ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹ

Team Udayavani, Sep 27, 2018, 10:03 AM IST

vij-1.jpg

ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ರಫೇಲ್‌ ಯುದ್ಧ ವಿಮಾನ ಖರೀದಿಯಲ್ಲಿ ಭಾರಿ ಭ್ರಷ್ಟಾಚಾರ ಎಸಗಿದ್ದು ಕೂಡಲೇ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಕಾಂಗ್ರೆಸ್‌ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿ ಗಾಂಧಿ ವೃತ್ತದ ಮುಂಭಾಗದಲ್ಲಿ ಪ್ರಧಾನಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾಜಿ ಶಾಸಕ ವಿಠ್ಠಲ ಕಟಕದೊಂಡ ಮಾತನಾಡಿ, ಪ್ರಧಾನಿ ಮೋದಿ ಅವರು ದೇಶದ ಪ್ರತಿ ಪ್ರಜೆಗಳಿಗೆ ಬರಿ ಸುಳ್ಳನ್ನು ಬಿಂಬಿಸುತ್ತಾ ಜನರಿಗೆ ಮೋಸ ಮಾಡುತ್ತ ಹೊರಟಿದ್ದಾರೆ. ಈಗ ಫ್ರಾನ್ಸ್‌ ದೇಶದ ಮಾಜಿ ಅಧ್ಯಕ್ಷ ಪ್ರಾಂಕೊಯ್ಸ ಹೊಲೆಂಡ್‌ರವರು ತಮ್ಮ ಹೇಳಿಕೆಯಲ್ಲಿ ರಫೇಲ್‌ ಯುದ್ಧ ವಿಮಾನದ ಖರೀದಿಯಲ್ಲಿ ಎಲ್ಲಿವರೆಗೆ ಅಂಬಾನಿ ಕಂಪನಿಯವರಿಗೆ ಪಾಲುದಾರರಾಗಿ ಸೇರಿಸುವುದಿಲ್ಲವೊ ಅಲ್ಲಿವರೆಗೆ ಈ ಡೀಲ್‌ಗೆ ಸಹಿ ಹಾಕಲ್ಲ ಅಂತ ಒತ್ತಡ ಹಾಕಿ ಸುಮಾರು 1.30 ಲಕ್ಷ ಕೋಟಿ ರೂ. ಡೀಲ್‌ನಲ್ಲಿ ಅಂಬಾನಿ ಕಂಪನಿಗೆ ಸೇರಿಸಿದ್ದು ಬಹಿರಂಗವಾಗಿದೆ. ಇಷ್ಟೆಲ್ಲ ಆದ ಈ ಡೀಲ್‌ನಲ್ಲಿ ಭಾರತದ ಪ್ರಧಾನಿ ತಮ್ಮ ಪಾಲು ಸಹ ಇದರಲ್ಲಿ ಇಟ್ಟಿರುವುದು ಜಗಜ್ಜಾಹೀರಾಗಿದೆ. ಈ ಸರಕಾರ ಕಾರ್ಪೋರೇಟರಗಳ ಪರವಾಗಿದ್ದು ಮುಂದೆ ಬರುವ ಲೋಕಸಭೆ ಚುನಾವಣೆಯಲ್ಲಿ ಜನ ಇವರಿಗೆ ತಕ್ಕ ಪಾಠ ಕಲಿಸಿ ಇವರನ್ನು ಮನೆಗೆ ಕಳುಹಿಸಲಿದ್ದಾರೆ ಎಂದರು.

