಲಿ ಕಾನೂನು-ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮುಂಜಾಗೃತಾ ಕ್ರಮವಾಗಿ ಮೇ 22ರಂದು ಮಧ್ಯರಾತ್ರಿಯಿಂದ 23ರ ಮಧ್ಯರಾತ್ರಿ ವರೆಗೆ ವಿಜಯಪುರ ಜಿಲ್ಲೆಯಲ್ಲಿ ಪಾನ ನಿರೋಧ ದಿನ ಎಂದು ಘೋಷಿಸಲಾಗಿದೆ ಎಂದರು.

ಸ್ವೀಪ್‌ ಸಮಿತಿ ಅಧ್ಯಕ್ಷ ಜಿಪಂ ಸಿಇಒ ವಿಕಾಸ ಸುರಳಕರ, ಎಸ್ಪಿ ಪ್ರಕಾಶ ನಿಕ್ಕಂ ಪತ್ರಿಕಾಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು

Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು

court

Vijayapura: ಪೋಕ್ಸೋ ಆರೋಪಿಗೆ 5 ವರ್ಷ, ಗಾಂಜಾ ಬೆಳದವನಿಗೆ 3 ವರ್ಷ ಜೈಲು ಶಿಕ್ಷೆ

9-muddebihala

SSLC Result: ರಾಜ್ಯಕ್ಕೆ 3, ಜಿಲ್ಲೆಗೆ ಮೊದಲ ಸ್ಥಾನ ಪಡೆದ ಪವಿತ್ರಾ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.