ಕೆಪಿಸಿಸಿ ಕಾರ್ಯದರ್ಶಿ ರಾಜಶೇಖರ ಮೆಣಸಿನಕಾಯಿ ಮಾತನಾಡಿ, ಮೋದಿ ಅವರು ಸಬ್‌ ಕಾ ಸಾಥ ಸಬ್‌ ಕಾ ವಿಕಾಸ ಅನುವ ಘೋಷಣೆ ಅಡಿಯಲ್ಲಿ ಸಬ್‌ ಕಾ ಸಾಥ್‌ ಅಪನಾ ವಿಕಾಸ ಮಾಡಿಕೊಳ್ಳುತ್ತಿದ್ದಾರೆ. ಮಾತೆತ್ತಿದ್ದರೆ ಮನ್‌ ಕೀ ಬಾತ್‌ ಅಂತಾ ತಮ್ಮ ಮನ್‌ ಕೀ ಬಾತನ್ನೆ ಹೇಳುತ್ತಿರುವ ಪ್ರಧಾನಿ ಜನರ ಮನ್‌ ಕೀ ಬಾತ್‌ ಕೇಳಲು ತಯಾರಿಲ್ಲ. ಸಾಮಾನ್ಯ ಜನರ ಮೇಲೆ ನೋಟ್‌ ಬ್ಯಾನ್‌, ಗಬ್ಬರ್‌ಸಿಂಗ್‌ ಟ್ಯಾಕ್ಸ್‌ ನಂತಹ ಹೊರೆಗಳನ್ನು ಹಾಕಿ ಅಂಬಾನಿ, ಅದಾನಿ, ಮಿತ್ತಲ್‌ನಂತಹ ಕೆಲವು ಕಾರ್ಪೊರೇಟರಗಳ ಪರವಾಗಿ ಕೆಲಸ ಮಾಡುತ್ತಿರುವ ಪ್ರಧಾನಿ ರಫೇಲ್‌ ಡೀಲ್‌ ಹೊಣೆ ಹೊತ್ತು ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ರವಿಗೌಡ ಪಾಟೀಲ ಧೂಳಖೇಡ ಮಾತನಾಡಿ, ನರೇಂದ್ರ ಮೋದಿಯವರು ದೇಶದ ಆರ್ಥಿಕ ಪರಿಸ್ಥಿತಿ ಹಾಳುಗೆಡವಿ ದೇಶಕ್ಕೆ ಗಂಡಾಂತರ ತಂದೊಡ್ಡುವ ದಿನ ದೂರವಿಲ್ಲ. ಇವರ ತಪ್ಪು ಆರ್ಥಿಕ ನಿರ್ಧಾರಗಳಿಂದ ದೇಶದಲ್ಲಿ ಪೆಟ್ರೋಲಿಯಂ ದರಗಳು ಗಗನಕ್ಕೇರಿ ಜನರ ಜೀವನ ದುಸ್ತರವಾಗಿದೆ. ನಾನೊಬ್ಬ ನಿಷ್ಠಾವಂತ ನನ್ನನ್ನು ನಂಬಿ ಅಂತ ಜನರನ್ನು ಮಾತಿನಲ್ಲಿ ಮರಳು ಮಾಡಿ ಅಧಿಕಾರಕ್ಕೆ ಬಂದ ಪ್ರಧಾನಿ ಇಂದು ರಫೇಲ್‌ ಡೀಲ್‌ನಲ್ಲಿ ಭಾಗಿಯಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆಪಿಸಿಸಿ ಕಾರ್ಯದರ್ಶಿ ಎಂ.ಎಲ್‌. ಶಾಂತಗಿರಿ, ಅಬ್ದುಲ್‌ಹಮೀದ್‌ ಮುಶ್ರೀಫ್‌, ಕಾಂತಾ ನಾಯಕ, ಜಮೀರ್‌ಅಹ್ಮದ ಭಕ್ಷಿ, ವೈಜನಾಥ ಕರ್ಪೂರಮಠ, ಮಹಾದೇವಿ ಗೋಕಾಕ, ಅಬ್ದುಲ್‌ ಖಾದಿರ ಖಾದಿಂ, ಮಂಜುಳಾ ಗಾಯಕವಾಡ, ಡಾ| ಗಂಗಾಧರ ಸಂಖಂಣ್ಣಿ, ಮೊಹ್ಮದ ರಫಿಕ್‌ ಟಪಾಲ, ಇದ್ರುಸ್‌ ಭಕ್ಷಿ, ಜಮೀರ ಬಾಂಗಿ, ಚಾಂದಸಾಬ ಗಡಗಲಾವ, ಶ್ರೀದೇವಿ ಉತ್ಲಾಸಕರ, ದತ್ತಾತ್ರೇಯ ಆಲಮೇಲಕರ, ಎಸ್‌.ಎಂ. ಪಾಟೀಲ ಗಣಿಹಾರ, ಸಾಹೇಬಗೌಡ ಬಿರಾದಾರ, ವಸಂತ ಹೊನಮೊಡೆ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.